Get Updates
Get notified of breaking news, exclusive insights, and must-see stories!

ಸ್ವಸಹಾಯ ಸಂಘಗಳಿಗೆ 1 ಕೋಟಿ ರೂಪಾಯಿ ನೆರವು: ಸಿಎಂ ಸಿದ್ದರಾಮಯ್ಯ

ಬೆಳಗಾವಿ, ಡಿಸೆಂಬರ್‌ 07: ಮಹಿಳೆಯರು ತಯಾರಿಸಿದ ವಸ್ತುಗಳಿಗೆ ಮಾರಾಟ ವ್ಯವಸ್ಥೆ ದೊರೆತಾಗ ಮಾತ್ರ ಆರ್ಥಿಕ, ಸಾಮಾಜಿಕವಾಗಿ ಶಕ್ತಿ ಪಡೆಯಲು ಸಾಧ್ಯ. ಗುಣಮಟ್ಟದ ವಸ್ತುಗಳನ್ನು ತಯಾರಿಸುವ ಶಕ್ತಿ ಉತ್ಪಾದಕರಿಗೆ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸ್ವಸಹಾಯ ಸಂಘಗಳು ತಯಾರಿಸಿರುವ ಉತ್ಪನ್ನಗಳ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಾರಾಟ ಹೆಚ್ಚಾದರೆ ಉತ್ಪನ್ನಗಳ ಉತ್ಪಾದನೆಯೂ ಹೆಚ್ಚಾಗಲು ಸಾಧ್ಯ. ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ಸಿಕ್ಕು ಅದರಿಂದ ಜೀವನ ನಡೆಯಬೇಕು. ಮಹಿಳೆಯರು ಕುಟುಂಬದ ಜವಾಬ್ದಾರಿಯನ್ನು ವಹಿಸುತ್ತಾರೆ. ಅವರು ಶ್ರಮಜೀವಿಗಳು ಎಂದರು.

CM Siddaramaiah Reaction About Women Empowerment

ಶೇ.50 ರಷ್ಟಿರುವ ಮಹಳೆಯರು ಶತಶತಮಾನಗಳಿಂದ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದರು. ಮಹಿಳೆಯರು ದೌರ್ಜನ್ಯ, ಶೋಷಣೆಗೆ ಒಳಗಾಗಿರುವ ವರ್ಗ. ಈ ವರ್ಗ ಶಿಕ್ಷಣ ದೊರೆತು ಆರ್ಥಿಕವಾಗಿ ಸಬಲರಾಗಬೇಕು. ಶಕ್ತಿ ವೃದ್ಧಿ ಮಾಡಲು ವಸ್ತು ಪ್ರದರ್ಶನ ಮಾರಾಟ ಮೇಳಗಳನ್ನು ಸರ್ಕಾರ ಏರ್ಪಾಡು ಮಾಡಿದೆ. ಉದ್ಯೋಗ ಸೃಷ್ಟಿಸಲು ಆರ್ಥಿಕ ನೆರವು , ತರಬೇತಿ, ಸ್ವಯಂ ಉದ್ಯೋಗಕ್ಕೆ ಶಕ್ತಿ ಅಗತ್ಯ. ಗುಣಮಟ್ಟದ ವಸ್ತುಗಳನ್ನು ತಯಾರಿಸುವ ಶಕ್ತಿ ಉತ್ಪಾದಕರಿಗೆ ಇರಬೇಕು ಎಂದು ಹೇಳಿದರು.

ಸ್ಪರ್ಧಾತ್ಮಕ ಸಮಾಜದಲ್ಲಿ ನಾವೂ ನಮ್ಮ ಅಸ್ತಿತ್ವ ಕಾಪಾಡಿಕೊಳ್ಳಬೇಕು. ರಾಜ್ಯದಲ್ಲಿ 3.48 ಲಕ್ಷ ಸ್ವಸಹಾಯ ಸಂಘಗಳಿವೆ. 39.30 ಲಕ್ಷ ಕುಟುಂಬಗಳು ಗ್ರಾಮೀಣ ಜೀವನೋಪಾಯಡಿಯಲ್ಲಿ ಬರುತ್ತವೆ. ನಗರ ಪ್ರದೇಶದಲ್ಲಿ 33 ಸಾವಿರ ಸ್ವಸಹಾಯ ಸಂಘಗಳಿವೆ. 3.96 ಲಕ್ಷ ಕುಟುಂಬಗಳು ತೊಡಗಿಸಿಕೊಂಡಿವೆ. ಇಷ್ಟೊಂದು ಸ್ವಸಹಾಯ ಸಂಘಗಳಿಗೆ ಆರ್ಥಿಕ ನೆರವು ಸರ್ಕಾರ ನೀಡಿದೆ ಎಂದರು.

12,600 ಗುಂಪುಗಳಿಗೆ 1 ಕೋಟಿ ರೂಪಾಯಿ

ಸ್ವಸಹಾಯ ಸಂಘಗಳಿಗೆ ಪ್ರತಿ ಸ್ವಸಹಾಯ ಸಂಘಗಳಿಗೆ 1 ಲಕ್ಷ ರೂ.ಗಳ ನೆರವು ನೀಡುತ್ತದೆ. 131 ಕೋಟಿ ರೂ.ಗಳನ್ನು ವ್ಯಯ ಮಾಡಿ 12,600 ಗುಂಪುಗಳಿಗೆ ಈ ವರ್ಷ ಸಹಾಯ ಮಾಡಿದೆ. ಕಳೆದ ವರ್ಷ ವ್ಯಾಪಾರ ಮೇಳದಲ್ಲಿ 3 ಕೋಟಿ ರೂಗಳ ವಹಿವಾಟು ನಡೆದಿದೆ. ಮಹಿಳೆಯರನ್ನು ಸಬಲರನ್ನಾಗಿ ಮಾಡಲು ನಮ್ಮ ಸರ್ಕಾರ ಎಲ್ಲಾ ರೀತಿಯ ಸಹಾಯ ಮಾಡುತ್ತಿದೆ.

