• search
  • Live TV
ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೇಳಿದ ಅರ್ಧದಷ್ಟೂ ಬರ ಪರಿಹಾರ ಕೊಟ್ಟಿಲ್ಲ ಕೇಂದ್ರ: ದೇಶಪಾಂಡೆ ಬೇಸರ

|

ಬೆಳಗಾವಿ, ಜನವರಿ 29: ಈ ವರ್ಷದ ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಿ ತಲೆದೋರಿದ ಬರ ಪರಿಸ್ಥಿತಿ ನಿರ್ವಹಣೆಗೆ ಕೇಂದ್ರ ಸರಕಾರವು ಕೇವಲ 949.49 ಕೋಟಿ ರೂ.ಗಳನ್ನು ಮಾತ್ರ ಬಿಡುಗಡೆ ಮಾಡಿರುವುದಕ್ಕೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿನ ಬರಪೀಡಿತ ಪ್ರದೇಶಗಳಿಗೆ ಇಂದು ಭೇಟಿ ನೀಡಿರುವ ಸಚಿವರು, ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕೇಳಿದ್ದು 2432 ಕೋಟಿ ಆದರೆ ಸಿಕ್ಕಿರಿವುದು 949 ಕೋಟಿ ಎಂದರು.

ಕೇಂದ್ರದಿಂದ ಕರ್ನಾಟಕಕ್ಕೆ 949 ಕೋಟಿ ರೂ. ಬರ ಪರಿಹಾರ

'ಮುಂಗಾರು ಹಂಗಾಮಿನಲ್ಲಿ ರಾಜ್ಯದ 100 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿತ್ತು. ಅಲ್ಲದೆ, ವಾಸ್ತವವಾಗಿ 16,600 ಕೋಟಿ ರೂ.ಗಳಿಗಿಂತಲೂ ಹೆಚ್ಚು ನಷ್ಟವಾಗಿದೆ. ಅದರಂತೆ, ಕೇಂದ್ರದ ಮಾನದಂಡಗಳ ಪ್ರಕಾರವೇ ರಾಜ್ಯ ಸರಕಾರವು 2,434 ಕೋಟಿ ರೂ. ಪರಿಹಾರ ನೀಡುವಂತೆ 2018ರ ಅಕ್ಟೋಬರ್ 29ರಂದು ಮನವಿ ಸಲ್ಲಿಸಿತ್ತು. ಆದರೆ ಈಗ ಕೇವಲ 949.49 ಕೋಟಿ ರೂ.ಗಳನ್ನು ಮಾತ್ರ ಕೊಟ್ಟಿರುವುದು ಸಮಾಧಾನ ತಂದಿಲ್ಲ' ಎಂದಿದ್ದಾರೆ.

'ರಾಜ್ಯವು ಸತತವಾಗಿ ಬರಗಾಲಕ್ಕೆ ತುತ್ತಾಗುತ್ತಿದ್ದು, ಪರಿಸ್ಥಿತಿ ತುಂಬಾ ಗಂಭೀರವಾಗಿದೆ. ಇನ್ನೊಂದೆಡೆ, ರಾಜ್ಯದಲ್ಲಿ ಹಿಂಗಾರು ಮಳೆಯೂ ಕೈಕೊಟ್ಟಿದ್ದು ಈ ಅವಧಿಗೆ ಅನ್ವಯವಾಗುವಂತೆ 156 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಆದ್ದರಿಂದ ಕೇಂದ್ರ ಸರಕಾರವು ರಾಜ್ಯಕ್ಕೆ ಇನ್ನೂ ಹೆಚ್ಚಿನ ನೆರವು ನೀಡಬೇಕು,'' ಎಂದು ದೇಶಪಾಂಡೆ ಆಗ್ರಹಿಸಿದ್ದಾರೆ.

ಬರ ತಾಲೂಕುಗಳಿಗೆ ಹೆಚ್ಚುವರಿ 50 ಲಕ್ಷ ಅನುದಾನ: ದೇಶಪಾಂಡೆ ಘೋಷಣೆ

'ರಾಜ್ಯದ ಅನೇಕ ಭಾಗಗಳಲ್ಲಿ ಕುಡಿಯುವ ನೀರು ಮತ್ತು ಮೇವಿನ ಸಮಸ್ಯೆ ತಲೆದೋರಿದ್ದು, ಜನರು ಗುಳೆ ಹೋಗದಂತೆ ತಡೆಯಲು ಉದ್ಯೋಗ ಸೃಷ್ಟಿ ಮಾಡಬೇಕಾದ ಜರೂರೂ ಎದುರಾಗಿದೆ. ಅಲ್ಲದೇ, ರಾಜ್ಯದ ಜನ ತೀವ್ರ ಬರಗಾಲದಿಂದ ಕಂಗೆಟ್ಟಿದ್ದಾರೆ. ಇದನ್ನು ಎದುರಿಸಲು ರಾಜ್ಯ ಸರಕಾರ ಸಮರೋಪಾದಿಯಲ್ಲಿ ಪರಿಹಾರ ಕ್ರಮಗಳನ್ನು ಕೈಗೊಂಡಿದೆ. ಆದರೆ, ಭೀಕರ ಬರಗಾಲವನ್ನು ಎದುರಿಸಲು ಕೇಂದ್ರದ ನೆರವು ಕೂಡ ಅಗತ್ಯ ಪ್ರಮಾಣದಲ್ಲಿ ಬೇಕಾಗಿದೆ,'' ಎಂದು ಕಂದಾಯ ಸಚಿವರು ಹೇಳಿದ್ದಾರೆ.

ಬರ ಪರಿಸ್ಥಿತಿಯನ್ನು ನಿಭಾಯಿಸಲು ತ್ವರಿತವಾಗಿ ಹಣ ಬಿಡುಗಡೆ ಮಾಡುವಂತೆ ಕೋರಿ ದೇಶಪಾಂಡೆಯವರು ಈ ತಿಂಗಳ 10ರಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿದ್ದನ್ನು ಇಲ್ಲಿ ಸ್ಮರಿಸಬಹುದು.

ಅಲ್ಲದೆ, ಹಿಂಗಾರು ಹಂಗಾಮಿನಲ್ಲಿ ತಲೆದೋರಿದ ಭೀಕರ ಬರಗಾಲದಿಂದಾದ ನಷ್ಟವನ್ನು ಅಂದಾಜಿಸಿ ಕೇಂದ್ರಕ್ಕೆ ಸಲ್ಲಿಸಲು ಮೆಮೊರಾಂಡಮ್ ಸಿದ್ಧಪಡಿಸುತ್ತಿದ್ದು, ಸದ್ಯದಲ್ಲೇ ಕೇಂದ್ರಕ್ಕೆ ವಿವರವಾದ ವರದಿ ಸಲ್ಲಿಸಲಾಗುವುದೆಂದೂ ಸಚಿವರು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Revenue minister RV Deshpande said central government given very less drought relief fund to Karnataka. We asked for 2434 crore and they given 949 crore.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more