ರಾಜ್ಯಕ್ಕೆ ಕಾಂಗ್ರೆಸ್‌ನ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಪ್ರಚಾರಕ್ಕೆ ಬಂದರೆ ಬಿಜೆಪಿಗೆ ಲಾಭ
ಬೆಳಗಾವಿ, ಏಪ್ರಿಲ್ 26: ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರು ಯಾಕೆ ಬರುತ್ತಿದ್ದಾರೆ ಎಂದು ಕಾಂಗ್ರೆಸ್‌ನವರು ಕೇಳುತ್ತಾರೆ. ಆದರೆ ಬಿಜೆಪಿಗೆ ಮಾತ್ರ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರು ರಾಜ್ಯಕ್ಕೆ ಬಂದರೆ ಅನುಕೂಲ. ಅವರು ಹೋದಲ್ಲಿ ಕಾಂಗ್ರೆಸ್ ಸೋತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಬೆಳಗಾವಿ ಜಿಲ್ಲೆಯ ಯಮಕನಮರಡಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಅಭ್ಯರ್ಥಿ ಬಸವರಾಜ ಹಂದ್ರಿ ಪರ ಪ್ರಚಾರ ನಡೆಸಿ ನಂತರ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದರು.

ಈ ಬಾರಿಯ ರಾಜ್ಯ ಚುನಾವಣೆ ಐತಿಹಾಸಿಕವಾಗಿದೆ. ನೆಚ್ಚಿನ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ ದೇಶದಲ್ಲಿ ಅಭಿವೃದ್ಧಿ ಮಾಡಿದೆ. ಯಾರಿಗೆ ಕರ್ನಾಟಕದ ಅಭಿವೃದ್ಧಿ ಬೇಕಿದೆ ಅವರು ಡಬಲ್ ಎಂಜಿನ್ ಸರ್ಕಾರವನ್ನು ಬೆಂಬಲಿಸುತ್ತಾರೆ. ಡಬಲ್ ಎಂಜಿನ್ ಸರ್ಕಾರ ಬೇಡ ಅನ್ನುವವರು ಕಾಂಗ್ರೆಸ್ ಗೆ ಮತ ಹಾಕಲಿ ಎಂದು ಅವರು ಬಹಿರಂಗವಾಗಿ ಹೇಳಿದರು.
ರಾಜ್ಯದಲ್ಲಿ 6000 ಕಿಲೋ ಮೀಟರ್ ರಸ್ತೆ ನಿರ್ಮಾಣ
ಬಿಜೆಪಿ ಡಬಲ್ ಎಂಜಿನ್ ಸರ್ಕಾರ ಇರುವುದರಿಂದ ರಾಜ್ಯದಲ್ಲಿ 60 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ 6000 ಕಿಲೋ ಮೀಟರ್ ರಸ್ತೆ ನಿರ್ಮಾಣ ಮಾಡಲಾಗಿದೆ. ಬೆಳಗಾವಿ ಕುಡಚಿ ರೈಲ್ವೆ ಲೈನ್ ಡಬಲ್ ಮಾಡಲಾಗುತ್ತಿದೆ. ಕಿಸಾನ್ ಸಮ್ಮಾನ್ ಯೋಜನೆ ಎಲ್ಲವೂ ಡಬಲ್ ಎಂಜಿನ್ ಸರ್ಕಾರದಿಂದ ಸಾಧ್ಯವಾಗಿದೆ ಎಂದು ತಿಳಿಸಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಪ್ರಧಾನ ಮಂತ್ರಿ ನರೇಂದ್ರ ಅವರ ಹೆಸರು ಹೇಳಿದ್ದಕ್ಕೆ ಕಾಂಗ್ರೆಸ್ ನವರಿಗೆ ಉರಿ ಹತ್ತಿದೆ. ಮೋದಿಯವರು ಎಲ್ಲಿ ಹೊಗಿದ್ದಾರೆ. ಅಲ್ಲಿ ಕಾಂಗ್ರೆಸ್ ಮುಕ್ತವಾಗಿದೆ. ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ, ಭ್ರಷ್ಟಾಚಾರ ಅಂದರೆ ಕಾಂಗ್ರೆಸ್. ಬಿಡಿಎ, ಹಾಸಿಗೆ ದಿಂಬಿನಲ್ಲೂ ಲಂಚ ಪಡೆದರು. ರಾಜೀವ ಗಾಂದಿಯೇ 85% ಭ್ರಷ್ಟಾಚಾರ ನಡೆಸಯುತ್ತಿದ್ದ ಬಗ್ಗೆ ಹೇಳಿದ್ದರು. ಸಾಮಾಜಿಕ ನ್ಯಾಯದ ಬಗ್ಗೆ ಅವರದ್ದು ಬರೀ ಮಾತು. ನಾವು ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಳ ಮಾಡಿ ಎಸ್‌ಸಿ ಶೇಕಡಾ 15 ರಿಂದ 17, ಎಸ್‌ಟಿ ಶೇಕಡಾ 3 ರಿಂದ 7ಕ್ಕೆ ಹೆಚ್ಚಳ ಮಾಡಿದ್ದೇವೆ. ಆಂತರಿಕ ಮೀಸಲಾತಿ ಹೆಚ್ಚಳ ಮಾಡಿದ್ದೇವೆ ಎಂದು ವಿವರಿಸಿದರು.

ಭಾವನೆಗಳ ಜೊತೆಗೆ ಕಾಂಗ್ರೆಸ್ ಆಟ
2016 ಸಿದ್ದರಾಮಯ್ಯ ಆಂತರಿಕ ಮೀಸಲಾತಿ ನೀಡಲಾಗದೇ ಓಡಿ ಹೋಗಿದ್ದರು. ನಾವು ಆಂತರಿಕ ಮೀಸಲಾತಿ ನೀಡಿದ್ದೇವೆ.
ಮುಸ್ಲಿಂ ಸಮುದಾಯದಲ್ಲಿ ಅನೇಕ ಉಪ ಪಂಗಡಗಳಿವೆ. ಅವರಿಗೆ ಆರ್ಥಿಕ ಹಿಂದುಳಿದ ವರ್ಗದವರಿಗೆ ಮೀಸಲಾತಿ ಇದೆ.
ಕಾಂಗ್ರೆಸ್ ನವರು ನಮ್ಮ ಮೇಲೆ ಭಾವನೆಗಳ ಜೊತೆ ಆಟ ಆಡುತ್ತೇವೆ ಎಂದು ಆರೋಪ ಮಾಡುತ್ತಾರೆ. ಬಸವರು ಸೇರಿದಂತೆ ಎಲ್ಲರಿಗೂ ಸ್ವಾಭಿಮಾನ ಇರುತ್ತದೆ ಎಂದು ತಿರುಗೇಟು ನೀಡಿದರು.
ಬಸವರಾಜ ಅವರನ್ನು 25 ಸಾವಿರ ಮತಗಳ ಅಂತರದಿಂದ ಗೆಲ್ಲಿಸಿ ಕಳುಹಿಸಿ. ಯಮಕನಮರಡಿ ಅಭಿವೃದ್ಧಿಗೆ ಅಗತ್ಯ ಅನುದಾನ ನಾವು ನೀಡುತ್ತೇವೆ ಎಂದರು ಮತದಾರರಲ್ಲಿ ಮನವಿ ಮಾಡಿದರು.












Click it and Unblock the Notifications