CM Siddaramaiah Reaction About Women Empowerment

ಶಕ್ತಿ ಯೋಜನೆಯಡಿ ಎಲ್ಲಾ ಮಹಿಳೆಯರಿಗೆ ಉಚಿತವಾಗಿ ಬಸ್ ಪ್ರಯಾಣವನ್ನು ನೀಡಿದ್ದು ಮಹಿಳೆಯರು ಮನೆಗಳಿಗೆ ಸೀಮಿತವಾಗದೆ ರಾಜ್ಯದ ಮೂಲೆ ಮೂಲೆಗಳಿಗೂ ಹೋಗಬೇಕು. 100 ಕೋಟಿಗೂ ಹೆಚ್ಚು ಮಹಿಳೆಯರು ಉಚಿತವಾಗಿ ಬಸ್ಸುಗಳಲ್ಲಿ ಓಡಾಡಿದ್ದಾರೆ. ಪ್ರತಿ ದಿನ 50-60 ಲಕ್ಷ ಜನ ಮಹಿಳೆಯರು ಬಸ್ಸುಗಳಲ್ಲಿ ಓಡಾಡಿದ್ದಾರೆ ಎಂದು ವಿವರಿಸಿದರು.

ಗೃಹ ಲಕ್ಷ್ಮೀ ಯೋಜನೆಯಡಿ 2000 ರೂ.ಗಳನ್ನು ಈವರೆಗೆ 1.17 ಕೋಟಿ ಜನ ನೋಂದಾಯಿಸಿಕೊಂಡಿದ್ದಾರೆ. 1.14 ಲಕ್ಷ ಮಹಿಳೆಯರಿಗೆ 2000 ರೂ.ಗಳನ್ನು ನೀಡಲಾಗುತ್ತಿದೆ. 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. 170 ರೂಗಳನ್ನು ಪ್ರತಿಯೊಬ್ಬರಿಗೂ ಅಕ್ಕಿಗೆ ಬದಲಾಗಿ ಕೊಡುತ್ತಿದ್ದೇವೆ. ಯುವನಿಧಿ ಯೋಜನೆಯ ಪ್ರಕ್ರಿಯೆ ನಡೆಯುತ್ತಿದ್ದು ಜನವರಿಯಲ್ಲಿ ಕೊಡಲು ಪ್ರಯತ್ನ ಮಾಡಲಾಗುತ್ತಿದೆ ಎಂದರು.

ಮಹಿಳೆಯರು ದೇಶದ ಜಿಡಿಪಿಗೆ ಕೊಡುಗೆ ನೀಡಬೇಕು

ಮಹಿಳೆಯರು ಆರ್ಥಿಕವಾಗಿ ಸಾಮಾಜಿಕವಾಗಿ ಸಬಲರಾಗಬೇಕು. ಅವರೂ ದೇಶದ ಜಿಡಿಪಿಗೆ ಕೊಡುಗೆಯನ್ನು ನೀಡಬೇಕು ಎಂದರು. ಆರು ತಿಂಗಳಲ್ಲಿ ಇವೆಲ್ಲವನ್ನೂ ಮಾಡಲಾಗಿದೆ. ಮಾರುಕಟ್ಟೆಯಲ್ಲಿ ಮಹಿಳೆಯರಿಗೆ ಹೆಚ್ಚು ಲಾಭ ಸಿಗಲು ಗುಣಮಟ್ಟದ ವಸ್ತುಗಳನ್ನು ತಯಾರು ಮಾಡಬೇಕು. ಅದಕ್ಕೆ ಅಗತ್ಯವಿರುವ ತಾಂತ್ರಿಕ ಜ್ಞಾನವನ್ನು ಕೊಡುವ ಕೆಲಸವನ್ನು ಇಲಾಖೆ ಮಾಡುತ್ತದೆ.

ಯುವಕ, ಯುವಕರಿಗೆ ಮಾರುಕಟ್ಟೆಯಲ್ಲಿ ಬೇಡಿಕೆಯಲ್ಲಿರುವ ಕೌಶಲ್ಯಾಭಿವೃದ್ಧಿ ಮಾಡಿದರೆ 2 ವರ್ಷಗಳಲ್ಲಿ ಉದ್ಯೋಗ ಸಿಗುವುದು ಸುಲಭವಾಗುತ್ತದೆ. ತರಬೇತಿ ಮತ್ತು ಯುವನಿಧಿ ಎರಡೂ ಆದರೆ ಸಮಾಜದಲ್ಲಿ ಆರ್ಥಿಕ, ಸಾಮಾಜಿಕ ಬದಲಾವಣೆ ತರಲು ಸಾಧ್ಯವಾಗುತ್ತದೆ. ಯುವ ಶಕ್ತಿ, ಮಹಿಳೆಯರು ರಾಜ್ಯದ ಸಂಪತ್ತು. ಆದ್ದರಿಂದ ನಿಮಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದೇವೆ ಎಂದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+