ಬೆಳಗಾವಿ ಸಾಂಬ್ರಾ ವಿಮಾಣ ನಿಲ್ದಾಣದದಲ್ಲಿ ಸಿಎಂ ಸಿದ್ದರಾಮಮಯ್ಯ ವಿಮಾನ ಪ್ರವೇಶಕ್ಕೆ ನಿರಾಕರಣೆ-ಕಾರಣ ಏನು?

ಬೆಳಗಾವಿ, ಏಪ್ರಿಲ್‌, 28: ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿಶೇಷ ವಿಮಾನ ಇಳಿಯಲು ಅನುಮತಿ ನಿರಾಕರಿಸಲಾಗಿದೆ. ಕಾರಣ ಏನು ಗೊತ್ತಾ ಇಲ್ಲಿದೆ ನೋಡಿ ಮಾಹಿತಿ.

ಸಾಂವಿಧಾನಿಕ ಮುಖ್ಯಸ್ಥರಾದ ಪಿಎಂ ಮತ್ತು ಸಿಎಂ ಇಂದು (ಏಪ್ರಿಲ್‌ 28) ಲೋಕಸಭಾ ಚುನಾವಣಾ ಹಿನ್ನೆಲೆ ಬೆಳಗಾವಿ ಪ್ರವಾಸದಲ್ಲಿದ್ದು, ಇಬ್ಬರ ವಿಮಾನಗಳು ಬೆಳಗಾವಿಯಲ್ಲಿ ಇಳಿಯಬೇಕಿತ್ತು. ಆದರೆ ಶನಿವಾರ (ಏಪ್ರಿಲ್‌ 27) ತಡರಾತ್ರಿಯೇ ಬೆಳಗಾವಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಇಂದು ಭಾನುವಾರ ನಗರದ ಮಾಲಿನಿ ಮೈದಾನದಲ್ಲಿ ಸಾರ್ವಜನಿಕ ಸಭೆಯ ಬಳಿಕ ಶಿರಸಿಗೆ ತೆರಳಲಿದ್ದಾರೆ.

CM Siddaramaiah s Flight Denied to Landing at Sambra Airport what is the reason

ಇಂದು ಬೆಳಗ್ಗೆ 11:45ಕ್ಕೆ ಸಾಂಬ್ರಾ ವಿಮಾನ ನಿಲ್ದಾಣದಿಂದ ಪ್ರಧಾನಿ ತೆರಳುವ ಹಿನ್ನೆಲೆಯಲ್ಲಿ ಇತರ ವಿಮಾನಗಳ ಪ್ರವೇಶಕ್ಕೆ ಸಾಂಬ್ರಾ ನಿಲ್ದಾಣದಲ್ಲಿ ನಿಷೇಧಿಸಲಾಗಿದೆ. ಈ ಹಿನ್ನೆಲೆ ಇದೇ ನಿಲ್ದಾಣಕ್ಕೆ ಬರಬೇಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅನುಮತಿಯನ್ನು ನಿರಾಕರಿಸಲಾಗಿದೆ. ಬಳಿಕ ಅವರು ಕೊಲ್ಲಾಪುರದತ್ತ ಪ್ರಯಾಣ ಬೆಳೆಸಿದ್ದಾರೆ ಎನ್ನುವ ಮಾಹಿತಿ ಇದೆ.

ಬೆಳಗಾವಿ ಜಿಲ್ಲೆಯ ವಿವಿಧ ಪ್ರಚಾರ ಸಭೆಗಳಲ್ಲಿ ಭಾಗವಹಿಸಬೇಕಿರುವ ಸಿದ್ದರಾಮಯ್ಯ ಅವರು ಪರ್ಯಾಯವಾಗಿ ಕೊಲ್ಲಾಪುರ ವಿಮಾನ ನಿಲ್ದಾಣದಲ್ಲಿ ಇಳಿದು, ರಸ್ತೆ ಮಾರ್ಗವಾಗಿ ಬೆಳಗಾವಿ ಜಿಲ್ಲೆ ಪ್ರವೇಶಿಸಲಿದ್ದಾರೆ.

