ರಾಜ್ಯದಲ್ಲಿ "ಲಿಂಗಾಯತ ಮಖ್ಯಮಂತ್ರಿ" ಕೂಗು: ಶಿವಾಚಾರ್ಯ ಸ್ವಾಮೀಜಿ ಹೇಳಿದ್ದೇನು?
ಬೆಳಗಾವಿ, ಜೂನ್, 28: ಇದೀಗ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕೂಗು ಜೋರಾಗಿ ಕೇಳಿಬರುತ್ತಿದೆ. ಇನ್ನು ಈ ಬಗ್ಗೆ ಚಿಕ್ಕೋಡಿಯಲ್ಲಿ ಮಾತನಾಡಿದ ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ದರಾಮ ಪಂಡಿತರಾದ್ಯ ಶಿವಾಚಾರ್ಯ ಸ್ವಾಮೀಜಿ ಏನು ಹೇಳಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಲಿಂಗಾಯತ ಮುಖ್ಯಮಂತ್ರಿಗೆ ಬೇಡಿಕೆ ಹೆಚ್ಚಾಗಿದೆ. ಮುಖ್ಯಮಂತ್ರಿ ಬದಲಾವಣೆ ಮಾಡುವುದಾದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಬೇಕು ಎಂದು ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ದರಾಮ ಪಂಡಿತರಾದ್ಯ ಶಿವಾಚಾರ್ಯ ಸ್ವಾಮೀಜಿ ಚಿಕ್ಕೋಡಿಯಲ್ಲಿ ಆಗ್ರಹಿಸಿದ್ದಾರೆ.

ಇನ್ನು ನಿನ್ನೆ (ಜೂನ್ 27) ಚಂದ್ರಶೇಖರ ಸ್ವಾಮೀಜಿ ಡಿ.ಕೆ ಶಿವಕುಮಾರಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುವಂತೆ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಇದೀಗ ಸ್ವಾಮೀಜಿಗಳ ಮೂಲಕವೇ ಲಿಂಗಾಯತ ಮುಖ್ಯಮಂತ್ರಿ ಕೂಗು ಎದ್ದಿದೆ.
ಚಿಕ್ಕೋಡಿಯ ಯಡೂರ ಗ್ರಾಮದಲ್ಲಿ ಶ್ರೀಶೈಲ ಜಗದ್ಗುರುಗಳಾದ ಶಿವಾಚಾರ್ಯ ಸ್ವಾಮೀಜಿ ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಸ್ಥಾನದಲ್ಲಿ ಬದಲಾವಣೆ ಹಾಗೂ ಡಿಸಿಎಂ ಸ್ಥಾನಗಳನ್ನು ಹೆಚ್ಚುವರಿ ಮಾಡಿದರೆ, ಲಿಂಗಾಯತರಿಗೆ ಹೆಚ್ಚಿನ ಸ್ಥಾನಗಳನ್ನು ನೀಡಬೇಕು. ಚುನಾವಣೆ ಸಂದರ್ಭದಲ್ಲಿ ಲಿಂಗಾಯತರು ಹೆಚ್ಚಿನ ಸಂಖ್ಯೆಯಲ್ಲಿ ಮತ ಹಾಕಿದ್ದಾರೆ ಎಂದು ಹೇಳಿದರು.
ಎಂ.ಬಿ.ಪಾಟೀಲ್, ಈಶ್ವರ ಖಂಡ್ರೆ, ಎಸ್.ಎಸ್.ಮಲ್ಲಿಕಾರ್ಜುನ್, ಶಾಮನೂರು ಶಿವಶಂಕರಪ್ಪ ಇಂತಹವರಿಗೆ ಅವಕಾಶ ನೀಡಬೇಕು. ಕಾಶಿ, ಉಜ್ಜಯಿನಿ, ಜಗದ್ಗುರುಗಳ ಜೊತೆಗೂ ಈ ವಿಚಾರದಲ್ಲಿ ಚರ್ಚೆ ಮಾಡಲಾಗಿದೆ ಎಂದು ಹೇಳಿದರು.
