ಬೆಳಗಾವಿಯ ಪ್ರವಾಹಪೀಡಿತ ಪ್ರದೇಶಗಳಲ್ಲಿ ನಾಳೆ ಸಿಎಂ ವೈಮಾನಿಕ ಸಮೀಕ್ಷೆ

ಬೆಳಗಾವಿ, ಆಗಸ್ಟ್ 24: ಸಹ್ಯಾದ್ರಿ ಹಾಗೂ ಪಶ್ಚಿಮ ‌ಘಟ್ಟ ಪ್ರದೇಶದಲ್ಲಿ ಸುರಿದ ಧಾರಾಕಾರ ಮಳೆಯಿಂದ ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟೆ, ಗದಗ ಜಿಲ್ಲೆಯ ಕೆಲ ಗ್ರಾಮಗಳು ಪ್ರವಾಹಕ್ಕೆ ತುತ್ತಾಗಿರುವ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ನಾಳೆ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.

ಬೆಳಿಗ್ಗೆ 9ಕ್ಕೆ ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಸಿಎಂ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಯ ಸಚಿವರು, ಸಂಸದರು ಶಾಸಕರ ಜತೆಗೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 10.30 ಸಭೆ ನಡೆಸಲಿದ್ದಾರೆ. ಈ ಮೊದಲು ಸಿಎಂ ಯಡಿಯೂರಪ್ಪನವರು ಸುವರ್ಣ ಸೌಧದಲ್ಲಿ ಜನಪ್ರತಿನಿಧಿಗಳ ಸಭೆ ನಡೆಸಲು ನಿರ್ಧರಿಸಿದ್ದರು. ಪ್ರವಾಸ ವೇಳಾಪಟ್ಟಿ ಬದಲಾಗಿದ್ದು, ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸಭೆ ನಡೆಸಲಿದ್ದಾರೆ.

Belagavi: CM Yediyurappa Aerial Suvey In Flood Affected Areas Tomorrow

ಬಳಿಕ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ವಿಜಯಪುರದ ಲಾಲ್ ಬಹಾದ್ದೂರ್ ಜಲಾಶಯಕ್ಕೆ ಭೇಟಿ ನೀಡಲಿದ್ದು, ಆಲಮಟ್ಟಿ ‌ಅತಿಥಿ ಗೃಹದಲ್ಲಿ ವಿಜಯಪುರ, ಬಾಗಲಕೋಟೆ, ಗದಗ ಜಿಲ್ಲೆಯ ಜನಪ್ರತಿನಿಧಿಗಳ ಸಭೆ ನಡೆಸಲಿದ್ದಾರೆ. ಸಭೆ ಬಳಿಕ ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕೂಡ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ವೈಮಾನಿಕ ಸಮೀಕ್ಷೆ ಬಳಿಕ 3.30ಕ್ಕೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ‌ ಆಗಮಿಸುವ ಸಿಎಂ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+