ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮುಂಬೈ ಕರ್ನಾಟಕಕ್ಕೆ ಕಿತ್ತೂರು-ಕರ್ನಾಟಕ ಎಂದು ನಾಮಕರಣ: ಸಿಎಂ ಭರವಸೆ

|
Google Oneindia Kannada News

ಬೆಳಗಾವಿ, ಅಕ್ಟೋಬರ್ 23: ಮುಂಬೈ-ಕರ್ನಾಟಕವನ್ನು ಕಿತ್ತೂರು ಕರ್ನಾಟಕ ಎಂದು ನಾಮಕರಣ ಮಾಡುವ ಬಗ್ಗೆ ಮುಂಬರುವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಬೆಳಗಾವಿಯಲ್ಲಿ ಜಿಲ್ಲಾಡಳಿತ, ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಯ ಆಶ್ರಯದಲ್ಲಿ ಚನ್ನಮ್ಮನ ಕಿತ್ತೂರಿನ ಕೋಟೆ ಆವರಣದಲ್ಲಿ ಆಯೋಜಿಸಲಾದ ಎರಡು ದಿನಗಳ ಕಿತ್ತೂರು ಉತ್ಸವ-2021ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕಿತ್ತೂರು ಉತ್ಸವವನ್ನು ರಾಜ್ಯಮಟ್ಟದ ಉತ್ಸವವಾಗಿ ಘೋಷಿಸುವ ನಿಟ್ಟಿನಲ್ಲಿ ಸರ್ಕಾರ ಕೂಡಲೇ ಅಗತ್ಯ ಕ್ರಮವನ್ನು ಕೈಗೊಳ್ಳಲಿದೆ ಎಂದು ಹೇಳಿದರು.

ಇಡೀ ವರ್ಷ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಿಸೋಣ: ಸಿಎಂ ಬಸವರಾಜ ಬೊಮ್ಮಾಯಿ!ಇಡೀ ವರ್ಷ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಿಸೋಣ: ಸಿಎಂ ಬಸವರಾಜ ಬೊಮ್ಮಾಯಿ!

ಮುಂದಿನ ಸಚಿವ ಸಂಪುಟದ ಸಭೆಯಲ್ಲಿ ಮುಂಬೈ-ಕರ್ನಾಟಕ ಪ್ರಾಂತ್ಯವನ್ನು ಕಿತ್ತೂರು-ಕರ್ನಾಟಕ ಎಂದು ಘೋಷಿಸುವ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ‌ಬೊಮ್ಮಾಯಿ ಪ್ರಕಟಿಸಿದರು.

ಕರ್ನಾಟಕದಾದ್ಯಂತ ಕಿತ್ತೂರು ಜ್ಯೋತಿ ಸಂಚಾರ

ಕರ್ನಾಟಕದಾದ್ಯಂತ ಕಿತ್ತೂರು ಜ್ಯೋತಿ ಸಂಚಾರ

ಕಿತ್ತೂರು ಜ್ಯೋತಿಯು ಬೆಳಗಾವಿ ಜಿಲ್ಲೆ ಮಾತ್ರವಲ್ಲದೆ ಇಡೀ ರಾಜ್ಯದ್ಯಂತ ಸಂಚರಿಸುತ್ತಿತ್ತು. ಅದೇ ರೀತಿ ಮುಂದಿನ ಉತ್ಸವ ಸಂದರ್ಭದಲ್ಲಿ ವೀರಜ್ಯೋತಿ ರಾಜ್ಯದಾದ್ಯಂತ ಸಂಚರಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸಿಎಂ ಆದೇಶಿಸಿದರು. ಕಿತ್ತೂರು ‌ಉತ್ಸವದ ಆರಂಭಿಕ‌ ದಿನಗಳನ್ನು ಮೆಲುಕು ಹಾಕಿದ‌ ಸಿಎಂ ಬೊಮ್ಮಾಯಿ, ಇತ್ತೀಚಿನ ದಿನಗಳಲ್ಲಿ ವೇದಿಕೆ ಸೇರಿದಂತೆ ಅನೇಕ ಅಭಿವೃದ್ಧಿ ಕೆಲಸಗಳಾಗಿವೆ ಎಂದರು.

