ಬೆಳಗಾವಿ ಲೋಕಸಭಾ ಉಪಚುನಾವಣೆ: ಬಹುತೇಕ ಇವರೇ ಕಾಂಗ್ರೆಸ್ ಅಭ್ಯರ್ಥಿ!

ಬೆಳಗಾವಿ ಲೋಕಸಭಾ ಉಪಚುನಾವಣೆಗೆ ದಿನಾಂಕವನ್ನು ಇನ್ನೂ ಚುನಾವಣಾ ಆಯೋಗ ನಿಗದಿ ಮಾಡಬೇಕಷ್ಟೇ, ಆದರೆ, ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿ ಆಯ್ಕೆ ಸಂಬಂಧ ತಾಲೀಮನ್ನು ಆರಂಭಿಸಿದ್ದು, ವಿವಿಧ ಮುಖಂಡರುಗಳ ಜೊತೆ ಮಾತುಕತೆ ಆರಂಭಿಸಿದೆ.

ಕೇಂದ್ರ ಸಚಿವರಾಗಿದ್ದ ಮತ್ತು ಬೆಳಗಾವಿ ಸಂಸದ ಸುರೇಶ್ ಅಂಗಡಿಯವರ ನಿಧನದಿಂದ ಈ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯಬೇಕಿದೆ. ಅಂಗಡಿಯವರು ಕಳೆದ ಸೆಪ್ಟಂಬರ್ 23ರಂದು ದೆಹಲಿಯಲ್ಲಿ ನಿಧನಹೊಂದಿದ್ದರು.

ಬಿಜೆಪಿಯಲ್ಲಿ ಸುರೇಶ್ ಅಂಗಡಿ ಕುಟುಂಬದ ಸದಸ್ಯರಿಗೆ ಟಿಕೆಟ್ ನೀಡಬೇಕೇ ಅಥವಾ ಬೇರೆ ಮುಖಂಡರನ್ನು ಆಯ್ಕೆ ಮಾಡಬೇಕೇ ಎನ್ನುವ ವಿಚಾರದಲ್ಲಿ ಇನ್ನೂ ಗೊಂದಲವಿದೆ. ಜೊತೆಗೆ, ಹಲವು ಬಿಜೆಪಿ ಮುಖಂಡರು ಟಿಕೆಟ್ ಗಾಗಿ ಪ್ರಯತ್ನಿಸುತ್ತಿದ್ದಾರೆ.

ಇನ್ನು, ಕರ್ನಾಟಕ ವಿಧಾನಸಭೆಯ ಚಳಿಗಾಲದ ಅಧಿವೇಶನದ ಮೊದಲ ದಿನ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಅಭ್ಯರ್ಥಿ ಆಯ್ಕೆಯ ಸಂಬಂಧ ಚರ್ಚೆ ನಡೆಸಿದ್ದಾರೆ. ಒಂದು ಹೆಸರನ್ನು ಫೈನಲ್ ಮಾಡಲಾಗಿದ್ದು, ಅದನ್ನೇ ಅನುಮೋದನೆಗೆ ಕಳುಹಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಹಿರಿಯ ಮುಖಂಡ ಎಂ.ಬಿ.ಪಾಟೀಲ್

ಹಿರಿಯ ಮುಖಂಡ ಎಂ.ಬಿ.ಪಾಟೀಲ್

ಬೆಳಗಾವಿ ಲೋಕಸಭಾ ಚುನಾವಣೆಯ ಉಸ್ತುವಾರಿಯನ್ನು ಹಿರಿಯ ಮುಖಂಡ ಎಂ.ಬಿ.ಪಾಟೀಲ್ ಅವರಿಗೆ ವಹಿಸುವ ಸಾಧ್ಯತೆಯಿದೆ. ಅಭ್ಯರ್ಥಿ ಆಯ್ಕೆ ಸಂಬಂಧ ಕರೆದಿದ್ದ ಸಭೆಯಲ್ಲಿ ಸಿದ್ದರಾಮಯ್ಯ, ಡಿಕೆಶಿ, ಡಾ.ಪರಮೇಶ್ವರ್, ಎಂ.ಬಿ.ಪಾಟೀಲ್, ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್ ಮುಂತಾದವರು ಭಾಗವಹಿಸಿದ್ದರು.

