ಸಿಎಂ ಸಿದ್ದರಾಮಯ್ಯ ಅವರ ಬಟ್ಟೆಗೆ ಬೆಂಕಿ

ಬೆಂಗಳೂರು, ಅಕ್ಟೋಬರ್​ 02: ರಾಜಕಾರಣದಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲದ ರಾಜಕಾರಣ ಎಂದು ಸಿದ್ದರಾಮಯ್ಯ ಹೆಸರು ಗಳಿಸಿದ್ದರು. ಆದರೆ, ಮುಡಾ ಹಗರಣ ಪ್ರಕರಣದ ಆರೋಪದಲ್ಲಿ ಅವರ ವಿರುದ್ಧ ಕೋರ್ಟ್‌ ಆದೇಶದ ಮೇರೆಗೆ ಮೈಸೂರು ಲೋಕಾಯುಕ್ತದಲ್ಲಿ ಎಫ್‌ಐಆರ್‌ ದಾಖಲಾಯಿತು. ಬಳಿಕ ಮುಡಾಗೆ 14 ಸೈಟ್‌ಗಳನ್ನು ಮರಳಿಸಿದರೂ ಕೂಡ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ತಪ್ಪದಂತಾಗಿದೆ.

ಕಿತ್ತೂರು ಉತ್ಸವದ ಜ್ಯೋತಿ ಬೆಳಗುವ ವೇಳೆ ಸಿಎಂ ಸಿದ್ದರಾಮಯ್ಯ ಅವರ ಬಟ್ಟೆಗೆ ಬೆಂಕಿ ಹೊತ್ತಿಕೊಂಡಿದ್ದು, ಇದನ್ನು ಕಂಡ ಗನ್ ಮ್ಯಾನ್​ ಕೂಡಲೆ ಬೆಂಕಿ ನಂದಿಸಿದ್ದಾರೆ. ಇದರಿಂದ ಅನಾಹುತ ತಪ್ಪಿದಂತಾಗಿದೆ. ವಿಧಾನಸೌಧದ ಮುಂಭಾಗ ಆಯೋಜನೆ ಮಾಡಿದ್ದ ಕಿತ್ತೂರು ಉತ್ಸವ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

CM Siddaramaiah s cloth caught Fire While Lighting Deepa

ಸಿಎಂ ಸಿದ್ದರಾಮಯ್ಯ ಅವರು ಕಿತ್ತೂರು ಉತ್ಸವಕ್ಕೆ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಬಳಿಕ, ಕಿತ್ತೂರು ಉತ್ಸವದ ಠಥಕ್ಕೆ ಚಾಲನೆ ನೀಡುವ ವೇಳೆ ಪಕ್ಕದಲ್ಲಿದ್ದ ದೀಪದ ಬೆಂಕಿ ಸಿದ್ದರಾಮಯ್ಯ ಅವರ ಶಲ್ಯಗೆ ಹೊತ್ತಿಕೊಂಡಿದೆ ಎಂದು ತಿಳಿದುಬಂದಿದೆ.

ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್‌: ಮುಡಾ ಹಗರಣ ಪ್ರಕರಣ ಆರೋಪಕ್ಕೆ ಸಂಬಂಧಿದಂತೆ ಮೈಸೂರು ಲೋಕಾಯುಕ್ತದಲ್ಲಿ ಸಿಎಂ ಸಿದ್ದರಾಮಯ್ಯ ಮೇಲೆ ಎಫ್‌ಆರ್‌ಆರ್‌ ದಾಖಲು ಮಾಡಲಾಗಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಆದೇಶದಂತೆ ಲೋಕಾಯುಕ್ತ ಎಸ್‌ಪಿ ಉದೇಶ್ ಎಫ್‌ಐಆರ್‌ ದಾಖಲಿಸಿದ್ದರು.

ಪ್ರಕರಣದಲ್ಲಿ ಎ1 ಸಿದ್ದರಾಮಯ್ಯ, ಎ2 ಪತ್ನಿ ಪಾರ್ವತಿ ಸಿದ್ದರಾಮಯ್ಯ, ಎ3 ಬಾಮೈದ ಮಲ್ಲೊಕಾರ್ಜುನ ಸ್ವಾಮಿ, ಭೂ ಮಾಲೀಕ ದೇವರಾಜು ಎ4 ಆರೋಪಿಯಾಗಿದ್ದಾರೆ. ಎ5 ಇತರರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖ ಮಾಡಿದ್ದಾರೆ.

ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯ ವಿರುದ್ಧ ಹಲವು ಸೆಕ್ಷನ್‌ಗಳ ಅಡಿಯಲಲ್ಲಿ ಎಫ್‌ಐಆರ್‌ ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 120 ಬಿ, 166, 403, 420, 426, 465, 468, 340, 351 ಕಾಯ್ದೆಗಳ ಅಡಿಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ. ಅಷ್ಟೇ ಅಲ್ಲದೆ, ಭ್ರಷ್ಟಾಚಾರ ತಡೆ ಕಾಯ್ದೆ 1988ರ ಅಡಿಯೂ ಎಫ್‌ಐಆರ್‌ ದಾಖಲಿಸಿದ್ದಾರೆ.

