ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಾಸ್ಕ್‌ ಧರಿಸಿಲ್ಲ ಎಂದು ಸಿಆರ್‌ಪಿಎಫ್ ಯೋಧನಿಗೆ ಇದೆಂಥಾ ಶಿಕ್ಷೆ

|
Google Oneindia Kannada News

ಬೆಳಗಾವಿ, ಏಪ್ರಿಲ್ 27: ಲಾಕ್‌ಡೌನ್ ಉಲ್ಲಂಘನೆ ಮಾಡಿದ ಆರೋಪದ ಮೇರೆಗೆ ಸಿಆರ್‌ಪಿಎಫ್ ಯೋಧರೊಬ್ಬರನ್ನು ಬಂಧಿಸಿದ್ದು, ಕೈಗೆ ಕೋಳ ಹಾಕಿ ಅವರನ್ನು ಅಪರಾಧಿಯಂತೆ ನಡೆಸಿಕೊಳ್ಳಲಾಗುತ್ತಿದೆ ಎನ್ನುವ ವಿಚಾರ ತಿಳಿದುಬಂದಿದೆ.

Recommended Video

ಪತ್ರಕರ್ತರ ಮೇಲೆ ಹಲ್ಲೆ ಮಾಡಿದ ಶಾಸಕ ಶ್ರೀಕಂಠೇಗೌಡ ಮತ್ತು ಅವರ ಪುತ್ರ,ದೂರು ದಾಖಲು

ಬೈಕ್ ತೊಳೆಯುತ್ತಿದ್ದ ವೇಳೆ ಕೇವಲ ಮಾಸ್ಕ್ ಧರಿಸಿಲ್ಲ ಎನ್ನುವ ಕಾರಣಕ್ಕೆ ಅವರನ್ನು ಬಂಧಿಸಿದ್ದಾರೆ.ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಎಕ್ಸಾಂಬ ನಿವಾಸಿ ಸಚಿನ್‌ ಸಾವಂತ್‌ ಎಂಬ ಯೋಧನ ಮೇಲೆ ಪೊಲೀಸರು ಹಲ್ಲೆ ಮಾಡಿ ಬಂಧನ ಮಾಡಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಮನೆಯ ಮುಂಭಾಗದಲ್ಲಿ ಬೈಕ್‌ ತೊಳೆಯುತ್ತಿದ್ದ ಸಚಿನ್ ಸಾವಂತ್‌ ಮಾಸ್ಕ್‌ ಹಾಕಿಲ್ಲ ಎಂಬ ಕಾರಣಕ್ಕಾಗಿ ಪೊಲೀಸರು ಪ್ರಶ್ನಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.ಯೋಧನಿಗೆ ಕೈಕೋಳ ತೊಡಿಸಿ ಕೂರಿಸಿರುವ ಫೋಟೋ ಕೂಡಾ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಈ ಕುರಿತು ಸಚಿವ ಸಿಟಿ ರವಿ ಟ್ವೀಟ್ ಮಾಡಿದ್ದುಈ ಘಟನೆ ನಡೆದಿದ್ದು ದುರದೃಷ್ಟಕರ ಎಂದಿದ್ದಾರೆ. ಈ ಕುರಿತಾಗಿ ಸಚಿವರಾದ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಜೊತೆಗೆ ಮಾತನಾಡಿದ್ದೇನೆ.

Cobra Jawan Tied With Chains At Belagavi Police Atation For Violating Lockdown

ಪ್ರಕರಣವನ್ನು ಸೌಹಾರ್ದಯುತವಾಗಿ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.ಘಟನೆಗೆ ನಿಜವಾದ ಕಾರಣ ಏನು ಎಂಬುದು ಇದುವರೆಗೂ ಸ್ಪಷ್ಟವಾಗಿಲ್ಲ.

ಈ ವೇಳೆ ಪೊಲೀಸರು ಹಾಗೂ ಸಿಆರ್‌ಪಿಎಫ್‌ ಕೋಬ್ರಾ ಕಮಾಂಡೋ ಸಚಿನ್ ನಡುವೆ ಮಾತಿನ ಚಕಮುಕಿ ನಡೆಯುತ್ತದೆ. ಘಟನೆಯ ವಿಡಿಯೋ ಕೂಡಾ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

English summary
Central Reserve Police Force (CRPF) Additional Director General has written a letter to DGP Karnataka requesting an inquiry into the incident wherein a commando of the central agency was tied with chains at a police station in Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X