ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೋದಿ, ರಾಜ್ಯಪಾಲರ ವಿರುದ್ಧ ಧಿಕ್ಕಾರ ಕೂಗಿದ 'ಕೈ' ಕಾರ್ಯಕರ್ತರು

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ ಮೇ.18 : ರಾಜ್ಯದೆಲ್ಲೆಡೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ ಮುಂದುವರೆಯುತ್ತಲೇ ಇದೆ.

ಕರ್ನಾಟಕ ಮುಖ್ಯಮಂತ್ರಿಯಾಗಿ ಬಿ.ಎಸ್‌. ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ, ರಾಜ್ಯದಾದ್ಯಂತ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿದೆ.

ಶಾ ತಂತ್ರ ಕರ್ನಾಟಕದಲ್ಲಿ ನಡೆಯಲ್ಲ, ನಡೆಯಲೂ ಬಿಡುವುದಿಲ್ಲ: ಸಿದ್ದರಾಮಯ್ಯಶಾ ತಂತ್ರ ಕರ್ನಾಟಕದಲ್ಲಿ ನಡೆಯಲ್ಲ, ನಡೆಯಲೂ ಬಿಡುವುದಿಲ್ಲ: ಸಿದ್ದರಾಮಯ್ಯ

ಇಂದು ಶುಕ್ರವಾರ ಬೆಳಗಾವಿ ನಗರದ ಚೆನ್ನಮ್ಮ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಪಾಲರ ವಿರುದ್ಧ ಪ್ರತಿಭಟನೆ ನಡೆಸಿದರು. ರಾಜ್ಯಪಾಲರು ಕಾಂಗ್ರೆಸ್ ಜೆಡಿಎಸ್ ಮೈತ್ರಿಕೂಟಕ್ಕೆ ನಿರಾಕರಣೆ ಮಾಡಿದ ಹಿನ್ನೆಲೆ ಪ್ರತಿಭಟನೆ ನಡೆಸಲಾಯಿತು.

Congress activists protested in Belgaum

ಸರ್ಕಾರ ರಚನೆಗೆ ರಾತ್ರೋರಾತ್ರಿ ಬಿಜೆಪಿಗೆ ಅವಕಾಶ ನೀಡುವ ಮೂಲಕ ರಾಜ್ಯಪಾಲರು, ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ. ಕುದುರೆ ವ್ಯಾಪಾರಕ್ಕೆ ಕುಮ್ಮಕ್ಕು ನೀಡಿದ್ದಾರೆ ಎಂದು ಕಾರ್ಯಕರ್ತರು ಆರೋಪಿಸಿದರು.

Congress activists protested in Belgaum

ರಾಜ್ಯಪಾಲರು ಮತ್ತು ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಕಾಂಗ್ರೆಸ್ ಮುಖಂಡ ಅರವಿಂದ ದಳವಾಯಿ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

English summary
Karnataka Election Results 2018: Congress activists protested in Belgaum.They protested against Prime Minister Narendra Modi and the governor.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X