ರಾಜ್ಯದಲ್ಲಿ ಸ್ಫೋಟ, ಹತ್ಯೆ, ಹಲ್ಲೆ, ಗಲಭೆಗಳಿಗೆ ಕಾರಣವೇ ಕಾಂಗ್ರೆಸ್: ನಮೋ
ಬೆಳಗಾವಿ, ಏಪ್ರಿಲ್, 28: ರಾಜ್ಯದ ಈಗಾಗಲೇ 14 ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಗಿದ್ದು, ಇನ್ನುಳಿದ ಕ್ಷೇತ್ರಗಳಿಗೆ ಮೇ 7ರಂದು ನಡೆಯಲಿದೆ. ಈ ಹಿನ್ನೆಲೆ ಇಂದು (ಏಪ್ರಿಲ್ 28) ಪ್ರಧಾನಿ ಮೋದಿ ಅವರು ಬೆಳಗಾವಿಗೆ ಭೇಟಿ ನೀಡಿದ್ದಾರೆ. ಹಾಗಾದರೆ ಈ ವೇಳೆ ಅವರು ಏನು ಹೇಳಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಬೆಳಗಾವಿಯ ಮಾಲಿನಿ ಸಿಟಿ ಮೈದಾನದಲ್ಲಿ ಬಿಜೆಪಿ ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದರು.

ಕರ್ನಾಟಕದಲ್ಲಿ ಕಾಂಗ್ರೆಸ್‌ನಿಂದ ತುಷ್ಠೀಕರಣ ರಾಜಕಾರಣ ನಡೆಯುತ್ತಿದೆ. ಕೋಮುಗಲಭೆ, ಬಾಂಬ್ ಸ್ಫೋಟದಂತಹ ಪ್ರಕರಣಗಳು ಹೆಚ್ಚುತ್ತಿವೆ. ಬೆಳಗಾವಿಯಲ್ಲಿ ಮಹಿಳೆಯ ಮೇಲೆ ದಾಳಿ ನಡೆಸಲಾಯಿತು. ಚಿಕ್ಕೋಡಿಯಲ್ಲಿ ಜೈನಮುನಿ ಹತ್ಯೆಯಾಗಿದೆ. ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ ನಡೆದಿದೆ. ಬೆಂಗಳೂರಿನಲ್ಲಿ ಕೆಫೆ ಬಾಂಬ್ ಸ್ಫೋಟ ನಡೆಯಿತು. ಭಯದ ವಾತಾವರಣ ನಿರ್ಮಾಣವಾಗಿದೆ ಎಂದು ವಾಗ್ದಾಳಿ ನಡೆಸಿದರು.
ರಾಜ, ಮಹಾರಾಜರ ಜಮೀನು ಕಸಿದುಕೊಂಡರು. ಕಾಂಗ್ರೆಸ್ ವೋಟ್ ಬ್ಯಾಂಕ್‌ಗಾಗಿ ಏನು ಬೇಕಾದರೂ ಮಾಡುತ್ತದೆ ಎಂದು ಗುಡುಗಿದರು. ಇನ್ನು ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಅಭಿವೃದ್ಧಿ ಬಂದ್ ಆಗಿದೆ. ರಸ್ತೆ, ನೀರು, ಬರ, ಉದ್ಯೋಗ ಸಮಸ್ಯೆಗಳು ರಾಜ್ಯದಲ್ಲಿ ತಾಂಡವವಾಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬೆಳಗಾವಿ ಮತ್ತು ಚಿಕ್ಕೋಡಿಯ ಸಹೋದರ ಸಹೋದರಿಯರಿಗೆ ನನ್ನ ನಮಸ್ಕಾರಗಳು ಎಂದು ಕನ್ನಡದಲ್ಲಿ ಮಾತು ಆರಂಭಿಸಿದ ಮೋದಿ, ತಾಯಿ ಭುವನೇಶ್ವರಿ ಮತ್ತು ಸವದತ್ತಿ ಯಲ್ಲಮ್ಮಾಗೆ ಪ್ರಣಾಮ ಸಲ್ಲಿಸುತ್ತೇನೆ ಎಂದರು. ಇನ್ನು ಕರ್ನಾಟಕದ ಎಲ್ಲ ಮತದಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನಾನು ಕರ್ನಾಟಕದಲ್ಲಿ ಹೋದಲ್ಲೆಲ್ಲ ಮತ್ತೊಮ್ಮೆ ಮೋದಿ ಸರ್ಕಾರ ಬರಬೇಕೆಂದು ಬಯಸುತ್ತಿದ್ದಾರೆ ಎಂದರು.
ನಾವು ಛತ್ರಪತಿ ಶಿವಾಜಿ, ಭಗವಾನ್ ಬಸವೇಶ್ವರ ಅವರ ಅನುಯಾಯಿಗಳು. ಶಿವಾಜಿ ಪ್ರಜೆಗಳಿಗಾಗಿ ಸಂಘರ್ಷ ಮಾಡಿದವರು. ಬಸವೇಶ್ವರರು ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಮಹತ್ವ ಸಾರಿದವರು. ಭಾರತ ಪ್ರಜಾಪ್ರಭುತ್ವದ ತಾಯಿಯಾಗಿದೆ ಎಂದು ಮೋದಿ ಹೇಳಿದರು.
ಕಳೆದ 10 ವರ್ಷದಲ್ಲಿ 25 ಕೋಟಿ ಜನರು ಬಡತನದಿಂದ ಹೊರಗೆ ಬಂದಿದ್ದಾರೆ. ಹಾಗಾಗಿ ಜನರ ವಿಶ್ವಾಸ ವೃದ್ಧಿಯಾಗಿದೆ. ಬಡವರ ಕಲ್ಯಾಣಕ್ಕಾಗಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಬರಬೇಕು. ಭಾರತ ಮತ್ತಷ್ಟು ಬಲಾಢ್ಯವಾಗಲಿದೆ, ಭಾರತೀಯರು ಖುಷಿಯಾಗುತ್ತಾರೆ ಎಂದು ಮೋದಿ ಹೇಳಿದರು.
ಕೊರೋನಾ ಸಂದರ್ಭದಲ್ಲಿ ವ್ಯಾಕ್ಸಿನ್‌ಗೂ ಕಾಂಗ್ರೆಸ್ ವಿರೋಧಿಸಿತ್ತು, ಇದು ಬಿಜೆಪಿ ವ್ಯಾಕ್ಸಿನ್ ಎಂದರು. ಇವಿಎಂಗೂ ವಿರೋಧಿಸಿದ್ದು, ಇದು ಪ್ರಜಾಪ್ರಭುತ್ವಕ್ಕೆ ಮಾಡಿದ ಅವಮಾನವಾಗಿದೆ. ದೇಶಕ್ಕೆ ಅವಮಾನವಾಗುವ ರೀತಿಯಲ್ಲಿ ಮಾತನ್ನಾಡುವ ಮೂಲಕ ಕಾಂಗ್ರೆಸ್ ರಾಷ್ಟ್ರ ತಲೆ ತಗ್ಗಿಸುವಂತೆ ಮಾಡುತ್ತಿದೆ. ಇವಿಎಂ ಬಗ್ಗೆ ಸುಳ್ಳು ಹೇಳುವ ಮೂಲಕ ಲೋಕತಂತ್ರವನ್ನು ಬರ್ಬಾದ್ ಮಾಡಲು ಮುಂದಾಗಿದೆ ಎಂದರು.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications