ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಚಿವ ಉಮೇಶ್ ಕತ್ತಿ ಅಗಲಿಕೆಗೆ ನಾಡಿನ ಗಣ್ಯರಿಂದ ಸಂತಾಪ

|
Google Oneindia Kannada News

ಬೆಳಗಾವಿ, ಸೆಪ್ಟೆಂಬರ್ 7: ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ (61) ಮಂಗಳವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿದ್ದ 61 ವರ್ಷದ ಉಮೇಶ್ ಕತ್ತಿ ಅವರು ಮಂಗಳವಾರ ರಾತ್ರಿ 10.30ರ ಸುಮಾರಿಗೆ ಬಾತ್ ರೂಮ್‌ಗೆ ತೆರಳಿದ್ದಾಗ ಅಲ್ಲಿಯೇ ಕುಸಿದು ಬಿದ್ದಿದ್ದಾರೆ. ಅವರ ಕುಟುಂಬದವರು ತಕ್ಷಣ ಅವರನ್ನು ಸರ್ಕಾರಿ ಕಾರಿನಲ್ಲಿಯೇ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಚಿವ ಉಮೇಶ್ ಕತ್ತಿ ಅವರಿಗೆ ತೀವ್ರ ನಿಗಾ ಘಟಕದಲ್ಲಿ ತಜ್ಞ ವೈದ್ಯರ ತಂಡದಿಂದ ಚಿಕಿತ್ಸೆ ನೀಡಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

Recommended Video

Umesh Katti ಸಾವು ಇಡೀ ರಾಜ್ಯಕ್ಕೇ ನೋವು ತಂದಿದೆ ಎಂದ R Ashok

ಉಮೇಶ್ ಕತ್ತಿ ಪಾರ್ಥೀವ ಶರೀರ ಏರ್‌ಲಿಫ್ಟ್‌ ಮೂಲಕ ಬೆಳಗಾವಿಗೆ ಒಯ್ಯಲು ಸಿದ್ಧತೆ ನಡೆಸಲಾಗುತ್ತಿದೆ. ಎಚ್‌ಎಎಲ್ ವಿಮಾನ ನಿಲ್ದಾಣದಿಂದ ಬೆಳಗಾವಿಯ ಅವರ ಸ್ವಗ್ರಾಮಕ್ಕೆ ಏರ್‌ಲಿಫ್ಟ್‌ ಮೂಲಕ ಕರೆದೊಯ್ಯಲಾಗುತ್ತಿದೆ. ಉಮೇಶ್ ಕತ್ತಿಯ ಅಂತ್ಯಕ್ರಿಯೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಭಾಗಿಯಾಗಲಿದ್ದಾರೆ. ಉಮೇಶ್ ಕತ್ತಿ ಅವರ ಅಗಲಿಕೆಗೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ರಾಜ್ಯದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಉಮೇಶ್ ಕತ್ತಿ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ.

Condolences from the dignitaries for the passing away of Minister Umesh Katti

'ಆಹಾರ ಮತ್ತು ನಾಗರೀಕ ಸರಬರಾಜು ಖಾತೆ ಸಚಿವರಾದ ಉಮೇಶ್ ಕತ್ತಿ ಅವರ ನಿಧನದಿಂದ ನನಗೆ ತೀವ್ರ ಆಘಾತವಾಗಿದೆ. ಜನತಾ ಪರಿವಾರದ ಹಿರಿಯರಾಗಿದ್ದ ಕತ್ತಿ ಅವರು ಸ್ನೇಹಜೀವಿ ಆಗಿದ್ದರಲ್ಲದೆ, ತಮ್ಮ ನೇರ ನಡೆ ನುಡಿಯಿಂದ ನಮ್ಮೆಲ್ಲರ ಪ್ರೀತಿ ಗೌರವಕ್ಕೆ ಪಾತ್ರರಾಗಿದ್ದರು. ಉಮೇಶ್ ಕತ್ತಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಕುಟುಂಬ ಸದಸ್ಯರಿಗೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಇನ್ನೂ ಬಿಜೆಪಿ ರಾಜಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಉಮೇಶ್ ಕತ್ತಿ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ. 'ಪಕ್ಷದ ಹಿರಿಯ ನಾಯಕರು, ರಾಜ್ಯ ಸಚಿವರಾದ ಮಾನ್ಯ ಉಮೇಶ್ ಕತ್ತಿಯವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ದೇವರು ಅವರ ಕುಟುಂಬ ಹಾಗೂ ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ' ಎಂದು ಟ್ವೀಟ್ ಮಾಡಿದ್ದಾರೆ.

ಸಿಎಂ, ಸಚಿವರಿಂದ ಉಮೇಶ್ ಕತ್ತಿ ಅಂತಿಮ ದರ್ಶನ, ಬೆಳಗಾವಿ ಜಿಲ್ಲೆಯಲ್ಲಿ ಶಾಲಾ-ಕಾಲೇಜು, ಸರ್ಕಾರಿ ರಜೆಸಿಎಂ, ಸಚಿವರಿಂದ ಉಮೇಶ್ ಕತ್ತಿ ಅಂತಿಮ ದರ್ಶನ, ಬೆಳಗಾವಿ ಜಿಲ್ಲೆಯಲ್ಲಿ ಶಾಲಾ-ಕಾಲೇಜು, ಸರ್ಕಾರಿ ರಜೆ