ಕಿತ್ತೂರು ರಾಣಿ ಚೆನ್ನಮ್ಮ ಬಗ್ಗೆ ಸ್ಮರಿಸಿದ ಸಿಎಂ

ಕಿತ್ತೂರು ರಾಣಿ ಚೆನ್ನಮ್ಮ ಬಗ್ಗೆ ಸ್ಮರಿಸಿದ ಸಿಎಂ

ಕಿತ್ತೂರು ಚೆನ್ನಮ್ಮ ಝಾನ್ಸಿಯ ರಾಣಿ ಲಕ್ಷ್ಮಿಬಾಯಿಯವರಿಗಿಂತ 40 ವರ್ಷಗಳ ಮೊದಲೇ ಸ್ವಾತಂತ್ರ್ಯಕ್ಕಾಗಿ ಕತ್ತಿ ಝಳಪಿಸಿದ್ದರು. ಈ ಐತಿಹಾಸಿಕ ಸಾಧನೆಯನ್ನು ಜಗತ್ತಿಗೆ ಸಾರುವ ಮೂಲಕ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಪ್ರಪ್ರಥಮ ಮಹಿಳೆ ಎಂಬುದನ್ನು ಸಾಬೀತುಪಡಿಸಬೇಕಿದೆ. ಬ್ರಿಟೀಷರ ವಿರುದ್ಧ ಹೋರಾಟಕ್ಕೆ ಧುಮುಕಿದ ಕಿತ್ತೂರು ರಾಣಿ ಚೆನ್ನಮ್ಮ ಇಂದಿನ ಯುವ ಸಮುದಾಯ ಹಾಗೂ ಮಹಿಳೆಯರಿಗೆ ಪ್ರೇರಣೆಯಾಗಿದ್ದಾರೆ. ಸಂಗೊಳ್ಳಿ ರಾಯಣ್ಣ ಹಾಗೂ ಚೆನ್ನಮ್ಮ ನಡುವೆ ತಾಯಿ-ಮಗನ‌ ಬಾಂಧವ್ಯವಿತ್ತು. ಬ್ರಿಟೀಷರ ಕುತಂತ್ರಕ್ಕೆ ರಾಯಣ್ಣ ಸೆರೆಸಿಕ್ಕಾಗ ಚೆನ್ನಮ್ಮ ಅಧೀರರಾಗುತ್ತಾರೆ. ಸತ್ಯ, ನ್ಯಾಯ‌ ಹಾಗೂ ದೇಶಕ್ಕಾಗಿ ಹೋರಾಡಲು ನಾವು ಸಂಕಲ್ಪ ಮಾಡಬೇಕಿದೆ ಎಂದು ಹೇಳಿದರು.

ಕಿತ್ತೂರು ರಾಣಿ ಚೆನ್ನಮ್ಮ ಪ್ರಾಧಿಕಾರಕ್ಕೆ 200 ಕೋಟಿ ಅನುದಾನ

ಕಿತ್ತೂರು ರಾಣಿ ಚೆನ್ನಮ್ಮ ಪ್ರಾಧಿಕಾರಕ್ಕೆ 200 ಕೋಟಿ ಅನುದಾನ

ಪ್ರಾಧಿಕಾರದ ಮಾಸ್ಟರ್ ‌ಪ್ಲ್ಯಾನ್ ಗೆ ಒಟ್ಟಾರೆ 200 ಕೋಟಿ ರೂಪಾಯಿ ಅನುದಾನ ನೀಡಬೇಕು ಎಂಬ ಬೇಡಿಕೆ ಇದೆ. ಮುಂದಿನ ಆಯವ್ಯಯದಲ್ಲಿ ಪ್ರಾಧಿಕಾರಕ್ಕೆ ಇನ್ನು ಹೆಚ್ಚಿನ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಅಲ್ಲದೇ ಮೀಸಲಾತಿ ಒದಗಿಸಲು ‌ಹಾಗೂ ಪ್ರಮಾಣ ಹೆಚ್ಚಿಸಲು ಬೇಡಿಕೆಗಳು‌ ಕೇಳಿಬಂದಿವೆ. ಈ ಬಗ್ಗೆ ಕಾನೂನು ‌ತೊಡಕುಗಳಿದ್ದು, ಯಾವ ರೀತಿಯ ‌ಕ್ರಮ ಕೈಗೊಳ್ಳಬೇಕು ಎಂಬುದನ್ನು ಸರಕಾರ ಪರಿಶೀಲಿಸುತ್ತಿದೆ. ಕಾನೂನು ಇತಿಮಿತಿಗಳನ್ನು ಸಂಪೂರ್ಣವಾಗಿ ಅಧ್ಯಯನ ಕೈಗೊಂಡು ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಸಿಎಂ ಭರವಸೆ ನೀಡಿದರು.
ಸಂಗೊಳ್ಳಿ ಸೈನಿಕ ಶಾಲೆಯು ಕೂಡ ಮುಕ್ತಾಯ ಹಂತದಲ್ಲಿದೆ. ರಕ್ಷಣಾ ಇಲಾಖೆಯ ಜತೆ ಚರ್ಚಿಸಿ ಶಾಲೆಯನ್ನು ರಾಜ್ಯ‌ ಸರಕಾರದ‌ ವ್ಯಾಪ್ತಿಗೆ ಸೇರಿಸಿ ಉನ್ನತಮಟ್ಟದ ಮಿಲಿಟರಿ ಶಾಲೆ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು.

