ರೈತರಿಗೆ ₹400 ಕೋಟಿ ವೆಚ್ಚದ ಕೃಷಿ ಯಂತ್ರಗಳ ವಿತರಣೆ: ಸಿದ್ದರಾಮಯ್ಯ

ಬೆಂಗಳೂರು, ಏಪ್ರಿಲ್ 21: ರಾಜ್ಯದಲ್ಲಿ ಜಾತಿ ಗಣತಿ ಕುರಿತು ಚರ್ಚೆ,ಆರೋಪ, ಪ್ರತ್ಯಾರೋಪಗಳು ಕೇಳಿ ಬರುತ್ತಿವೆ. ಈ ಮಧ್ಯೆ ಗಡಿನಾಡು ಜಿಲ್ಲೆ ಬೆಳಗಾವಿಯಲ್ಲಿ ಭಾನುವಾರ ನಡೆದ ಬೃಹತ್ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕರ್ನಾಟಕದ ಕೃಷಿಕರಿಗೆ ಶೇಕಡಾ 40 ಪರಿಶಿಷ್ಠ ಸಮಾಜದ ಕೃಷಿಕರಿಗೆ ಶೇಕಡಾ 50 ರಿಯಾಯ್ತಿಯಲ್ಲಿ ಕೃಷಿ ಯಂತ್ರೋಪಕರಣಗಳನ್ನು ವಿತರಿಸಿದರು. ಕಷಿ ಕಾರ್ಮಿಕರ ಕೊರತೆಯಿಂದಾಗಿ ಕೃಷಿ ಯಂತ್ರಗಳ ಮೇಲಿನ ಅವಲಂಬನೆ ಹೆಚ್ಚಾಗಿದೆ. ಹೀಗಾಗಿ ರಿಯಾಯಿತಿ ಬೆಲೆಯಲ್ಲಿ ಕೃಷಿಯಂತ್ರಗಳ ವಿತರಣೆ ಸರ್ಕಾರ ಮಾಡುತ್ತಿದೆ ಎಂದು ಅವರು ತಿಳಿಸಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಭಾನುವಾರ ಕೃಷಿ ಇಲಾಖೆ ಸಹಾಯಧನದ ಅಡಿಯಲ್ಲಿ ಸುಮಾರು ₹400 ಕೋಟಿ ವೆಚ್ಚದ ಕೃಷಿ ಯಂತ್ರಗಳು ಮತ್ತು ಸಲಕರಣೆಗಳನ್ನು ರೈತರಿಗೆ ವಿತರಿಸಿ ಅವರು ಮಾತನಾಡಿದರು. ಕೃಷಿಭಾಗ್ಯವನ್ನು ಒಣಕೃಷಿ ಬೆಳೆಗಾರರಿಗಾಗಿ ಜಾರಿಗೆ ತಂದಿದ್ದೇವೆ. ಕಳೆದ ವರ್ಷ 25 ಸಾವಿರಕ್ಕೂ ಹೆಚ್ಚು ಕೃಷಿ ಹೊಂಡ ಮಾಡಿಸಿದ್ದೇವೆ. ಈ ವರ್ಷ ಇದು ಇನ್ನೂ ಹೆಚ್ಚಾಗುತ್ತದೆ. ಕೃಷಿಹೊಂಡ ಬಹಳ ಉಪಯುಕ್ತ ಯೋಜನೆಯಾಗಿದೆ ಎಂದು ತಜ್ಞರು ವರದಿ ನೀಡಿದ್ದಾರೆ.