ಕಾಂಗ್ರೆಸ್‌ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ: ರಾಜ್ಯದ ಈಗಾಗಲೇ 14 ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಗಿದ್ದು, ಇನ್ನುಳಿದ ಕ್ಷೇತ್ರಗಳಿಗೆ ಮೇ 7ರಂದು ನಡೆಯಲಿದೆ. ಈ ಹಿನ್ನೆಲೆ ಇಂದು (ಏಪ್ರಿಲ್‌ 28) ಪ್ರಧಾನಿ ಮೋದಿ ಅವರು ಬೆಳಗಾವಿಗೆ ಭೇಟಿ ನೀಡಿದ್ದಾರೆ. ಹಾಗಾದರೆ ಈ ವೇಳೆ ಅವರು ಏನು ಹೇಳಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಬೆಳಗಾವಿಯ ಮಾಲಿನಿ ಸಿಟಿ ಮೈದಾನದಲ್ಲಿ ಬಿಜೆಪಿ ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದರು.

ಕರ್ನಾಟಕದಲ್ಲಿ ಕಾಂಗ್ರೆಸ್‌ನಿಂದ ತುಷ್ಠೀಕರಣ ರಾಜಕಾರಣ ನಡೆಯುತ್ತಿದೆ. ಕೋಮುಗಲಭೆ, ಬಾಂಬ್ ಸ್ಫೋಟದಂತಹ ಪ್ರಕರಣಗಳು ಹೆಚ್ಚುತ್ತಿವೆ. ಬೆಳಗಾವಿಯಲ್ಲಿ ಮಹಿಳೆಯ ಮೇಲೆ ದಾಳಿ ನಡೆಸಲಾಯಿತು. ಚಿಕ್ಕೋಡಿಯಲ್ಲಿ ಜೈನಮುನಿ ಹತ್ಯೆಯಾಗಿದೆ. ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ ನಡೆದಿದೆ. ಬೆಂಗಳೂರಿನಲ್ಲಿ ಕೆಫೆ ಬಾಂಬ್ ಸ್ಫೋಟ ನಡೆಯಿತು. ಭಯದ ವಾತಾವರಣ ನಿರ್ಮಾಣವಾಗಿದೆ ಎಂದು ವಾಗ್ದಾಳಿ ನಡೆಸಿದರು.

ರಾಜ, ಮಹಾರಾಜರ ಜಮೀನು ಕಸಿದುಕೊಂಡರು. ಕಾಂಗ್ರೆಸ್ ವೋಟ್ ಬ್ಯಾಂಕ್‌ಗಾಗಿ ಏನು ಬೇಕಾದರೂ ಮಾಡುತ್ತದೆ ಎಂದು ಗುಡುಗಿದರು. ಇನ್ನು ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಅಭಿವೃದ್ಧಿ ಬಂದ್ ಆಗಿದೆ. ರಸ್ತೆ, ನೀರು, ಬರ, ಉದ್ಯೋಗ ಸಮಸ್ಯೆಗಳು ರಾಜ್ಯದಲ್ಲಿ ತಾಂಡವವಾಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬೆಳಗಾವಿ ಮತ್ತು ಚಿಕ್ಕೋಡಿಯ ಸಹೋದರ ಸಹೋದರಿಯರಿಗೆ ನನ್ನ ನಮಸ್ಕಾರಗಳು ಎಂದು ಕನ್ನಡದಲ್ಲಿ ಮಾತು ಆರಂಭಿಸಿದ ಮೋದಿ, ತಾಯಿ ಭುವನೇಶ್ವರಿ ಮತ್ತು ಸವದತ್ತಿ ಯಲ್ಲಮ್ಮಾಗೆ ಪ್ರಣಾಮ ಸಲ್ಲಿಸುತ್ತೇನೆ ಎಂದರು. ಇನ್ನು ಕರ್ನಾಟಕದ ಎಲ್ಲ ಮತದಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನಾನು ಕರ್ನಾಟಕದಲ್ಲಿ ಹೋದಲ್ಲೆಲ್ಲ ಮತ್ತೊಮ್ಮೆ ಮೋದಿ ಸರ್ಕಾರ ಬರಬೇಕೆಂದು ಬಯಸುತ್ತಿದ್ದಾರೆ ಎಂದರು.

