ಚಿತ್ರಗಳು: ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ
ಬೆಳಗಾವಿ, ಆಗಸ್ಟ್ 25: ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಹಲವು ದಿನಗಳ ಬಳಿಕ ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ. ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಿಗೆ ಅವರು ಮಂಗಳವಾರ ಭೇಟಿ ನೀಡುತ್ತಿದ್ದಾರೆ.
ಯಡಿಯೂರಪ್ಪ ಮಂಗಳವಾರ ಬೆಳಗಾವಿ, ಧಾರವಾಡ, ವಿಜಯಪುರ ಜಿಲ್ಲೆಗಳ ಪ್ರವಾಸವನ್ನು ಕೈಗೊಂಡಿದ್ದಾರೆ. ಜನಪ್ರತಿನಿಧಿಗಳ ಜೊತೆ ಮಳೆ ಹಾನಿಯ ಬಗ್ಗೆ ಅವರು ಸಭೆಗಳನ್ನು ನಡೆಸಲಿದ್ದು, ಪ್ರವಾಹದಿಂದ ಹಾನಿಗೊಳಗಾದ ಪ್ರದೇಶದಲ್ಲಿ ವೈಮಾನಿಕ ಸಮೀಕ್ಷೆ ನಡೆಸುತ್ತಿದ್ದಾರೆ.
ಮಂಗಳವಾರ ಬೆಳಗ್ಗೆ ಯಡಿಯೂರಪ್ಪ ಅವರು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳ ಜನಪ್ರತಿನಿಧಿಗಳ ಹಾಗೂ ಹಿರಿಯ ಅಧಿಕಾರಿಗಳ ಸಭೆಯನ್ನು ನಡೆಸಿದರು.
ಈ ಸಭೆಯ ಬಳಿಕ ಅವರು ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳ ವೈಮಾನಿಕ ಸಮೀಕ್ಷೆಯನ್ನು ನಡೆಸುತ್ತಿದ್ದಾರೆ. ಕಂದಾಯ ಸಚಿವ ಆರ್. ಅಶೋಕ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಸಚಿವರು ಮುಖ್ಯಮಂತ್ರಿಗಳ ಜೊತೆಗಿದ್ದಾರೆ.

ಪ್ರವಾಹ ಪೀಡಿತ ಪ್ರದೇಶಗಳು
ಮಹಾರಾಷ್ಟ್ರದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಕೃಷ್ಣಾ ನದಿಯಲ್ಲಿ ಪ್ರವಾಹ ಉಂಟಾಗಿತ್ತು. ಇದರಿಂದಾಗಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಪಾರವಾದ ಹಾನಿ ಉಂಟಾಗಿದೆ. ಈ ಪ್ರದೇಶದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ನಡೆಸುತ್ತಿದ್ದಾರೆ.

ಬೆಳಗಾವಿಯಲ್ಲಿ ವೈಮಾನಿಕ ಸಮೀಕ್ಷೆ
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳ ವೈಮಾನಿಕ ಸಮೀಕ್ಷೆಯನ್ನು ಯಡಿಯೂರಪ್ಪ ನಡೆಸುತ್ತಿದ್ದಾರೆ. ಹಲವಾರು ಸಚಿವರು ಯಡಿಯೂರಪ್ಪ ಅವರ ಜೊತೆಗಿದ್ದಾರೆ.

ದೆಹಲಿಗೆ ಭೇಟಿ ನೀಡಲಾಗುತ್ತದೆ
"ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಸಮರ್ಪಕ ಪರಿಹಾರ ನೀಡಲು ಯೋಜನೆ ರೂಪಿಸಲಾಗುವುದು. ಎಲ್ಲ ಮಾಹಿತಿಯನ್ನು ಕೇಂದ್ರ ಸರ್ಕಾರಕ್ಕೆ ಕಳಿಸಲಾಗುವುದು. ಮುಂದಿನ ವಾರ ದೆಹಲಿಗೆ ಹೋಗಿ ಹೆಚ್ವಿನ ಪರಿಹಾರ ಬಿಡುಗಡೆಗೆ ಮನವಿ ಮಾಡಲಾಗುತ್ತದೆ" ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದರು.

ಪ್ರವಾಹ ಇಳಿಮುಖ
ಮಹಾರಾಷ್ಟ್ರದಲ್ಲಿ ಮಳೆ ಕಡಿಮೆಯಾಗಿದೆ. ಇದರಿಂದಾಗಿ ಕೃಷ್ಣಾ ನದಿಗೆ ಹರಿದು ಬರುತ್ತಿರುವ ನೀರಿನ ಪ್ರಮಾಣವೂ ಕಡಿಮೆಯಾಗಿದ್ದು, ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಇಳಿಮುಖವಾಗಿದೆ.












Click it and Unblock the Notifications