CM Siddaramaiah Distributes Subsidized Farm Equipment Defends Caste Census

ಈಗ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಭಿಯಾಗಿದ್ದೇವೆ. ನಮ್ಮ ಸರ್ಕಾರ ಬಂದ ಮೇಲೆ ಆಹಾರ ಉತ್ಪಾದಕರಾದ ನಿಮ್ಮ ಕಾರಣದಿಂದ ಅನ್ನಭಾಗ್ಯ ಯೋಜನೆಯಡಿ 10 ಕೆ.ಜಿ. ಅಕ್ಕಿ ಕೊಡಲು ಶುರು ಮಾಡಿದೆವು. ನೀರಾವರಿ ಯೋಜನೆಗಳಿಗೆ ನಮ್ಮ ಸರ್ಕಾರ ₹23,000 ಕೋಟಿ ಖರ್ಚು ಮಾಡುತ್ತಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ಇವತ್ತಿನವರೆಗೂ ಒಂದು ಪೈಸೆಯನ್ನೂ ಕೇಂದ್ರ ಸರ್ಕಾರ ಕೊಟ್ಟಿಲ್ಲ. ಮಹದಾಯಿ, ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಒಪ್ಪಿಗೆಯನ್ನೇ ಕೊಡುತ್ತಿಲ್ಲ. ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟರೆ ತಕ್ಷಣ ಈ ಎಲ್ಲಾ ನೀರಾವರಿ ಯೋಜನೆಗಳನ್ನು ಆರಂಭಿಸಲು ಸರ್ಕಾರ ಸಿದ್ಧವಿದೆ.

ಜಾತಿ ಗಣತಿ ವರದಿಯ ಹಾಸ್ಯಾಸ್ಪದ ಹೇಳಿಕೆ: ಸಿಎಂ ಸಿದ್ದರಾಮಯ್ಯ

ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಮೂಲ ಪ್ರತಿ ಮುಖ್ಯಮಂತ್ರಿಗಳ ಬಳಿ ಇದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮತ್ತೊಮ್ಮೆ ಹಾಸ್ಯಾಸ್ಪದ ಹೇಳಿಕೆ ನೀಡಿದ್ದಾರೆ. ಅವರು ಯಾವತ್ತಾದರೂ ಸತ್ಯವನ್ನು ಹೇಳಿದ್ದಾರೆಯೇ? ಮೂಲ ಪ್ರತಿ ನನ್ನ ಬಳಿಯಿರಲು ಹೇಗೆ ಸಾಧ್ಯ?. ರಾಹುಲ್ ಗಾಂಧಿಯವರಿಗೆ ನಾವು ಪತ್ರ ಬರೆದಿಲ್ಲ ಆದರೆ ಅವರೊಂದಿಗೆ ಚರ್ಚೆ ಮಾಡಿ ಸಚಿವ ಸಂಪುಟ ಸಭೆಯಲ್ಲಿ ಸಮೀಕ್ಷೆಯ ವರದಿಯನ್ನು ಮಂಡಿಸಿದ್ದೇವೆ.

CM Siddaramaiah Distributes Subsidized Farm Equipment Defends Caste Census

ಸಚಿವ ಸಂಪುಟ ಸಭೆಯಲ್ಲಿ ಯಾರೂ ಈ ಬಗ್ಗೆ ವಿರೋಧ ವ್ಯಕ್ತಪಡಿಸಿ, ಜೋರಾಗಿ ಮಾತನಾಡಿಲ್ಲ. ಸಮೀಕ್ಷೆಯನ್ನು ಓದಿಕೊಂಡು ಅಭಿಪ್ರಾಯಗಳನ್ನು ತಿಳಿಸುವಂತೆ ಸೂಚಿಸಲಾಗಿದ್ದು, ಸಚಿವರು ಅಭಿಪ್ರಾಯ ತಿಳಿಸಿದ ನಂತರ ಪುನ: ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ಅಂತಿಮ ತೀರ್ಮಾನಕ್ಕೆ ಬರಲಾಗುವುದು.