ಸಂತೋಷ್‌ ಲಾಡ್‌ ಹೇಳಿದ್ದೇನು?: ಅಶ್ಲೀಲ ವಿಡಿಯೋ ಇಡೀ ರಾಜ್ಯಾದ್ಯಂತ ಸದ್ದು ಮಾಡುತ್ತಿರುವ ಬೆನ್ನಲ್ಲೇ ಸಂಸದ ಪ್ರಜ್ವಲ್‌ ರೇವಣ್ಣ ಅವರು ವಿದೇಶಕ್ಕೆ ಹಾರಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಸಂತೋಷ್‌ ಲಾಡ್‌ ಏನು ಹೇಳಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಅಶ್ಲೀಲ ವಿಡಿಯೋ ಪೆನ್‌ಡ್ರೈವ್‌ ಪ್ರಕರಣವನ್ನು ಎಸ್‌ಐಟಿ ತನಿಖೆಗೆ ವಹಿಸಲಾಗಿದ್ದು, ಈ ಬಗ್ಗೆ ಪ್ರಜ್ವಲ್‌ ರೇವಣ್ಣ ಅವರನ್ನು ವಿದೇಶದಿಂದ ಕರೆತಂದು ತನಿಖೆ ನಡೆಸಲು ಎಸ್‌ಐಟಿ ಸಜ್ಜಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.

ಶಿವಮೊಗ್ಗದಲ್ಲಿ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯಿಸಿ, ಸರ್ಕಾರ ಈ ಪ್ರಕರಣವನ್ನು ಎಸ್‌ಐಟಿಗೆ ವಹಿಸಿದೆ. ಆ ಘಟನೆಗಳು ನಡೆಯಬಾರದಿತ್ತು, ನಡೆದು ಹೋಗಿದೆ. ಈ ವಿಚಾರದಲ್ಲಿ ಯಾರೇ ತಪ್ಪಿತಸ್ಥರಿದ್ದಾರೂ ಅವರಿಗೆ ನಮ್ಮ ಸರ್ಕಾರ ಶಿಕ್ಷೆ ನೀಡಲಿದೆ ಎಂದು ಹೇಳಿದ್ದಾರೆ. ಇನ್ನು ಸಂಸ್ರಸ್ತ ಮಹಿಳೆಯರ‌ ವಿಡಿಯೋ, ಪೋಟೋಗಳು ವೈರಲ್ ಆಗಿದ್ದು, ಈ ಬೆಳವಣಿಗೆ ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದರು.

"ಸಂಸದ ಪ್ರಜ್ವಲ್ ರೇವಣ್ಣ ವಿಶೇಶಕ್ಕೆ ಹೋಗುವ ಮೊದಲು ರೆಡ್ ಕಾರ್ನರ್ ನೋಟೀಸ್ ಹೊರಡಿಸಬಹುದಿತ್ತು. ಏರ್‌ಪೋರ್ಟ್‌ಗಳನ್ನು ಮ್ಯಾನೇಜ್‌ ಮಡ್ತಿರೋದ್ಯಾರು? ಪ್ರಶ್ನಿದರಲ್ಲದೆ, ಯಾಕೆ ಕೇಂದ್ರ ಬಿಜೆಪಿ ಸರ್ಕಾರ ಈ ಬಗ್ಗೆ ಗಮನ ಹರಿಸಿಲ್ಲ. ಬಿಜೆಪಿ ನಾಯಕರು ಯಾಕೆ ಉತ್ತರ ನೀಡುತ್ತಿಲ್ಲ," ಎಂದು ವಾಗ್ದಾಳಿ ನಡೆಸಿದರು.

ಇಂತಹ ಘಟನೆ ನಡೆದಿರುವುದು ದುರದೃಷ್ಟಕರವಾಗಿದ್ದು, ರಾಜ್ಯ ಸರ್ಕಾರ ಈ ಬಗ್ಗೆ ಗಮನ ಹರಿಸಿದೆ. ದೂರು ಕೂಡ ದಾಖಲಾಗಿದ್ದು, ಎಸ್ಐಟಿ ತನಿಖೆ ನಡೆದ ಬಳಿಕ ಈ ಬಗ್ಗೆ ಮಾತನಾಡೋಣ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+