Pro Pakistan Slogan: ಕಾಂಗ್ರೆಸ್ ಸಂಭ್ರಮಾಚರಣೆ ವೇಳೆ 'ಪಾಕ್' ಪರ ಘೋಷಣೆ
ಚಿಕ್ಕೋಡಿ, ಜೂನ್ 04: ಬೆಳಗಾವಿ ಜಿಲ್ಲೆಯ ತಾಲೂಕು ಕೇಂದ್ರವು, ಲೋಕಸಭಾ ಚುನಾವಣಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದು, ಬಿಜೆಪಿಗೆ ಭಾರೀ ಹಿನ್ನಡೆ ಮುಂದುವರಿದಿದೆ. ಈ ವೇಳೆ ಕಾಂಗ್ರೆಸ್ ಪರ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ. ಈ ವೇಳೆ ದ್ರೇಶ ದ್ರೋಹಿ ಘೋಷಣೆ ಕೂಗಿದ್ದಾರೆ.
ಚಿಕ್ಕೋಡಿಯಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ ಕಾಂಗ್ರೆಸ್ ಅಭ್ಯಥಿ ಪ್ರಿಯಾಂಕಾ ಸತೀಶ್ ಜಾರಕಿಹೊಳಿ 2.76 ಲಕ್ಷ ಮತಗಳಿಂದ (ಮಧ್ಯಾಹ್ನ 12 ಗಂಟೆವರೆಗಿನ ಎಣಿಕೆ ಪ್ರಕಾರ) ಮುನ್ನಡೆ ಸಾಧಿಸಿದ್ದಾರೆ. ತಮ್ಮ ಪಕ್ಷದ ಅಭ್ಯರ್ಥಿ ನಿರಂತರವಾಗಿ ಮುಂದುವರೆಯುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ ಆರಂಭಿಸಿದ್ದರು.

ಮತ ಎಣಿಕೆ ಪೂರ್ಣ ಮುಗಿಯುವ ಮೊದಲೇ ಚಿಕ್ಕೋಡಿ ಪಟ್ಟಣದ ಆರ್ ಡಿ ಕಾಲೇಜು ಎದುರು ಕಾಂಗ್ರೆಸ್ ವಿಜಯೋತ್ಸವ ಆಚರಿಸುತ್ತಿದೆ. ಈ ವೇಳೆ ವ್ಯಕ್ತಿಯೊಬ್ಬ ವಿರೋಧಿ ಪಾಕಿಸ್ತಾನ್ ದೇಶದ ಪರ ಘೋಷಣೆ ಕೂಗಿದ್ದಾನೆ.
ಬಿಜೆಪಿಗೆ ನಿರಂತರ ಹಿನ್ನಡೆ
ಕಾಂಗ್ರೆಸ್ ವಿರುದ್ಧ ಬಿಜೆಪಿ ಅಭ್ಯರ್ಥಿ ಅಣ್ಣಾ ಸಾಹೇಬ್ ಜೊಲ್ಲೆ ಅವರು 2.21 ಲಕ್ಷ ಮತಗಳನ್ನು ಪಡೆಯುವ ಮೂಲಕ ನಿರಂತರವಾಗಿ ಹಿನ್ನಡೆ ಅನುಭವಿಸುತ್ತಿದ್ದಾರೆ. ಹೀಗಾಗಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಸಂಭ್ರಮಾಚರಣೆ ಆರಂಭಿಸಿತ್ತು. ಕಾಂಗ್ರೆಸ್ ಹಾಗೂ ಸತೀಶ್ ಜಾರಕಿಹೊಳಿ ಪರ ಘೋಷಣೆ ಕೂಗಿದ್ದರು.
ಈ ವೇಳೆ ಪಾಕಿಸ್ತಾನ್ ಜಿಂದಾಬಾದ್ ಎಂದು ವ್ಯಕ್ತಿಯೊಬ್ಬರು ಕೂಗಿದ್ದಾರೆ. ಪೊಲೀಸರ ಸಮ್ಮುಖದಲ್ಲಿಯೇ ದೇಶ ದ್ರೋಹಿ ಘೋಷಣೆ ಕೂಗಲಾಗಿದೆ. ಇದು ಕಾಂಗ್ರೆಸ್ ಕಾರ್ಯಕರ್ತನೇ ಪಾಕ್ ಪರ ಕೂಗಿದ್ದಾನೆ ಎಂದು ಅನುಮಾನಿಸಲಾಗಿದೆ. ಈ ಬಗ್ಗೆ ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದರು, ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.












Click it and Unblock the Notifications