ಮಹದಾಯಿಯಲ್ಲಿ ಕಾಂಗ್ರೆಸ್, ಬಿಜೆಪಿ ರಾಜಕಾರಣ: ಪ್ರಜ್ವಲ್ ಕೆಂಡ
ಬೆಳಗಾವಿ, ಡಿಸೆಂಬರ್ 22: : ಜೆಡಿಎಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಬಳಿಕ ಪಕ್ಷ ಬಲವರ್ಧನೆಗೆ ರಾಜ್ಯ ಪ್ರವಾಸದಲ್ಲಿ ತೊಡಗಿರುವ ಯುವ ನಾಯಕ ಪ್ರಜ್ವಲ್ ರೇವಣ್ಣ ಅವರು ಇಂದು (ಡಿಸೆಂಬರ್ 22) ಬೆಳಗಾವಿಯಲ್ಲಿ ರಾಷ್ಟ್ರೀಯ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.
ಬೆಳಗಾವಿ ನಗರದಲ್ಲಿರುವ ಗಾಂಧಿ ಭವನದಲ್ಲಿ ಶುಕ್ರವಾರ ಜೆಡಿಎಎಸ್ ಸಮಾವೇಶದಲ್ಲಿ ಮಾತನಾಡಿದ ಪ್ರಜ್ವಲ್ ರೇವಣ್ಣ, "ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ರಾಜಕಾರಣ ಮಾಡುತ್ತಿವೆ ಎಂದು ಕೆಂಡಕಾರಿದರು.

ಇಷ್ಟು ದಿನ ಮಹದಾಯಿ ಹೋರಾಟ ಮಾಡದ ಬಿಜೆಪಿಯವರನ್ನ ಜನರು ಪರಿವರ್ತನಾ ಯಾತ್ರೆಯಲ್ಲಿ ಒದ್ದಿದ್ದರಿಂದ ಎಚ್ಚರಾಗಿದ್ದಾರೆ. ಮುಂದಿನ ಚುನಾವಣೆಗೆ ಮಹದಾಯಿ ಮಂತ್ರವಾಗಿಟ್ಟುಕೊಂಡು ಹೋಗುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.
ಮಹದಾಯಿ, ಸಾಲಮನ್ನಾ ವಿಚಾರದಲ್ಲಿ ಒಬ್ಬರಿಗೊಬ್ಬರು ಗೂಬೆ ಕೂರಿಸುತ್ತಿದ್ದಾರೆ. ಮಹದಾಯಿ ಸಮಸ್ಯೆ ಪ್ರಾದೇಶಿಕ ಪಕ್ಷದಿಂದ ಮಾತ್ರ ಬಗೆಹರಿಯುತ್ತದೆ ಎಂದು ಹೇಳಿದರು.












Click it and Unblock the Notifications