ಯಾವ್ಯಾವ ಸೆಕ್ಷನ್‌ ಏನು ಹೇಳುತ್ತದೆ?: ಐಪಿಸಿ ಸೆಕ್ಷನ್ 120 ಬಿ-ಕ್ರಮಿನಲ್‌ ಪಿತೂರಿ ಆರೋಪ (ಜೀವಾವಧಿ ಶಿಕ್ಷೆ, 166-ಸರ್ಕಾರಿ ಸೇವಕನಿಂದ ಕಾನೂನು ಉಲ್ಲಂಘನೆ, 403-ಅಪ್ರಾಮಾಣಿಕವಾಗಿ ಆಸ್ತಿ ದುರ್ಬಳಕೆ, 406-ಅಪರಾಧಿಕ ನಂಬಿಕೆ ದ್ರೋಹ (3 ವರ್ಷ ಜೈಲು ಶಿಕ್ಷೆ ಅಥವಾ ದಂಡ), 420-ವಂಚನೆ (ಮೋಸದಿಂದ ಲಾಭ ಪಡೆಯುವುದು), 426-ಕಿಡಿಗೇಡಿತನಕ್ಕೆ ಶಿಕ್ಷೆ (3 ತಿಂಗಳ ಶಿಕ್ಷೆ ಅಥವಾ ದಂಡ), 465-ಪೋರ್ಜರಿ, 468 ಪೋರ್ಜರಿ ಮಾಡಿದ್ದಕ್ಕೆ ಶಿಕ್ಷೆ (5 ವರ್ಷ ಜೈಲು & ದಂಡ), 340-ಅಕ್ರಮ ಬಂಧನ, 351-ಇತರರಿಗೆ ಹಾನಿ ಮಾಡುವುದು.

ನ್ಯಾಯಾಲಯದ ಆದೇಶದಂತೆ ಎಫ್‌ಐಆರ್ ದಾಖಲಿಸುವಂತೆ ಮೈಸೂರು ಲೋಕಾಯುಕ್ತ ಎಡಿಜಿಪಿ ಮನೀಷ್ ಕರ್ಭೀಕರ್ ಮೈಸೂರು ಲೋಕಾಯುಕ್ತ ಎಸ್ಪಿಗೆ ಸೂಚನೆ ನೀಡಿದ್ದರು. ಕಾಯ್ದೆಗಳ ವಿಚಾರದಲ್ಲಿ ಸ್ಪಷ್ಟತೆ ಇಲ್ಲದ ಕಾರಣ ಮೈಸೂರು ಲೋಕಾಯುಕ್ತ ಪೊಲೀಸರು ಯಾವ ಕಾಯ್ದೆಯಡಿ ಎಫ್‌ಐಆರ್‌ ದಾಖಲಿಸಬೇಕು ಎಂಬ ಗೊಂದಲದಲ್ಲಿ ಸಿಲುಕಿದ್ದರು. ಇದರಿಂದ ಎಫ್‌ಐಆರ್‌ ದಾಖಲು ವಿಳಂಬವಾಗಿತ್ತು. ಈಗ ಲೋಕಾಯುಕ್ತ ಎಡಿಜಿಪಿ ಅವರೇ ಸಿಆರ್‌ಪಿಸಿ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಸೂಚಿಸಿರುವುದರಿಂದ ಅದರಂತೆಯೇ ಎಫ್‌ಐಆರ್ ದಾಖಲಾಗಿದೆ.

ಮೈಸೂರು ಲೋಕಾಯುಕ್ತ ಎಸ್ಪಿ ಉಮೇಶ್ ರಾಜ್ಯ ಲೋಕಾಯುಕ್ತರಿಗೆ ಪತ್ರ ಬರೆದು, ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್‌ ಅನ್ನು ಪಿಎನ್‌ಎಸ್‌ ಕಾಯ್ದೆಯಡಿ ದಾಖಲಿಸಬೇಕಾ ಅಥವಾ ಸಿಆರ್‌ಪಿಸಿ ಅಥವಾ ಐಪಿಸಿ ಸೆಕ್ಷನ್‌ನಡಿ ಎಫ್‌ಐಆರ್‌ ದಾಖಲಿಸಬೇಕಾ ಎಂಬ ಬಗ್ಗೆ ಸ್ಪಷ್ಟತೆ ಕೊಡಿ ಎಂದು ಕೇಳಿದ್ದರು. ಇದಕ್ಕೆ ಲೋಕಾಯುಕ್ತ ಪ್ರಧಾನ ಕಚೇರಿಯಿಂದ ಉತ್ತರ ಬಂದಿದ್ದು ಸಿಆರ್‌ಪಿಡಿ ಅಡಿ ಪ್ರಕರಣ ದಾಖಲಿಸುವಂತೆ ಸೂಚಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+