ಹಿರಿಯ ರಾಜಕೀಯ ಮುತ್ಸದ್ಧಿ, ರಾಜ್ಯದ ಸಚಿವ ಉಮೇಶ್ ಕತ್ತಿ ಅವರ ನಿಧನ ಅತ್ಯಂತ ದುರದೃಷ್ಟಕರ ಮತ್ತು ತೀವ್ರ ಆಘಾತವನ್ನುಂಟು ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳು, ಅರಣ್ಯ ಇಲಾಖೆ ಹಾಗೂ ವಿಜಯಪುರ ಉಸ್ತುವಾರಿ ಸಚಿವರಾಗಿ ಉಮೇಶ್ ಕತ್ತಿ ಅವರು ಹೊಣೆ ನಿರ್ವಹಿಸುತ್ತಿದ್ದರು. ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿ ಬಗ್ಗೆ ಅವರು ವಿಶೇಷ ಕಾಳಜಿ ಹೊಂದಿದ್ದರು. ಪಕ್ಷದ ಸಂಘಟನೆಗೆ ಹೆಚ್ಚಿನ ಶ್ರಮ ವಹಿಸಿದ್ದರು ಎಂದು ಅವರು ತಿಳಿಸಿದ್ದಾರೆ. ಕ್ಷವು ಒಬ್ಬ ಕ್ರಿಯಾಶೀಲ ಮುಖಂಡ ಜನಸೇವಕನನ್ನು ಕಳೆದುಕೊಂಡಂತಾಗಿದೆ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತನು ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುವುದಾಗಿ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ. 'ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಸಚಿವರಾದ ಉಮೇಶ್ ಕತ್ತಿ ಅವರ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಕುಟುಂಬವರ್ಗಕ್ಕೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಬರೆದಿದ್ದಾರೆ.

ಇನ್ನೂ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ. 'ಅರಣ್ಯ ಸಚಿವ, ನನ್ನ ಆಪ್ತ ಸಹೋದ್ಯೋಗಿ ಶ್ರೀ ಉಮೇಶ್ ಕತ್ತಿ ಅವರ ಅಕಾಲಿಕ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಅವರ ನಿಧನದಿಂದ ರಾಜ್ಯ ಓರ್ವ ನುರಿತ ಮುತ್ಸದ್ಧಿ,ಕ್ರಿಯಾಶೀಲ ಮುಖಂಡ ಹಾಗೂ ನಿಷ್ಠಾವಂತ ಜನಸೇವಕನನ್ನು ಕಳೆದುಕೊಂಡಿದೆ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ'.

ಅರಣ್ಯ ಹಾಗೂ ಆಹಾರ ಖಾತೆ ಸಚಿವ ಉಮೇಶ್ ಕತ್ತಿ ಯವರ ದಿಢೀರ್ ನಿಧನಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಕಂಬನಿ ಮಿಡಿದಿದ್ದಾರೆ. ಭಾರತೀಯ ಜನತಾ ಪಕ್ಷದ ಹಿರಿಯ ನಾಯಕರೂ ಹಾಗೂ ಸಂಪುಟ ಸಹೋದ್ಯೋಗಿಯೂ ಆಗಿದ್ದ ಉಮೇಶ್ ಕತ್ತಿ ಯವರ ಧಿಡೀರ್ ನಿಧನದ ಸುದ್ದಿ ತಿಳಿದು, ದಿಗ್ಭ್ರಮೆ ಗೊಂಡಿದ್ದೇನೆ. ಕರ್ನಾಟಕ ವಿಧಾನಸಭೆಯ ಅತ್ಯಂತ ಹಿರಿಯ ಸದಸ್ಯರುಗಳಲ್ಲಿ ಒಬ್ಬರಾಗಿದ್ದ, ಅತ್ಯಂತ ಅನುಭವಿ ಹಾಗೂ ಉತ್ಸಾಹಿ ರಾಜಕಾರಣಿಯಾಗಿದ್ದ ಹಾಗೂ ಉತ್ತರ ಕರ್ನಾಟಕ ಭಾಗದ ಜನತೆಯ ದ್ವನಿಯಾಗಿದ್ದ ಉಮೇಶ್ ಕತ್ತಿಯವರ ನಿಧನದಿಂದ ರಾಜ್ಯಕ್ಕೆ ಅದರಲ್ಲಿಯೂ ವಿಶೇಷವಾಗಿ, ಉತ್ತರ ಕರ್ನಾಟಕ ಭಾಗಕ್ಕೆ ತುಂಬಲಾರದ ನಷ್ಟವಾಗಿದೆ. ದಿವಂಗತರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಅವರ ಕುಟುಂಬ ವರ್ಗಕ್ಕೆ, ದುಃಖವನ್ನು ಭರಿಸುವ ಶಕ್ತಿ ಭಗವಂತ ನೀಡಲಿ, ಎಂದು ಪ್ರಾರ್ಥಿಸುತ್ತೇನೆ.

ಸಚಿವ ಪ್ರಹ್ಲಾದ್ ಜೋಶಿ, 'ಆತ್ಮೀಯರಾಗಿದ್ದ ಹಿರಿಯ ಸಚಿವ ಉಮೇಶ್ ಕತ್ತಿಯವರು ನಿಧನರಾದ ಸುದ್ದಿ ತಿಳಿದು ತುಂಬಾ ಆಘಾತವಾಗಿದೆ. ಸದಾ ಕನ್ನಡಿಗರು ಹಾಗೂ ಕರ್ನಾಟಕದ ಕುರಿತು ಚಿಂತಿಸುತ್ತಿದ್ದ ಹಾಗೂ ನಾಡಿನ ಏಳಿಗೆಗಾಗಿ ಶ್ರಮಿಸುತ್ತಿದ್ದ ಅವರು ತುಂಬ ಬೇಗ ನಮ್ಮನ್ನು ಅಗಲಿದ್ದಾರೆ' ಎಂದು ಸಂತಾಪ ಸೂಚಿಸಿದ್ದಾರೆ.

English summary
Food and Forestry Minister Umesh Katti (61) passed away on Tuesday night due to a massive heart attack and the dignitaries expressed their condolences.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X