ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸುರೇಶ್ ಅಂಗಡಿ ಸ್ಮಾರಕ ನಿರ್ಮಾಣದ ಭರವಸೆ ಕೊಟ್ಟ ಸಿಎಂ

|
Google Oneindia Kannada News

ಬೆಳಗಾವಿ, ಅಕ್ಟೋಬರ್ 7: ಕೊರೊನಾ ಸೋಂಕಿನಿಂದ ಇತ್ತೀಚೆಗೆ ನಿಧನರಾದ ಕೇಂದ್ರ ರಾಜ್ಯ ಖಾತೆ ರೈಲ್ವೆ ಸಚಿವ ದಿವಂಗತ ಸುರೇಶ್‌ ಅಂಗಡಿ ಅವರ ಮನೆಗೆ ಇಂದು ಭೇಟಿ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಸುರೇಶ್ ಅಂಗಡಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ನಮನ‌ ಸಲ್ಲಿಸಿದರು. ನಂತರ ಕುಟುಂಬದ ಸದಸ್ಯರ ಜತೆ ಮಾತನಾಡಿದ ಅವರು, ದಿ.ಸುರೇಶ್ ಅಂಗಡಿ ಅವರ ಸಜ್ಜನಿಕೆಯ ನಡವಳಿಕೆಯನ್ನು ಸ್ಮರಿಸಿದರು. ದಿ.ಸುರೇಶ್ ಅಂಗಡಿ ಅವರ ತಾಯಿ ಸೋಮವ್ವ ಅವರ ಕೈಹಿಡಿದು ಕೆಲಹೊತ್ತು ಭಾವುಕರಾದ ಮುಖ್ಯಮಂತ್ರಿಗಳು, ಧೈರ್ಯದಿಂದ ಇರುವಂತೆ ಸಾಂತ್ವನ ಹೇಳಿದರು. ಸಾವಿಗೆ ದುಃಖ ವ್ಯಕ್ತಪಡಿಸಿದ ಅವರು, ಸುರೇಶ್ ಅಂಗಡಿ ಅವರು ಆಸ್ಪತ್ರೆಯಲ್ಲಿ ಇದ್ದಾಗ ಆರೋಗ್ಯವಾಗಿ ಇದ್ದೀನಿ ಎಂದು ತಿಳಿಸಿದ್ದನ್ನು ನೆನಪಿಸಿಕೊಂಡರು.

ಬೆಳಗಾವಿ: ದಿ.ಸುರೇಶ ಅಂಗಡಿ ಕುಟುಂಬಕ್ಕೆ ರಾಜ್ಯಪಾಲ ವಜುಭಾಯ್ ವಾಲಾ ಸಾಂತ್ವನಬೆಳಗಾವಿ: ದಿ.ಸುರೇಶ ಅಂಗಡಿ ಕುಟುಂಬಕ್ಕೆ ರಾಜ್ಯಪಾಲ ವಜುಭಾಯ್ ವಾಲಾ ಸಾಂತ್ವನ

ದೆಹಲಿಯಲ್ಲಿ ಸ್ಮಾರಕ ನಿರ್ಮಾಣಕ್ಕೆ ಸೂಚನೆ: ದೆಹಲಿಯ ರುದ್ರಭೂಮಿಯ ಅಭಿವೃದ್ಧಿಯ ಜತೆಗೆ ಅಲ್ಲಿ ದಿ.ಸುರೇಶ್ ಅಂಗಡಿ ಅವರ ಸ್ಮಾರಕ ನಿರ್ಮಾಣ ಮಾಡುವುದಕ್ಕೆ ಸಂಬಂಧಿಸಿದಂತೆ ಈಗಾಗಲೇ ನಿರ್ದೇಶನ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ಸುರೇಶ್ ಅಂಗಡಿ ಅವರ ಸಂಬಂಧಿಕರೂ ಆಗಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಬಾಕಿ ಉಳಿದಿದ್ದ ರೈಲ್ವೆ ಇಲಾಖೆಯ ಬಹುತೇಕ ಯೋಜನೆಗಳಿಗೆ ಅಂಗಡಿ ಅವರು ಚಾಲನೆ ನೀಡಿದ್ದರು ಎಂದು ನೆನಪಿಸಿಕೊಂಡರು.

Belagavi: CM Yediyurappa Assured To Build Suresh Angadi Memorial

ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಕರ್ನಾಟಕದ ವಿವಿಧ ರೈಲ್ವೆ ಯೋಜನೆಗಳನ್ನು ಪೂರ್ಣಗೊಳಿಸಲು ತೀವ್ರ ಆಸಕ್ತಿಯಿಂದ ಕೆಲಸ ಮಾಡುತ್ತಿದ್ದರು ಎಂದು ಸ್ಮರಿಸಿದರು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಕೂಡ ಸುರೇಶ್ ಅಂಗಡಿ ಅವರೊಂದಿಗಿನ ಒಡನಾಟ ಸ್ಮರಿಸಿ, ಕುಟುಂಬಕ್ಕೆ ಸಾಂತ್ವನ ಹೇಳಿದರು.

ಪತ್ನಿ ಮಂಗಲಾ ಸುರೇಶ್ ಅಂಗಡಿ, ಮಕ್ಕಳಾದ ಶ್ರದ್ಧಾ ಹಾಗೂ ಸ್ಫೂರ್ತಿ ಮತ್ತಿತರರು ಇದ್ದರು. ಶಾಸಕ ಅನಿಲ್ ಬೆನಕೆ, ಮಾಜಿ ಶಾಸಕ ಸಂಜಯ ಪಾಟೀಲ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸೇರಿದಂತೆ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

English summary
CM Yediyurappa visited suresh angadi house who recently died of coronavirus and he promissed to build memorial of suresh angadi
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X