ಪೌರ ಕಾರ್ಮಿಕರಿಗೆ ನಿವೇಶನ ಭಾಗ್ಯ: ಗುಂಡ್ಲುಪೇಟೆ ಪಟ್ಟಣ ವ್ಯಾಪ್ತಿಯ 27 ಮಂದಿ ಖಾಯಂ ಪೌರ ಕಾರ್ಮಿಕರಿಗೆ ಲಾಟರಿ ಎತ್ತುವ ಮೂಲಕ ನಿವೇಶನಗಳ ಹಕ್ಕು ಪತ್ರವನ್ನು ಶಾಸಕ ಎಚ್.ಎಂ.ಗಣೇಶಪ್ರಸಾದ್ ಹಂಚಿಕೆ ಮಾಡಿದರು.
ಪುರಸಭೆ ಸಭಾ ಭವನದಲ್ಲಿ ಪೌರ ಕಾರ್ಮಿಕರ ಗೃಹ ಭಾಗ್ಯ ಯೋಜನೆಯಡಿ ಹಾಲಿ ಇರುವ 40 ಖಾಯಂ ಪೌರ ಕಾರ್ಮಿಕರ ಪೈಕಿ 27 ಮಂದಿಗೆ ಪಿಕೆಜಿಬಿ ಯೋಜನೆಯಡಿ, 21ನೇ ವಾರ್ಡ್‌ನ ಹುಣಸೇತೋಪು ಬಡಾವಣೆಯ ಹೊಸೂರು ರಸ್ತೆಯಲ್ಲಿ 20/30 ಅಳತೆಯಲ್ಲಿ ಗುರುತಿಸಲಾದ ನಿವೇಶನಗಳನ್ನು ವಿತರಣೆ ಮಾಡಲಾಯಿತು.
ಈ ವೇಳೆ ಶಾಸಕ ಎಚ್.ಎಂ.ಗಣೇಶಪ್ರಸಾದ್ ಮಾತನಾಡಿ, ಪೌರ ಕಾರ್ಮಿಕರು ಕೇವಲ ಸ್ವಚ್ಛತೆ ಮಾಡಲು ಮಾತ್ರ ಸೀಮಿತವಲ್ಲ ಎಂಬುದನ್ನು ಅರಿತುಕೊಳ್ಳಬೇಕು. 27 ಮಂದಿ ಖಾಯಂ ಪೌರಕಾರ್ಮಿಕರಿಗೆ ಪುರಸಭೆಯಿಂದ ಹಂಚಿಕೆ ಮಾಡಿರುವ ನಿವೇಶನಗಳನ್ನು ಉಪಯೋಗಿಕೊಂಡು ಮನೆ ನಿರ್ಮಾಣ ಮಾಡಿಕೊಳ್ಳಿ. ಮನೆ ಸಂಖ್ಯೆ ಹೆಚ್ಚಳವಾಗುತ್ತಿದ್ದಂತೆ ಬಳಕೆ ಮಾಡುವ ವಸ್ತುಗಳು ಸಹ ಹೆಚ್ಚಾಗಿದೆ. ಆದ್ದರಿಂದ ಪಟ್ಟಣ ಸುಂದರವಾಗಲು ಇನ್ನೂ ಹೆಚ್ಚಿನ ಒತ್ತು ಕೊಟ್ಟು ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ಪಟ್ಟಣದ ಅಭಿವೃದ್ಧಿಗೆ ಮಾಜಿ ಸಚಿವ ಎಚ್.ಎಸ್.ಮಹದೇವಪ್ರಸಾದ್ ಕೂಡ ಸಾಕಷ್ಟು ಕೆಲಸ ಮಾಡಿದ್ದಾರೆ. ಅವರನ್ನು ಪೌರ ಕಾರ್ಮಿಕರು ನೆನೆಪು ಮಾಡಿಕೊಳ್ಳುತ್ತಿರುವುದು ಖುಷಿಯ ಸಂಗತಿ. ಪೌರ ಕಾರ್ಮಿಕರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಕೊಡಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ. ಜೊತೆಗೆ ಮುಂದಿನ ದಿನಗಳಲ್ಲಿ ನಿಮಗೆ ಸಹಕಾರ ನೀಡಲು ಸಿದ್ದನಿದ್ದೇನೆ ಎಂದು ಅಭಯ ನೀಡಿದರು.
ಈ ವೇಳೆ ಆಡಳಿತಾಧಿಕಾರಿ ಹಾಗೂ ಉಪ ವಿಭಾಗಾಧಿಕಾರಿ ಮಹೇಶ್, ತಹಸೀಲ್ದಾರ್ ರಮೇಶ್ ಬಾಬು ಇತರರು ಹಾಜರಿದ್ದರು.












Click it and Unblock the Notifications