Chikkodi Lok Sabha constituency: ಸತೀಶ್ ಜಾರಕಿಹೊಳಿ ಪುತ್ರಿಗೆ ಚಿಕ್ಕೊಡಿ ಕಾಂಗ್ರೆಸ್ ಟಿಕೆಟ್
ಚಿಕ್ಕೋಡಿ, ಮಾರ್ಚ್, 21: ದೇಶದೆಲ್ಲೆಡೆ ಲೋಕಸಭಾ ಚುನಾವಣೆ ಗೆಲುವಿಗೆ ಭಾರೀ ಪೈಪೋಟಿಗಳು ನಡೆಯುತ್ತಿದೆ. ಹಾಗೆಯೇ ಇಂದು (ಮಾರ್ಚ್ 21) ಕರ್ನಾಟಕದ 17 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ ಮಾಡಿದೆ. ಈ ಪೈಕಿ ಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದೆ.
ಚಿಕ್ಕೋಡಿ ಕರ್ನಾಟಕ
ಲೋಕಸಭಾ ಕ್ಷೇತ್ರವು ಭಾರತದ ರಾಜಕಾರಣದಲ್ಲಿ ಹೆಸರುವಾಸಿಯಾದ ರಾಜಕೀಯ ಶಕ್ತಿ ಕೇಂದ್ರವಾಗಿದೆ. 2019ರ ಲೋಕಸಭಾ ಚುನಾವಣೆಯಲ್ಲಿ, ಇದು ತೀವ್ರ ಪೈಪೋಟಿಯ ಕದನಕ್ಕೆ ಸಾಕ್ಷಿಯಾಯಿತು. ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ್ ಜೊಳ್ಳೆ 2019ರ ಸಾರ್ವತ್ರಿಕ ಚುನಾವಣೆಯಲ್ಲಿ 1,18,877 ಮತಗಳ ಗೆಲುವಿನ ಅಂತರದಿಂದ ಗೆದ್ದರು. 6,45,017 ಮತಗಳನ್ನು ಗಳಿಸಿದರು. 5,26,140 ಮತಗಳನ್ನು ಪಡೆದ ಐಎನ್‌ಸಿಯ ಪ್ರಕಾಶ್ ಹುಕ್ಕೇರಿ ಅವರಿಗೆ ಅಣ್ಣಾಸಾಹೇಬ್ ಜೊಳ್ಳೆ ಸೋಲುಣಿಸಿದರು.

ಚಿಕ್ಕೋಡಿ ವೈವಿಧ್ಯಮಯ ಜನಸಮೂದಾಯವನ್ನು ಪ್ರತಿಬಿಂಬಿಸುತ್ತದೆ ಮತ್ತು ಕರ್ನಾಟಕ ನ ನಿರ್ಣಾಯಕ ಕ್ಷೇತ್ರವಾಗಿ ಉಳಿದಿದೆ. ಈ ಕ್ಷೇತ್ರದಲ್ಲಿ 2019ರಲ್ಲಿ 75.58 ಮತದಾನವಾಗಿದೆ. ಈಗ 2024ರಲ್ಲಿ ಮತದಾರರು ತಮ್ಮ ಮತದ ಶಕ್ತಿಯನ್ನು ತೋರಿಸಲು ಇನ್ನಷ್ಟು ಉತ್ಸುಕರಾಗಿದ್ದಾರೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರದ 2024 ಅಭ್ಯರ್ಥಿಗಳ ಪಟ್ಟಿಗೆ ಸಂಬಂಧಿಸಿದಂತೆ, ಬಿಜೆಪಿಯಿಂದ ಅಣ್ಣಾಸಾಹೇಬ ಶಂಕರ ಜೊಲ್ಲೆ ಪ್ರಮುಖ ಅಭ್ಯರ್ಥಿಗಳಾಗಿದ್ದಾರೆ.
ಈಗಾಗಲೇ ಭಾರತ ಚುನಾವಣಾ ಆಯೋಗವು 2024ರ ಲೋಕಸಭಾ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟ ಮಾಡಿದ್ದು, ಮಾರ್ಚ್ 16ರಿಂದ ಮಾದರಿ ನೀತಿ ಸಂಹಿತೆ ಜಾರಿ ಆಗಿದೆ. ರಾಜ್ಯದಲ್ಲಿ ಒಟ್ಟು 2 ಹಂತದಲ್ಲಿ ಚುನಾವಣೆಯನ್ನು ನಡೆಸಲು ಆಯೋಗವು ನಿರ್ಧರಿಸಿದ್ದು, 01-ಚಿಕ್ಕೋಡಿ ಲೋಕಸಭಾ ಕ್ಷೇತ್ರಕ್ಕೆ 2ನೇ ಹಂತದಲ್ಲಿ ಚುನಾವಣೆ ನಡೆಸಲಾಗುತ್ತಿದೆ.
ಚಿಕ್ಕೋಡಿ ಲೋಕಸಭಾ ಕ್ಷೇತ್ರ ಕುರಿತು ಏಪ್ರಿಲ್ 12ರಂದು ಅಧಿಸೂಚನೆ ಪ್ರಕಟ ಆಗಲಿದೆ. ನಾಮಪತ್ರಗಳನ್ನು ಸಲ್ಲಿಸಲು ಏಪ್ರಿಲ್ 19 ಕೊನೆಯ ದಿನ ಆಗಿದ್ದು, ಏಪ್ರಿಲ್ 20ಕ್ಕೆ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರಗಳನ್ನು ಹಿಂತೆಗೆದುಕೊಳ್ಳಲು ಏಪ್ರಿಲ್ 22 ಕೊನೆಯ ದಿನ ಆಗಿದೆ. ಮೇ 7ರಂದು ಮತದಾನ ಹಾಗೂ ಜೂನ್ 4ರಂದು ಮತ ಎಣಿಕೆ ನಡೆಯಲಿದೆ.
ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ 17,41,758 ಮತದಾರರ ಪೈಕಿ 8,75,953 ಪುರುಷ ಮತದಾರರು, 8,65,731 ಮಹಿಳಾ ಮತದಾರರು, 74 ಲಿಂಗತ್ವ ಅಲ್ಪಸಂಖ್ಯಾತ ಮತದಾರರು ಇರುತ್ತಾರೆ. ಮಾರ್ಚ 16ರ ವರೆಗಿನ ಅಂಕಿ ಅಂಶಗಳ ಪ್ರಕಾರ 50,589 ಯುವ ಮತದಾರರು ತಮ್ಮ ಹಕ್ಕನ್ನು ಚಲಾಯಿಸಲಿದ್ದು, ಈ ಸಂಖ್ಯೆ ಇನ್ನೂ ಹೆಚ್ಚಳ ಆಗಬಹುದು ಎಂದು ತಿಳಿಸಿದರು.
ಇನ್ನು ಚಿಕ್ಕೋಡಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 148 ಸೆಕ್ಟರ್ ಆಫಿಸರ್, 27 ಫ್ಲೈಯಿಂಗ್ ಸ್ಕ್ವಾಡ್, 21 ವಿಡಿಯೋ ಸರ್ವೆಲೆನ್ಸ್ ತಂಡಗಳನ್ನು ಹಾಗೂ 8 ಜನ ಸಹಾಯಕ ಚುನಾವಣಾಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ. ಅಲ್ಲದೇ ಮಾರ್ಚ್ 16ರಿಂದ ಜೂನ್ 06ರ ವರೆಗೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲಾಗುತ್ತದೆ ಎಂದರು.












Click it and Unblock the Notifications