ಯಾವ ಜಾತಿಗೂ ಅನ್ಯಾಯವಾಗಬಾರದು ಎನ್ನುವುದು ಸರ್ಕಾರದ ಉದ್ದೇಶ. ಇದು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ. ಸಂವಿಧಾನ ಜಾರಿಯಾಗಿ 75 ವರ್ಷಗಳಾಗಿದ್ದರೂ ಬಡವ ಬಡವನಾಗಿಯೇ ಉಳಿಯಬೇಕೆ? ಸಮಾನತೆ ಬೇಡವೇ, ಜಾತಿಗೆ ಅಂಟಿಕೊಂಡೇ ಇರಬೇಕೆ? ಎಂದು ಅವರು ಪ್ರಶ್ನಿಸಿದರು.

34 ಜನರು ಅನ್ಯಾಯವಾಗದಂತೆ ನೋಡಿಕೊಳ್ತಿವಿ: ಸಚಿವ

ಬೆಳಗಾವಿಯಲ್ಲಿ ಜಾತಿ ಗಣತಿ ವರದಿ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಚೆಲುವರಾಯಸ್ವಾಮಿ ಅವರು, ವರದಿ ಸಲ್ಲಿಕೆ ಆಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚೆಗೆ ಬಿಟ್ಟಿದ್ದಾರೆ. ಮೊನ್ನೆ ನಡೆದ ಸಚಿವರ ಮೀಟಿಂಗ್ ಪೂರ್ಣ ಪ್ರಮಾಣದ ಚರ್ಚೆ ಆಗಲಿಲ್ಲಾ. ಎಲ್ಲರಿಗೂ ಜಾತಿ ಗಣತಿ ಬುಕಲೆಟ್ ಕೊಟ್ಟು ಟೈಂ ಕೊಟ್ಟಿದ್ದಾರೆ. ಅದರಲ್ಲಿನ ಸರಿ ತಪ್ಪು ಕುರಿತು ಮತ್ತೆ ಕ್ಯಾಬೆನೇಟನಲ್ಲಿ ಚರ್ಚೆ ಮಾಡುತ್ತೇವೆ.

ಎಲ್ಲಾ ಸಮಾಜದ ಮುಖಂಡರು ಸ್ವಾಮೀಜಿಗಳು ಸಣ್ಣ ಪುಟ್ಟ ಸಮಸ್ಯೆ ನ್ಯೂನ್ಯತೆ ಬಗ್ಗೆ ಹೇಳಿದ್ದಾರೆ. ನಾವೆಲ್ಲರೂ ಸೇರಿ ಯಾವುದೇ ಸಮಾಜಕ್ಕೆ ಅನ್ಯಾಯ ಆಗದಂತೆ ನೋಡಿಕ್ಕೊಳ್ಳುತ್ತೇವೆ. ಮುಖ್ಯಮಂತ್ರಿಗಳು, ಸಚಿವರು ಸೇರಿ 34 ಜನ ಇದ್ದೇವೆ. ಎಲ್ಲರೂ ಸೇರಿ ಅನ್ಯಾಯ ಆಗದಂತೆ ನೋಡುತ್ತೇವೆ ಎಂದು ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

2015-2016 ರಲ್ಲಿ ಜಾತಿಗಣತಿ ಮಾಡಲಿಕೆ 54 ಮಾನದಂಡಗಳನ್ನು ಕೊಟ್ಟು ಸರ್ವೆ ಮಾಡಲು ಬಿಡಲಾಗಿತ್ತು. ಗ್ರೇಟ್ ಎಚ್‌ಡಿ ಕುಮಾರಸ್ವಾಮಿ ಅವರು ಅಂದು ಮುಖ್ಯಮಂತ್ರಿಗಳಾಗಿದ್ದರು. ಅಂದು ಅವರು ವರದಿಯನ್ನು ತಿರಸ್ಕರಿಸಬಹುದಿತ್ತಲ್ಲವಾ? ಎಂದು ಅವರು ವಿಪಕ್ಷ ನಾಯಕರಿಗೆ ತಿರುಗೇಟು ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+