ಬಿಜೆಪಿಯ ಭದ್ರಕೋಟೆಯಂತಿರುವ ಬೆಳಗಾವಿ

ಬಿಜೆಪಿಯ ಭದ್ರಕೋಟೆಯಂತಿರುವ ಬೆಳಗಾವಿ

ಸತತವಾಗಿ ಬಿಜೆಪಿಯ ಭದ್ರಕೋಟೆಯಂತಿರುವ ಬೆಳಗಾವಿಯಲ್ಲಿ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸುವ ನಿರ್ಧಾರಕ್ಕೆ ಕಾಂಗ್ರೆಸ್ ಬಂದಿದೆ. ಹೀಗಾಗಿ, ಕೆಪಿಸಿಸಿ ಕಾರ್ಯಾಧ್ಯಕ್ಷರಲ್ಲಿ ಒಬ್ಬರಾದ ಮತ್ತು ಬೆಳಗಾವಿಯ ಪ್ರಭಾವೀ ನಾಯಕ ಸತೀಶ್ ಜಾರಕಿಹೊಳಿಯನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಸುವ ಸಾಧ್ಯತೆಯಿದೆ.

ಬೆಳಗಾವಿ ಲೋಕಸಭಾ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಹೆಸರು ಅಂತಿಮ?

ಬೆಳಗಾವಿ ಲೋಕಸಭಾ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಹೆಸರು ಅಂತಿಮ?

ಈ ಸಭೆಯಲ್ಲಿ ಭಾಗವಹಿಸಿದ್ದ ಸತೀಶ್ ಜಾರಕಿಹೊಳಿ ಕೂಡಾ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಮ್ಮತಿ ಸೂಚಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಆ ಮೂಲಕ, ದೆಹಲಿ ರಾಜಕಾರಣದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಏನೂ ತಕರಾರು ಇಲ್ಲ ಎಂದು ಹೇಳಿದ್ದಾರೆಂದು ತಿಳಿದು ಬಂದಿದೆ.

ಕೆಪಿಸಿಸಿ ತಾನು ಅನುಮೋದಿಸಿದ ಅಭ್ಯರ್ಥಿಯ ಹೆಸರನ್ನು ಎಐಸಿಸಿಗೆ ಕಳುಹಿಸಲಿದೆ

ಕೆಪಿಸಿಸಿ ತಾನು ಅನುಮೋದಿಸಿದ ಅಭ್ಯರ್ಥಿಯ ಹೆಸರನ್ನು ಎಐಸಿಸಿಗೆ ಕಳುಹಿಸಲಿದೆ

ಈ ವಿಚಾರದಲ್ಲಿ ಮತ್ತೆ ಚರ್ಚಿಸಿ ಕೆಪಿಸಿಸಿ ಅಂತಿಮ ನಿರ್ಧಾರಕ್ಕೆ ಬರಲಿದೆ. ಸದ್ಯದ ಮಟ್ಟಿಗೆ ಸತೀಶ್ ಜಾರಕಿಹೊಳಿ, ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ಸಿನ ಅಭ್ಯರ್ಥಿಯಾಗುವ ಸಾಧ್ಯತೆ ದಟ್ಟವಾಗಿದೆ. ಚುನಾವಣೆಗೆ ದಿನಾಂಕ ನಿಗದಿಯಾದ ನಂತರ, ಕೆಪಿಸಿಸಿ ತಾನು ಅನುಮೋದಿಸಿದ ಅಭ್ಯರ್ಥಿಯ ಹೆಸರನ್ನು ಎಐಸಿಸಿಗೆ ಕಳುಹಿಸಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+