ಬೆಳಗಾವಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಶಾಪದಿಂದಲೇ ಕಾಂಗ್ರೆಸ್ ಅಭ್ಯರ್ಥಿಗೆ ಸೋಲು: ರಮೇಶ್ ಜಾರಕಿಹೊಳಿ
ಬೆಳಗಾವಿ, ಜೂನ್, 04: ಕುಂದಾನಗರಿ ಅಂತಲೇ ಪ್ರಖ್ಯಾತಿ ಪಡೆದಿರುವ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಜೆ ಅಭ್ಯರ್ಥಿ ಜಗದೀಶ್ ಶೇಟ್ಟರ್ ಅವರು ಗೆಲುವಿನ ನಗೆ ಬೀರಿದ್ದು, ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಸೋಲನುಭವಿಸಿದ್ದಾರೆ. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ರಮೇಶ್ ಜಾರಕಿಹೊಳಿಯವರು ಏನು ಹೇಳಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿತಿರಿ.
ಬೆಳಗಾವಿ ಲೋಸಭಾ ಕ್ಷೇತ್ರಕ್ಕೆ ಮೇ 7ರಂದು ಮತದಾನ ನಡೆದಿದ್ದು, ಇಂದು (ಜೂನ್ 04) ಫಲಿತಾಂಶ ಹೊರಬಿದ್ದಿದೆ. ಇನ್ನು ಬಿಜೆಪಿ ಅಭ್ಯರ್ಥಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ವಿರುದ್ಧ 1,65,758 ಮತಗಳ ಅಂತರದಿಂದ ಜಯಭಾರಿ ಬಾರಿಸಿದ್ದಾರೆ.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಸೋಲು ಹಿನ್ನೆಲೆ ಬೆಳಗಾವಿಯಲ್ಲಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಪ್ರತಿಕ್ರಿಯಿಸಿ, ಜಗದೀಶ್ ಶೆಟ್ಟರ್‌ಗೆ ಟಿಕೆಟ್ ಕೊಟ್ಟ ನಂತರ ಸ್ವಂತ ಹಣ ಖರ್ಚು ಮಾಡಿ ಕಾರ್ಯಕರ್ತರು ದುಡಿದಿದ್ದಾರೆ. ಅಹಂಕಾರದಿಂದ ಬಂದ ಅಭ್ಯರ್ಥಿಯನ್ನು ಕ್ಷೇತ್ರದ ಜನ ಸೋಲಿಸಿದ್ದಾರೆ. ಜಗದೀಶ್ ಶೆಟ್ಟರ್ ಗೆಲುವು ಬಿಜೆಪಿಯ ಸಾಮಾನ್ಯ ಕಾರ್ಯಕರ್ತರ ಗೆಲುವಾಗಿದೆ ಎಂದು ಹೇಳಿದ್ದಾರೆ.
ಅಂಗನವಾಡಿಯ ಪ್ರತಿಯೊಬ್ಬ ಕಾರ್ಯಕರ್ತೆಯರಿಂದ ಒಂದು ಲಕ್ಷ ಹಣ ವಸೂಲಿ ಮಾಡಲಾಗಿದ್ದು, ಈ ಶಾಪದಿಂದಲೇ ಬೆಳಗಾವಿಯಲ್ಲಿ ಕಾಂಗ್ರೆಸ್ ಸೋಲನುಭವಿಸಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ರಮೇಶ ಜಾರಕಿಹೊಳಿ ಗಂಭೀರ ಆರೋಪ ಮಾಡಿದರು.
ಚಕ್ರವರ್ತಿಯು ಬೆತ್ತಲೆಯಾಗಿದ್ದಾನೆ: ದೇಶದಲ್ಲಿ ಲೋಕಸಭಾ ಚುನಾಣೆಯ ಮತದಾನ 7 ಹಂತಗಳಲ್ಲಿ ನಡೆದಿದ್ದು, ಈ ಪೈಕಿ ಕರ್ನಾಟಕದಲ್ಲಿ ಏಪ್ರಿಲ್ 26 ಮತ್ತು ಮೇ 7ರಂದು ಎರಡು ಹಂತಗಳಲ್ಲಿ ಮತದಾನ ನಡೆದಿತ್ತು. ಇನ್ನು ಇಂದು (ಜೂನ್ 04) ಫಲಿತಾಂಶ ಹೊರಬಿದ್ದಿದ್ದು, ಈ ಬಗ್ಗೆ ಟ್ವೀಟ್ ಮೂಲಕ ಪ್ರಕಾಶ್ ರಾಜ್ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಹಾಗಾದರೆ ಅವರು ಏನು ಹೇಳಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ನೋಡಿ.
ಲೋಕಸಭಾ ಚುನಾವಣೆಯ ಫಲಿತಾಂಶ ಇಂದು ಪ್ರಕಟ ಆಗಿದ್ದು, ಆಡಳಿತರೂಢ ಬಿಜೆಪಿ ಪಕ್ಷ ಸರಳ ಬಹುಮತ ಪಡೆಯುವಲ್ಲಿ ವಿಫಲವಾಗಿದೆ. ಈ ಹಿನ್ನೆಲೆ ಬಿಜೆಪಿಗೆ ತನ್ನ ಮೈತ್ರಿಕೂಟದ ಇತರೆ ಪಕ್ಷಗಳ ಬೆಂಬಲವನ್ನು ಒಟ್ಟುಗೂಡಿಸುವ ಪರಿಸ್ಥಿತಿ ಬಂದಿದೆ. ಇನ್ನು ರಾಜ್ಯದಲ್ಲು ಬಿಜೆಪಿ 17, ಕಾಂಗ್ರೆಸ್ 9 ಮತ್ತು ಜೆಡಿಎಸ್ 2 ಸ್ಥಾನಗಳಲ್ಲಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಬಹುಬಾಷಾ ನಟ ಪ್ರಕಾಶ್ ರಾಜ್ ಅವರು, "ಚಕ್ರವರ್ತಿಯು ಬೆತ್ತಲೆಯಾಗಿದ್ದಾನೆ, ಈಗ ಅವನು ಬೇರೊಬ್ಬರ ಸಹಾಯ ಪಡೆದುಕೊಳ್ಳುವಂತಾಗಿದೆ. ಇಂಡಿಯಾ ಮತ್ತು ಜವಾಬ್ದಾರಿಯುತ ನಾಗರಿಕ ಸಮಾಜಕ್ಕೆ ಧನ್ಯವಾದಗಳು. ಅಹಂಕಾರವನ್ನು ಪಂಕ್ಚರ್ ಮಾಡಿ ಅವರ ಸ್ಥಾನವನ್ನು ತೋರಿಸಿದ್ದಕ್ಕೆ ಧನ್ಯವಾದಗಳು. ನಾವು ನಮ್ಮ ದೇಶಕ್ಕಾಗಿ ಉತ್ತಮವಾಗಿ ಹೋರಾಡಿದ್ದೇವೆ" ಎಂದು ಬರೆದುಕೊಂಡಿದ್ದಾರೆ. ಇದೀಗ ಈ ವಿಡಿಯೋ ಭಾರೀ ವೈರಲ್ ಆಗುತ್ತಿದೆ.












Click it and Unblock the Notifications