ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ ಸಂಕಷ್ಟದಲ್ಲಿ ಚೀನಾ ನರಿ ಬುದ್ದಿ ತೋರಿಸೋದು ಬಿಡಲಿ: ಕೇಂದ್ರ ಸಚಿವ

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಜೂನ್ 17: ಕೊರೊನಾ ವೈರಸ್ ನಿಂದಾಗಿ ಜಗತ್ತೇ ಸಂಕಷ್ಟದಲ್ಲಿರುವ ಸಮಯದಲ್ಲಿ, ಚೀನಾ ನರಿ ಬುದ್ದಿ ತೋರಿಸುವುದನ್ನು ಬಿಡಬೇಕು ಎಂದು ಕೇಂದ್ರ ರೇಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಎಚ್ಚರಿಕೆ ನೀಡಿದ್ದಾರೆ.

Recommended Video

History of India China border dispute | Oneindia Kannada

ಬೆಳಗಾವಿಯ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಭಾರತ ದೇಶಕ್ಕಾಗಿ ಪ್ರಾಣ ಕೊಟ್ಟು ಹುತಾತ್ಮರಾದ ಸೈನಿಕರಿಗೆ ಚಿರಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ. ಸೈನಿಕರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಕೊಡಲಿ ಎಂದು ಸುರೇಶ ಅಂಗಡಿ ಮೃತಯೋಧರಿಗೆ ಶ್ರದ್ಧಾಂಜಲಿ ಅರ್ಪಿಸಿದರು.

'ನಮ್ಮನ್ನು ಪ್ರಚೋದಿಸಿದರೆ ತಕ್ಕ ಉತ್ತರ ಕೊಡ್ತೇವೆ': ಚೀನಾಗೆ ಮೋದಿ ಖಡಕ್ ಎಚ್ಚರಿಕೆ'ನಮ್ಮನ್ನು ಪ್ರಚೋದಿಸಿದರೆ ತಕ್ಕ ಉತ್ತರ ಕೊಡ್ತೇವೆ': ಚೀನಾಗೆ ಮೋದಿ ಖಡಕ್ ಎಚ್ಚರಿಕೆ

ಇಡೀ ಜಗತ್ತು ಕೊರೊನಾ ವೈರಸ್ ನಿಂದ ತತ್ತರಿಸಿದೆ, ಇದನ್ನು ಅವಕಾಶವಾಗಿ ತೆಗೆದುಕೊಂಡು ಮತ್ತೆ ಚೀನಾ ನರಿ ಬುದ್ದಿ ತೋರಿಸಿದೆ. ಭಾರತದ 20 ಸೈನಿಕರು ಹುತಾತ್ಮರಾಗಿದ್ದು, ಭಾರತೀಯ ಯೋಧರು 43 ಜನ ಚೀನಾ ಸೈನಿಕರನ್ನು ಹೊಡೆದುರುಳಿಸಿದ್ದಾರೆ. ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಭಾರತೀಯ ಸೈನ್ಯ ಸನ್ನದವಾಗಿದೆ ಎಂದು ತಿಳಿಸಿದರು.

Central Minister Suresh Angadi React About India-China Clash

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ‌ ರಾಜನಾಥ್ ಸಿಂಗ್ ಸಭೆ ಮಾಡಿದ್ದಾರೆ, ಯಾರೂ ಹೇದರುವ ಅವಶ್ಯಕತೆ ಇಲ್ಲ, ಪರಿಸ್ಥಿತಿಯನ್ನು ಅತ್ಯಂತ ಸಮರ್ಥವಾಗಿ ಎದುರಿಸುತ್ತೇವೆ ಎಂದು ಕೇಂದ್ರ ಸಚಿವ ಸುರೇಶ ಅಂಗಡಿ ಹೇಳಿದರು.

ಜವಾಹರಲಾಲ್ ನೆಹರೂ ಕಾಲದಿಂದ ಇಲ್ಲಿಯವರೆಗೂ ಚೀನಾ ತನ್ನ ನೀಚ ಬುದ್ದಿ ಬಿಟ್ಟಿಲ್ಲ, ಇಂದಾದರೂ ಚೀನಾ ತನ್ನ ನೀಚ ಬುದ್ದಿ ಬಿಡಬೇಕೆಂದು ಚೀನಾಕ್ಕೆ ಎಚ್ಚರಿಕೆ ನೀಡಿದರು.

ಯುದ್ಧ ಮಾಡುವ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಅಂತಹ ಪರಿಸ್ಥಿತಿ ಬಂದರೆ ಭಾರತ ಅದಕ್ಕೆ ಸನ್ನದ್ಧವಾಗಿದ್ದು, ಎಲ್ಲದಕ್ಕೂ ಭಾರತ ತಯಾರಿಯಲ್ಲಿದೆ ಎಂದರು. 1962 ರ ಪರಿಸ್ಥಿತಿ ಬೇರೆ, ಇವತ್ತಿನ ಪರಿಸ್ಥಿತಿ ಬೇರೆ ಇದೆ. 130 ಕೋಟಿ ಜನರು ನಮ್ಮ ಸೈನಿಕರ ಹಿಂದೆ ಇದ್ದಾರೆ. ಸೈನಿಕರ ಕುಟುಂಬಸ್ಥರು ಯಾರೂ ಆತಂಕಕ್ಕೊಳಗಾಗುವುದು ಬೇಡ ಎಂದರು.

ಲಡಾಖ್ ಗೆ ರೈಲು ಸಂಚಾರ ಸ್ಥಗಿತ ವಿಚಾರವನ್ನು ವಿಡಿಯೋ ಕಾನ್ಫರೆನ್ಸ್ ನಲ್ಲಿ ತೀರ್ಮಾನ ಮಾಡಲಾಗುತ್ತದೆ ಎಂದು ಬೆಳಗಾವಿಯಲ್ಲಿ ಕೇಂದ್ರ ರೇಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಹೇಳಿಕೆ ನೀಡಿದರು.

English summary
Union Railway Minister Suresh Angadi, offered Shraddhanjali to the dead soldiers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X