ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡಿ.4 ರಿಂದ ಸಿಎಂ ಯಡಿಯೂರಪ್ಪ ಬೆಳಗಾವಿ ಜಿಲ್ಲಾ ಪ್ರವಾಸ

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಡಿಸೆಂಬರ್ 2: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಇದೇ ಡಿಸೆಂಬರ್ 4 ಹಾಗೂ 5 ರಂದು ಎರಡು ದಿನಗಳ ಕಾಲ ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಡಿಸೆಂಬರ್‌ 4ರ ಮಧ್ಯಾಹ್ನ 3.40ಕ್ಕೆ ಬೆಂಗಳೂರಿನಿಂದ ವಿಶೇಷ ವಿಮಾನ ಮೂಲಕ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಸಿಎಂ ಯಡಿಯೂರಪ್ಪ, ಅದೇ ದಿನದಿಂದು ಸಂಜೆ 7.30ಕ್ಕೆ ನಡೆಯಲಿರುವ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಎಚ್.ವಿಶ್ವನಾಥ್ ಅನರ್ಹ ವಿಚಾರ: ರಮೇಶ್ ಜಾರಕಿಹೊಳಿ ಮಹತ್ವದ ಹೇಳಿಕೆಎಚ್.ವಿಶ್ವನಾಥ್ ಅನರ್ಹ ವಿಚಾರ: ರಮೇಶ್ ಜಾರಕಿಹೊಳಿ ಮಹತ್ವದ ಹೇಳಿಕೆ

ಬೆಳಗಾವಿಯ ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ ನಡೆಯಲಿದ್ದು, ಬಸವಕಲ್ಯಾಣ, ಮಸ್ಕಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಹಾಗೂ ಬೆಳಗಾವಿ ಲೋಕಸಭಾ ಉಪ ಚುನಾವಣೆ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆ ನಡೆಯಲಿದೆ.

Belagavi: CM Yediyurappa Belagavi District Tour On From December 4

ಅದೇ ರೀತಿ ಕರ್ನಾಟಕ ರಾಜ್ಯದ ಗ್ರಾಮ ಪಂಚಾಯತಿ ಚುನಾವಣೆ ಘೋಷಣೆಯಾಗಿದ್ದು, ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲ್ಲುವಂತೆ ಕಾರ್ಯಕರ್ತರಿಗೆ ಶಕ್ತಿ ತುಂಬಲು ಈ ಸಭೆ ಸಹಕಾರಿಯಾಗಲಿದೆ ಎನ್ನಬಹುದು.

ನಂತರ ಡಿಸೆಂಬರ್ 5ರ ಬೆಳಗ್ಗೆ 10 ಗಂಟೆಗೆ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಬೆಳಗ್ಗೆ 10 ರಿಂದ ಮಧ್ಯಾಹ್ನ 2.30 ರವರೆಗೆ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೇರಿದಂತೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ರಾಜ್ಯ ಬಿಜೆಪಿ ನಾಯಕರು ಭಾಗಿಯಾಗಲಿದ್ದಾರೆ.

ಡಿಸೆಂಬರ್ 5ರ ಸಂಜೆ 7.30ಕ್ಕೆ ಬೆಳಗಾವಿಯಿಂದ ಬೆಂಗಳೂರಿಗೆ ವಿಮಾನ ಮೂಲಕ ಸಿಎಂ ಯಡಿಯೂರಪ್ಪ ವಾಪಸ್ ಆಗಲಿದ್ದಾರೆ.

English summary
Chief Minister BS Yediyurappa will tour Belagavi district for two days on December 4 and 5.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X