ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಐಸಿಸಿ ಸ್ಥಾನಕ್ಕೆ ರಾಜೀನಾಮೆಗೆ ಮುಂದಾದ ಸತೀಶ್ ಜಾರಕಿಹೊಳಿ

By Manjunatha
|
Google Oneindia Kannada News

Recommended Video

ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ತಮ್ಮ ಎಐಸಿಸಿ ಸ್ಥಾನಕ್ಕೆ ರಾಜೀನಾಮೆ ಕೊಡೋ ಸಾಧ್ಯತೆ | Oneindia Kannada

ಬೆಳಗಾವಿ, ಜೂನ್ 08: ಸಚಿವ ಸ್ಥಾನ ಸಿಗದುದ್ದರ ಬಗ್ಗೆ ತೀವ್ರ ಅಸಮಾಧಾನಗೊಂಡಿದ್ದ ಯಮಕನಮರಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ಅವರು ಎಐಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ರಾಜಿನಾಮೆ ನೀಡುವ ಸಾಧ್ಯತೆ ಹೆಚ್ಚಿದೆ.

ಸಚಿವ ಸ್ಥಾನ ಆಕಾಂಕ್ಷಿ ಆಗಿದ್ದ ಅವರಿಗೆ ಸಚಿವ ಸ್ಥಾನ ತಪ್ಪಿದ್ದಕ್ಕೆ ತೀವ್ರ ಅಸಮಾಧಾನಗೊಂಡಿದ್ದಾರೆ. ಈ ಕಾರಣ ಇಂದು ತಮ್ಮ ಬೆಂಬಲಿಗರು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಜೊತೆ ಜಾಧವ ನಗರದ ತಮ್ಮ ನಿವಾಸದಲ್ಲಿ ಸಭೆ ನಡೆಸಿದ ಬಳಿಕ ಮುಂದಿನ ತೀರ್ಮಾನ ಪ್ರಕಟಿಸುವುದಾಗಿ ಅವರು ತಿಳಿಸಿದ್ದಾರೆ.

ಸಹೋದರನಿಗಾಗಿ ಸಚಿವ ಸ್ಥಾನ ಬಿಡಲು ತಯಾರಿದ್ದಾರೆ ರಮೇಶ್ ಜಾರಕಿಹೊಳಿ ಸಹೋದರನಿಗಾಗಿ ಸಚಿವ ಸ್ಥಾನ ಬಿಡಲು ತಯಾರಿದ್ದಾರೆ ರಮೇಶ್ ಜಾರಕಿಹೊಳಿ

ಕಳೆದ ಬಾರಿ ಸಚಿವರಾಗಿದ್ದ ಸಚಿವರಾಗಿದ್ದ ಸತೀಶ್ ಜಾರಕಿಹೊಳಿ ಅವರು ಉತ್ತರದ ಭಾಗದ ಪ್ರಭಾವಿ ಕಾಂಗ್ರೆಸ್ ಮುಖಂಡರಲ್ಲಿ ಒಬ್ಬರೆಂದು ಗುರುತಿಸಿಕೊಂಡಿದ್ದರು. ಅವರಿಗೆ ಸಚಿವ ಸ್ಥಾನ ಪಕ್ಕಾ ಎಂದೇ ಎಣಿಸಲಾಗಿತ್ತು ಆದರೆ ಅವರ ಬದಲಿಗೆ ಅವರ ಸಹೋದರ ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಲಾಗಿದೆ.

Congress leader Satish Jarakiholi planing to resigns to AICC secratory post

ತಮ್ಮ ನಾಯಕನಿಗೆ ಸಚಿವ ಸ್ಥಾನ ಕೈತಪ್ಪಿರುವುದಕ್ಕೆ ಸತೀಶ್ ಜಾರಕಿಹೊಳಿ ಬೆಂಬಲಿಗರು ಎರಡು ದಿನದಿಂದಲೂ ಪ್ರತಿಭಟನೆ ಮಾಡುತ್ತಲೇ ಇದ್ದು ನಿನ್ನೆ ಕಲ್ಲುತೂರಾಟ ಸಹ ನಡೆಸಿದ್ದಾರೆ. ಈ ಸಂಬಂಧ ಕೆಲವರನ್ನು ಪೊಲೀಸರು ಬಂಧಿಸಿದ್ದಾರೆ.

ಸಚಿವರ ಅವಧಿ 2 ವರ್ಷಕ್ಕೆ ಮೊಟಕು: ಕಾಂಗ್ರೆಸ್‌ನಿಂದ ಮಾಸ್ಟರ್ ಪ್ಲಾನ್ಸಚಿವರ ಅವಧಿ 2 ವರ್ಷಕ್ಕೆ ಮೊಟಕು: ಕಾಂಗ್ರೆಸ್‌ನಿಂದ ಮಾಸ್ಟರ್ ಪ್ಲಾನ್

ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡದಿದ್ದಲ್ಲಿ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿಗಳ ಕಾಂಗ್ರೆಸ್‌ ಸದಸ್ಯರು ಸಾಮೂಹಿಕವಾಗಿ ರಾಜಿನಾಮೆ ನೀಡುವುದಾಗಿ ಹೇಳಲಾಗುತ್ತಿದ್ದು, ಸತೀಶ್ ಜಾರಕಿಹೊಳಿ ಸಹ ಎಐಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಲಿದ್ದಾರೆ ಎನ್ನಲಾಗಿದೆ.

ಈಗಾಗಲೇ ಸತೀಶ್ ಜಾರಕಿಹೊಳಿ ಅವರ ಕ್ಷೇತ್ರ ಯಮಕನಮರಡಿಯಲ್ಲಿ ಸತೀಶ್ ಬೆಂಬಲಿಗರು ಹೆದ್ದಾರಿ ತಡೆದು, ಟೈರ್‌ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸುತ್ತಿದ್ದಾರೆ.

English summary
Congress leader Satish Jarakiholi planing to resighs to AICC secratory post because he did not get the minister post in coalition government. Satish Jarakiholi's brother Ramesh Jarakiholi gets minister post this time.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X