• search
  • Live TV
ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಇಂದು ಕುಮಾರಸ್ವಾಮಿ

|

ಬೆಳಗಾವಿ, ಡಿಸೆಂಬರ್ 14: ಕಬ್ಬು ಬೆಳೆಗಾರರಿಗೆ ಒಪ್ಪಂದದಂತೆ ನೀಡಬೇಕಾಗಿದ್ದ ಬಾಕಿ ಪಾವತಿಸದ ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಸಭೆ ನಡೆಸಿ, ಬಾಕಿ ಪಾವತಿಗೆ ಸೂಚನೆ ನೀಡಲು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಪ್ರತಿಭಟನಾ ನಿರತ ಕಬ್ಬು ಬೆಳೆಗಾರರನ್ನು ತಮ್ಮ ಕಛೇರಿಯಲ್ಲಿ ಭೇಟಿಯಾದ ಮುಖ್ಯಮಂತ್ರಿಗಳು ಸಕ್ಕರೆ ಇಲಾಖೆ ಕಾರ್ಯದರ್ಶಿ, ಆಯುಕ್ತರು ಹಾಗೂ ಬೆಳಗಾವಿ ಜಿಲ್ಲಾಧಿಕಾರಿಗಳು ಈ ಕುರಿತು ಕ್ರಮ ಕೈಗೊಂಡು, ಕಬ್ಬು ಬೆಳೆಗಾರರ ಹಿತ ರಕ್ಷಿಸುವಂತೆ ನಿರ್ದೇಶನ ನೀಡಿದರು.

15 ದಿನದಲ್ಲಿ ಬಾಕಿ ಪಾವತಿಸಲು ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಸೂಚನೆ: ಎಚ್‌ಡಿಕೆ

ಅದರಂತೆ ಶುಕ್ರವಾರ ಬೆಳಿಗ್ಗೆ 10.30 ಗಂಟೆಗೆ ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಹಿರಿಯ ಅಧಿಕಾರಿಗಳು ಸಭೆ ನಡೆಸಲಿದ್ದಾರೆ.

ಸಕ್ಕರೆ ಉತ್ಪಾದನೆ: ಸರ್ಕಾರದಿಂದ ವರದಿ ಕೋರಿದ ಹೈಕೋರ್ಟ್

ಸಕ್ಕರೆ ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ, ಸಕ್ಕರೆ ಆಯುಕ್ತ ಅಜಯ್ ನಾಗಭೂಷಣ್ ಮೊದಲಾದವರು ಉಪಸ್ಥಿತರಿದ್ದರು.

English summary
Karnataka Chief Minister HD Kumaraswamy will be meeting owners of sugar mills in Belagavi and Bagalkot districts on Friday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X