ಕಿತ್ತೂರು ಉತ್ಸವದ ರಜತ ಮಹೋತ್ಸವದಲ್ಲಿ ಗಣ್ಯರಿಗೆ ಸನ್ಮಾನ

ಕಿತ್ತೂರು ಉತ್ಸವದ ರಜತ ಮಹೋತ್ಸವದಲ್ಲಿ ಗಣ್ಯರಿಗೆ ಸನ್ಮಾನ

ಕಿತ್ತೂರು ಉತ್ಸವದ ರಜತ ಮಹೋತ್ಸವದ ಪ್ರಯುಕ್ತ ರಾಷ್ಟ್ರ ಪ್ರಶಸ್ತಿ ಪುರಸ್ಕೃತರು ಹಾಗೂ ಪ್ರಗತಿಪರ ರೈತ ಮಹಿಳೆ ಆಗಿರುವ ರಾಯಚೂರು ಜಿಲ್ಲೆಯ ಶ್ರೀಮತಿ ಕವಿತಾ‌ ಮಿಶ್ರಾ ಹಾಗೂ ರಾಣಿ ಚನ್ನಮ್ಮನ ವಂಶಸ್ಥರಾದ ಬಾಳಾಸಾಹೇಬ್ ದೇಸಾಯಿ(ಕಿತ್ತೂರಕರ) ಅವರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಡಾ.ಸಂತೋಷ ಹಾನಗಲ್ ಅವರು ರಚಿಸಿದ "ಭಾರತದ ಸ್ವಾತಂತ್ರ್ಯದ ‌ಬೆಳ್ಳಿಚುಕ್ಕಿ ಕಿತ್ತೂರು ರಾಣಿ ಚೆನ್ನಮ್ಮ" ಕೃತಿಯನ್ನು ಮುಖ್ಯಮಂತ್ರಿ ‌ಬಸವರಾಜ‌ ಬೊಮ್ಮಾಯಿ ಬಿಡುಗಡೆಗೊಳಿಸಿದರು. ಕಿತ್ತೂರು ಪಟ್ಟಣದಲ್ಲಿ ‌ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳಿಗೆ ಸಿಎಂ ಚಾಲನೆ ನೀಡಿದರು.
ಇದೇ ವೇಳೆ ಕೋವಿಡ್ ಸೋಂಕಿನಿಂದ ಮೃತಪಟ್ಟಿರುವವರ ಕುಟುಂಬದವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾಂಕೇತಿಕವಾಗಿ ಮೂರು ಜನರಿಗೆ ತಲಾ ಒಂದು ಲಕ್ಷ ರೂಪಾಯಿ ಪರಿಹಾರಧನ ಚೆಕ್ ವಿತರಿಸಿದರು. ಸಾಂಪ್ರದಾಯಿಕವಾಗಿ ಜರುಗಿದ ಧ್ವಜಾರೋಹಣ, ವೀರಜ್ಯೋತಿ ಸ್ವಾಗತ, ಕಲಾವಾಹಿನಿ ಕಲಾತಂಡಗಳ ಮೆರವಣಿಗೆಯು ವಿಜೃಂಭಣೆಯಿಂದ ನಡೆದವು.

ಕಿತ್ತೂರು ಉತ್ಸವದಲ್ಲಿ ಗಣ್ಯದ ದಂಡು:
ಕಿತ್ತೂರು ಉತ್ಸವದ ರಜತ ಮಹೋತ್ಸವದಲ್ಲಿ ಅರಣ್ಯ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಚಿವ ಉಮೇಶ್ ಕತ್ತಿ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಇಲಾಖೆಯ ಸಚಿವ ಮುರುಗೇಶ್ ನಿರಾಣಿ, ವಿಧಾನಪರಿಷತ್ತಿನ ಸರಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ವಿಧಾನಸಭೆ ಉಪಾಧ್ಯಕ್ಷ ಆನಂದ ಮಾಮನಿ, ಚಿಕ್ಕೋಡಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ, ಬೆಳಗಾವಿ ಸಂಸದರಾದ ಮಂಗಳಾ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಕರ್ನಾಟ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮಹೇಶ‌ ಕುಮಠಳ್ಳಿ, ಕಾಡಾ ಅಧ್ಯಕ್ಷರಾದ ಡಾ.ವಿಶ್ವನಾಥ್ ಪಾಟೀಲ, ಬೆಳಗಾವಿ ಉತ್ತರ ಶಾಸಕ ಅನಿಲ್ ಬೆನಕೆ, ರಾಮದುರ್ಗ ಶಾಸಕ‌ ಮಹಾದೇವಪ್ಪ ಯಾದವಾಡ, ಬೈಲಹೊಂಗಲ ಶಾಸಕ ಮಹಾಂತೇಶ‌ ಕೌಜಲಗಿ, ಮತ್ತಿತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

English summary
CM Basavaraj Bommai Launch to Silver Jubilee of Kittur Utsava in Belagavi
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X