ಸಚಿವೆ ವಿರುದ್ಧ ಅಶ್ಲೀಲ ಪದ ಬಳಕೆ: ಸಿಟಿ ರವಿ ಮೇಲೆ ಹಲ್ಲೆ ಯತ್ನ, ಪೊಲೀಸ್ ಬಂಧನ
ಬೆಳಗಾವಿ, ಡಿಸೆಂಬರ್ 19: ಬೆಳಗಾವಿ ಚಳಿಗಾಲ ಅಧಿವೇಶನವು ಬಾರೀ ಕೋಲಾಹಲಕ್ಕೆ ಕಾರಣವಾಗಿದೆ. ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಬಿಜೆಪಿ ನಾಯಕ ಅಶ್ಲೀಲ ಪದ ಬಳಕೆ ಆರೋಪ ಕೇಳಿ ಬಂದಿದೆ. ಇದೆಲ್ಲ ಆದ ಕೆಲವೇ ನಿಮಿಷಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಿಟಿ ರವಿ ಮೇಲೆ ಮುತ್ತಿಗೆ ಹಾಕಲು ಮುಂದಾದ ಘಟನೆ ಗುರುವಾರ ನಡೆದಿದೆ. ಈ ವೇಳೆ ಕಾರ್ಯಕರ್ತರನ್ನು ಬಂಧಿಸಲಾಗಿದೆ.
ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ ವಿಚಾರವಾಗಿ ಪರಿಷತ್ ನಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಮಾತಿಗೆ ಮಾತು ಬೆಳೆದಿದೆ. ಈ ವೇಳೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿರುದ್ಧ ಸಿಟಿ ರವಿ ಅವರು ಅಶ್ಲೀಲ ಪದ ಬಳಿಸಿದ್ದಾರೆ ಎನ್ನಲಾಗಿದೆ.

ಈ ವಿಷಯ ಗೊತ್ತಾಗುತ್ತಿದ್ದಂತೆ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರು ಸುವರ್ಣಸೌಧಕ್ಕೆ ಆಗಮಿಸುತ್ತಿದ್ದಂತೆ ಅವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಯತ್ನ ನಡೆಸಿದ್ದಾರೆ. ನೋಡ ನೋಡುತ್ತಲೇ ಸಚಿವರ ಸುತ್ತ ಅನೇಕ ಮಂದಿ ಜಮಾಯಿಸಿದ್ದಾರೆ. ಸಿಟಿ ರವಿ ಅವರ ಮೇಲೆ ಬೆಳಗಾವಿಯ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆಗೆ ಯತ್ನಿಸಿದ್ದಾರೆ ಎಂಬ ಆರೋಪವು ಕೇಳಿ ಬಂದಿದೆ.
ಸಿಟಿ ರವಿ ಅವರ ಮೇಲೆ ಮುತ್ತಿಗೆ ಯತ್ನ ಸುವರ್ಣಸೌಧದ ಪಶ್ಚಿಮ ದ್ವಾರದ ಬಳಿ ನಡೆದಿದೆ. ಕೂಡಲೇ ಅಲ್ಲಿದ್ದ ಪೊಲೀಸರು
ಕೂಡಲೇ ಸಿ.ಟಿ.ರವಿ ಸಹಾಯಕ್ಕೆ ಧಾವಿಸಿದ್ದಾರೆ. ಕಾರ್ಯಕರ್ತರ ಮಧ್ಯದಿಂದ ಸಿಟಿ ರವಿ ಅವರನ್ನು ರಕ್ಷಣೆ ಮಾಡಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ದಿದ್ದಾರೆ.
ಇಷ್ಟು ಮಾತ್ರವಲ್ಲದೆ ಯಾರೆಲ್ಲ ಗುಂಪು ಗೂಡಿ, ಹಲ್ಲೆಗೆ ಯತ್ನಸಿದ್ದಾರೆ ಆ ಎಲ್ಲ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಸ್ಥಳದಲ್ಲಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ..
ಆಗಿದ್ದೇನು? ಸಿಟಿ ರವಿ ಮೇಲಿನ ಆರೋಪವೇನು?
ಅಂಬೇಡ್ಕರ್ ಅವರ ಹೇಳಿಕೆ ವಿರೋಧಿಸಿ ಇಂದು ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ಈ ವೇಳೆ ಬಿಜೆಪಿಗರ ಮಧ್ಯೆ ಮಾತಿಗೆ ಮಾತು ಬೆಳೆಯಿತು. ಈ ವೇಳೆ ತಮ್ಮ ವಿರುದ್ಧ ಬಿಜೆಪಿ ನಾಯಕರು ಪ್ರಾಸಿ*ಟ್ ಎಂಬ ಪದ ಬಳಿಸಿದ್ದಾರೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಆರೋಪಿಸಿದರು.
ಇದರಿಂದ ಬೇಸರಗೊಂಡು ಅವರು ಕಲಾ ಬಿಟ್ಟು ಕಣ್ಣೀರಿಡುತ್ತಾ ಹೊರನಡೆದರು. ತಮ್ಮ ವಿರುದ್ಧ ಅಸಾಂವಿಧಾನಿಕ ಪದ ಬಳಕೆ ಮಾಡಿದ್ದಾರೆ ಎಂದು ದೂರಿದರು. ಈ ವಿಚಾರ ಬಿಜೆಪಿ ಹಾಗೂ ಕಾಂಗ್ರೆಸ್ ಮಧ್ಯೆ ಸದನದಲ್ಲಿ ತೀವ್ರ ಕೋಲಾಹಲ ಸೃಷ್ಟಿಸಿತು. ಇದೆಲ್ಲ ಆಗುತ್ತಿದ್ದಂತೆ ಮಧ್ಯಾಹ್ನ ಸದನಕ್ಕೆ ಬಂದ ಸಿಟಿ ರವಿ ಮೇಲೆ ದಾಳಿಗೆ ಮುಂದಾದರು.
ಇಂದು ಕಾಂಗ್ರೆಸ್ ಕಾರ್ಯಕರ್ತರು ಸಭಾಪತಿ ಜೊತೆಗೆ ಇದೇ ವಿಷಯವಾಗಿ ಪ್ರಮುಖ ಸಭೆ ನಡೆಸಿ ಮಾತನಾಡಲಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಿಟಿ ರವಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ..












Click it and Unblock the Notifications