• search
  • Live TV
ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೆಳಗಾವಿ: ಲೋಕಸಭೆ ಉಪ ಚುನಾವಣೆಗೂ ಮುನ್ನ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ

|

ಬೆಳಗಾವಿ, ಮಾರ್ಚ್ 22: ಬೆಳಗಾವಿ ಲೋಕಸಭೆ ಉಪ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಂತೆ ಕಾಣುತ್ತಿದೆ.

ರಾಜ್ಯ ಕಾಂಗ್ರೆಸ್ ನಾಯಕರು ಬೆಳಗಾವಿ ಕ್ಷೇತ್ರಕ್ಕೆ ಯಮಕನಮರಡಿ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿ ಲೋಕಸಭೆಗೆ ಕಳುಹಿಸುವ ತಯಾರಿಯಲ್ಲಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚಿಸಿದರೆ ಸ್ಪರ್ಧಿಸುವುದಾಗಿ ಸ್ವತಃ ಸತೀಶ್ ಜಾರಕಿಹೊಳಿ ಸಹ ಹೇಳಿದ್ದಾರೆ.

ಬೆಳಗಾವಿ ಉಪ ಚುನಾವಣೆ; ಕಣದಲ್ಲಿ ಬಿಜೆಪಿಯದ್ದೇ ಪ್ರಾಬಲ್ಯ! ಬೆಳಗಾವಿ ಉಪ ಚುನಾವಣೆ; ಕಣದಲ್ಲಿ ಬಿಜೆಪಿಯದ್ದೇ ಪ್ರಾಬಲ್ಯ!

ಆದರೆ, ಸತೀಶ್ ಜಾರಕಿಹೊಳಿಯವರಿಗೆ ಟಿಕೆಟ್ ನೀಡದಂತೆ ಯಮಕನಮರಡಿ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ವಿರುದ್ಧವೇ ಪ್ರತಿಭಟನೆ ನಡೆಸಿ ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ಅಸಮಾಧಾನ ಹೊರ ಹಾಕಿದರು.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗೋಟುರ ಗ್ರಾಮದಲ್ಲಿ ಯಮಕನಮರಡಿ ಮತ ಕ್ಷೇತ್ರದ ಯುವ ಘಟಕದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಸತೀಶ್ ಜಾರಕಿಹೊಳಿಯವರು ಯಮಕನಮರಡಿ ಶಾಸಕರಾಗಿಯೇ ಮುಂದುವರಿಯಲಿ ಎಂದು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸತೀಶ್ ಜಾರಕಿಹೊಳಿ ಅಭಿಮಾನಿಗಳು ಪಟ್ಟು ಹಿಡಿದಿದ್ದಾರೆ. ಟಿಕೆಟ್ ನೀಡದಂತೆ ಕಾಂಗ್ರೆಸ್ ಹೈಕಮಾಂಡ್‌ಗೂ ಮನವಿ ಮಾಡಿದ್ದಾರೆ.

ಮುಂದಿನ ಸಿಎಂ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರನ್ನು ಲೋಕಸಭೆಗೆ ಕಳುಹಿಸಿ ಸೈಡ್ ಲೈನ್ ಮಾಡುವ ಹುನ್ನಾರ ನಡೆದಿದೆ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆದ ಪರಿಸ್ಥಿತಿ ಸತೀಶ್ ಜಾರಕಿಹೊಳಿ ಅವರಿಗೂ ಬರಬಹುದು. ರಾಜ್ಯ ನಾಯಕರ ಹುನ್ನಾರದಿಂದ ದಲಿತ ನಾಯಕ ಸತೀಶ್ ಜಾರಕಿಹೊಳಿಯನ್ನು ಸೈಡ್ ಲೈನ್ ಮಾಡುವ ಕುತಂತ್ರ ನಡೆದಿದೆ ಎಂದು ಯುವ ಕಾಂಗ್ರೆಸ್ ಘಟಕದ ಪದಾಧಿಕಾರಿಗಳು ಆರೋಪಿಸಿದ್ದಾರೆ.

English summary
Congress party workers protesting not to give Belagavi Lok sabha by Election ticket to Satish Jarkiholi. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X