ಬೆಳಗಾವಿ: "ಸಂಪೂರ್ಣ ಮನೆ ಹಾನಿಗೆ ಪರಿಹಾರ ಹಾಗೂ ಮನೆ ಒದಗಿಸಲು ತೀರ್ಮಾನ"

ಬೆಳಗಾವಿ, ಆಗಸ್ಟ್‌, 05: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬೆರೆದು ರೈತರ ಬೆಳೆಗಳನ್ನೆಲ್ಲ ನುಂಗಿಬಿಟ್ಟಿದ್ದಾನೆ. ಹಾಗೆಯೇ ಬೆಳಗಾವಿ ಜಿಲ್ಲೆಯ ಹಲವೆಡೆ ಬೆಳಗಳೆಲ್ಲ ನಾಶವಾಗಿ ಅನ್ನದಾತರು ಕಂಗಾಲಾಗಿದ್ದಾರೆ. ಮತ್ತೊಂದೆಡೆ ಹಲವುರು ಮನೆಗಳನ್ನು ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ಇದೀಗ ಮನೆ ಹಾನಿ ಸಂಸ್ತ್ರಸ್ತರಿಗೆ ಪರಿಹಾರದ ಜೊತೆಗೆ ಮನೆ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮಳೆಯಿಂದ ಸಂಪೂರ್ಣ ಮನೆ ಹಾನಿ ಸಂಭವಿಸಿದ ಸಂತ್ರಸ್ತರಿಗೆ 1.2 ಲಕ್ಷ ರೂಪಾಯಿ ಪರಿಹಾರದ ಜೊತೆಗೆ ಮನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಇಂದು (ಆಗಸ್ಟ್‌ 05) ಪ್ರವಾಹ ಪೀಡಿತ ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದರು.

CM Decision to give house with 1 2 lakh compensation for complete house damage

ಬಿಜೆಪಿಯು ಪರಿಹಾರ ವಿತರಣೆಯಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯನವರು, ಹಿಂದೆ ಬಿ.ಎಸ್.ಯಡಿಯೂರಪ್ಪನವರು ಸಂಪೂರ್ಣ ಮನೆ ಹಾನಿಗೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದು, ಈ ನೆರವಿನ ದುರುಪಯೋಗವಾಯಿತು. ಹಲವರಿಗೆ ಮೊದಲನೇ ಕಂತು ಮಾತ್ರ ಬಿಡುಗಡೆಯಾಗಿ, ಎರಡು ಹಾಗೂ ಮೂರನೇ ಕಂತಿನ ಈವರೆಗೂ ದೊರೆತಿಲ್ಲ. ಈ ಹಿನ್ನೆಲೆ ನಮ್ಮ ಸರ್ಕಾರ 1.2 ಲಕ್ಷ ರೂಪಾಯಿ ಪರಿಹಾರ ಹಾಗೂ ಮನೆ ನೀಡುವ ನಿರ್ಧಾರ ಮಾಡಿದೆ ಎಂದರು.

ಜನರ ಸಹಕಾರ ಇದ್ದರೆ ಪದೇ ಪದೇ ಮುಳುಗಡೆ ಆಗುವ ಹಳ್ಳಿಗಳ ಸ್ಥಳಾಂತರ ಮಾಡುವ ಮೂಲಕ ಶಾಶ್ವತ ಪರಿಹಾರ ಒದಗಿಸಲು ಚಿಂತನೆ ಮಾಡಲಾಗುವುದು ಎಂದು ತಿಳಿಸಿದರು. ಇನ್ನು ರಾಜ್ಯದ ಹಲವೆಡೆ ಮಳೆಯಿಂದ ಹಾನಿಯಾಗಿದೆ. ಎಲ್ಲ ಕಡೆ ಪರಿಹಾರ ಕೆಲಸಗಳನ್ನು ಪ್ರಾರಂಭಿಸಲಾಗಿದೆ ಎಂದರು.

ಮೈಸೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಭೇಟಿ ನೀಡಲಾಗಿದ್ದು, ಮೃತಪಟ್ಟವರಿಗೆ ಹಾಗೂ ಜಾನುವಾರುಗಳು ಸತ್ತಿರುವುದಕ್ಕೆ ಕೂಡಲೇ ಪರಿಹಾರ ವಿತರಣೆ ಮಾಡಲಾಗುತ್ತಿದೆ. ಮನೆಗಳು ಬಿದ್ದಿರುವುದಕ್ಕೆ ಪರಿಹಾರ, ವಿದ್ಯುತ್‌ ಕಂಬ, ಟ್ರಾನ್ಸ್‌ಫಾರ್ಮರ್‌ಗಳ ದುರಸ್ತಿ ಮೊದಲಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಬೆಳಗಾವಿಯಲ್ಲಿ ಕಳೆದ 42 ದಿನದಿಂದ ನಿರಂತರ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಂಗನವಾಡಿಗಳಿಗೂ ರಜೆ ಘೋಷಣೆ ಮಾಡುವಂತೆ ಸೂಚಿಸಲಾಗಿದೆ.

ಮುಂದಿನ ವಾರ ಹೆಚ್ಚು ಮಳೆ: ಇನ್ನು ಮುಂದಿನ ವಾರ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದ್ದು, ಇದಕ್ಕಾಗಿ ಕಂದಾಯ, ವಿಪತ್ತು ನಿರ್ವಹಣೆ, ಅರಣ್ಯ ಇಲಾಖೆ, ಇಂಧನ, ನೀರಾವರಿ ಸೇರಿದಂತೆ ಎಲ್ಲಾ ಇಲಾಖೆಗಳು ಎಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ ಎಂದರು.

ಗೃಹ ಲಕ್ಷ್ಮಿ ಮೂರು ತಿಂಗಳಿನಿಂದ ಬಾಕಿ ಇದೆ ಎಂದು ಕೇಳಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ಜುಲೈ ತಿಂಗಳಿನದ್ದು ಮಾತ್ರ ಬಾಕಿ ಇದೆ. ಅದನ್ನೂ ಶೀಘ್ರವೇ ವಿತರಿಸಲಾಗುವುದು ಎಂದು ತಿಳಿಸಿದರು. ಈ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌, ಬೆಳಗಾವಿ ಜಿಲ್ಲೆಯ ಶಾಸಕರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+