ಬಿಎಸ್ ವೈ ಸಿಎಂ ಆದ ಬೆನ್ನಲ್ಲೇ ಬೆಳಗಾವಿಯಲ್ಲಿ ಕಾಂಗ್ರೆಸ್ ನಿಂದ ಪ್ರತಿಭಟನೆ
ಬೆಳಗಾವಿ, ಮೇ 17 : ಬಿ.ಎಸ್.ಯಡಿಯೂರಪ್ಪ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಸಲಾಗಿದೆ.
ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿರುವ ಕಾರ್ಯಕರ್ತರು ಬಿಜೆಪಿಯಿಂದ ಪ್ರಜಾ ಪ್ರಭುತ್ವದ ಕಗ್ಗೊಲೆಯಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಈ ವೇಳೆ ಪ್ರಧಾನಿ ಮೋದಿ ಹಾಗೂ ರಾಜ್ಯಪಾಲ ವಜುಬಾಯಿವಾಲಾ ವಿರುದ್ಧ ಘೋಷಣೆ ಕೂಗಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ ಬೆಳಗಾವಿಯಲ್ಲಿ ನಿಷೇಧಾಜ್ಞೆ ಹಿನ್ನೆಲೆ ಪ್ರತಿಭಟನೆಗೆ ಪೊಲೀಸರು ಅವಕಾಶ ನೀಡಲಿಲ್ಲ.

ಮೊನ್ನೆ ಬೆಳಗಾವಿಯಲ್ಲಿ ಎರಡು ಕೋಮುಗಳ ಮಧ್ಯೆ ಕಲ್ಲು ತೂರಾಟ ನಡೆದಿತ್ತು. ಹೀಗಾಗಿ ಕಾಂಗ್ರೆಸ್ ಕಚೇರಿ ಮುಂದೆ ಕಾರ್ಯಕರ್ತರು ಸರಳವಾಗಿ ಪ್ರತಿಭಟನೆ ನಡೆಸಿದರು.
ಎಲ್ಲೆಡೆ ಸರ್ಕಾರ ರಚನೆಗೆ ಬಿಜೆಪಿಗೆ ಆಹ್ವಾನ ನೀಡಿದ ರಾಜ್ಯಪಾಲ ವಜೂಭಾಯಿ ವಾಲಾ ಅವರ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ರಾಜ್ಯಪಾಲರ ನಡೆ ಸಂವಿಧಾನ ವಿರೋಧಿಯಾಗಿದೆ ಎಂದು ಆರೋಪಿಸಿರುವ ಬಿಜೆಪಿ ಸಿದ್ಧಾಂತ ವಿರೋಧಿ ಸಮಾನ ಮನಸ್ಕರ ಬಳಗದ ಸದಸ್ಯರು ಗುರುವಾರ ಮಧ್ಯಾಹ್ನ ರಾಜಭವನ ಚಲೋ ನಡೆಸಲು ಮುಂದಾಗಿದ್ದಾರೆ.











Click it and Unblock the Notifications