ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Santhosh Patil Funeral : ಬಡಸ ಗ್ರಾಮದಲ್ಲಿ ಸಂತೋಷ ಪಾಟೀಲ್ ಅಂತ್ಯಕ್ರಿಯೆ

|
Google Oneindia Kannada News

ಬೆಳಗಾವಿ ಏಪ್ರಿಲ್ 14: ಆತ್ಮಹತ್ಯೆಗೆ ಶರಣಾದ ಸಂತೋಷ ಪಾಟೀಲ್ ಅವರ ಅಂತ್ಯಕ್ರಿಯೆಯನ್ನು ಇಂದು ಬೆಳಗಾವಿ ಜಿಲ್ಲೆಯ ಬಡಸ ಗ್ರಾಮದಲ್ಲಿ ನೆರವೇರಿತು. ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ವಿರುದ್ಧ ಲಂಚದ ಆರೋಪ ಹೊರಿಸಿ ವಾಟ್ಸ್‌ಆಪ್ ಸಂದೇಶ ರವಾನಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ್ ಸಂತೋಷ್ ಪಾಟೀಲ್ ಅಂತ್ಯಕ್ರಿಯೆ ಕುಟುಂಬಸ್ಥರ ಕ್ಷಮಾಕ್ಷಮದಲ್ಲಿ ನೆರೆವೇರಿಸಲಾಯಿತು.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷಿ ಹೆಬ್ಬಾಳ್ಕರ್ ಹಾಗೂ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸೇರಿದಂತೆ ಅನೇಕರು ಸಂತೋಷ್ ಮೃತದೇಹದ ಅಂತಿಮ ದರ್ಶನ ಪಡೆದರು. ಉಡುಪಿಯಿಂದ ಸಂತೋಷ್ ಮೃತದೇಹವನ್ನು ಪೊಲೀಸ್ ಬಂದೋಬಸ್ತ್‌ನಲ್ಲಿ ಸಾಗಿಸಲಾಯಿತು. ಅವರ ಮೃತದೇಹ ನೋಡುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು. ಕುಟುಂಬಸ್ಥರು ಅವರ ಅಂತಿಮ ದರ್ಶನ ಪಡೆದರು.

ಸಂತೋಷ ಪ್ರಕರಣ: ಈಶ್ವರಪ್ಪ ಬಂಧನಕ್ಕೆ ಒತ್ತಾಯಿಸಿ ಎಎಪಿ ಪ್ರತಿಭಟನೆಸಂತೋಷ ಪ್ರಕರಣ: ಈಶ್ವರಪ್ಪ ಬಂಧನಕ್ಕೆ ಒತ್ತಾಯಿಸಿ ಎಎಪಿ ಪ್ರತಿಭಟನೆ

ಸಂತೋಷ್ ಪಾಟೀಲ್ ಕುಟುಂಬದವರಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ಮಾಡಲಾಯಿತು. ಜೊತೆಗೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅಥವಾ ಬಿಜೆಪಿ ನಾಯಕರು ಸ್ಥಳಕ್ಕೆ ಬರುವಂತೆ ಪಟ್ಟು ಹಿಡಿದಿದ್ದರು. ಇದರಿಂದ ಸ್ಥಳದಲ್ಲಿ ಕೊಂಚ ಹೊತ್ತು ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

Contractor Santhosh Patil Body Cremated at Badasa Village in Belagavi District

ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಏಪ್ರಿಲ್ 12ರಂದು ಮಂಗಳವಾರ ಆತ್ಮಹತ್ಯೆಗೆ ಶರಣಾಗಿರುವ ಸ್ಥಿತಿಯಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಮೃತದೇಹ ಸಿಕ್ಕಿದೆ. ಅಲ್ಲದೆ ಇವರು ನನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪನವರೇ ಕಾರಣ ಎಂದು ವಾಟ್ಸಾಪ್ ಸಂದೇಶ ರವಾನಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನು ಮಾಧ್ಯಮಗಳಿಗೂ ಕಳುಹಿಸಿದ್ದು, ನನ್ನ ಪತ್ನಿ ಮಕ್ಕಳಿಗೆ ಸಹಾಯ ಮಾಡಿ ಎಂದು ಪ್ರಧಾನಿ ಮೋದಿ ಹಾಗೂ ಬಿ ಎಸ್ ಯಡಿಯೂರಪ್ಪನವರಿಗೆ ಮನವಿ ಮಾಡಿಕೊಂಡಿದ್ದಾರೆ.

ಸಂತೋಷ ಸಾವಿನ ಬಳಿಕ ಕೆಎಸ್ ಈಶ್ವರಪ್ಪ ಬಂಧನಕ್ಕೆ ಒತ್ತಡ ಹೆಚ್ಚಾಗಿದೆ. ವಿವಿಧ ಸಂಘ-ಸಂಘಟನೆಗಳು ಹಾಗೂ ರಾಜಕೀಯ ಪಕ್ಷಗಳು ಬೀದಿಗಳಿದು ಪ್ರತಿಭಟನೆ ಮೂಲಕ ಈಶ್ವರಪ್ಪ ಬಂಧನಕ್ಕೆ ಒತ್ತಾಯಿಸಿದ್ದಾರೆ.

Contractor Santhosh Patil Body Cremated at Badasa Village in Belagavi District

ಈ ನಡುವೆ ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಸಚಿವ ಕೆಎಸ್ ಈಶ್ವರಪ್ಪ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಮಾತ್ರವಲ್ಲದೆ ಕೆಂಪಣ್ಣ ಅವರು ಮುಂದಿನ 3-4 ದಿನಗಳಲ್ಲಿ 4-5 ಭ್ರಷ್ಟ ಸಚಿವರು ಮತ್ತು 10-15 ಶಾಸಕರ ಹೆಸರನ್ನು ಬಹಿರಂಗಪಡಿಸುತ್ತೇವೆ. ಇದು ಸಾರ್ವಜನಿಕ ದಾಖಲೆಯಾಗಲಿದೆ. ಸಂತೋಷ್ ಪಾಟೀಲ್ ಸಾವಿಗೆ ಈಶ್ವರಪ್ಪ ಕಾರಣ. ಅವರ ವಿರುದ್ಧ ಕಠಿಣ ಕ್ರಮಕ್ಕೆ ನಾವು ಒತ್ತಾಯಿಸುತ್ತೇವೆ ಎಂದು ಕೆಂಪಣ್ಣ ಹೇಳಿದ್ದಾರೆ.

ಜೊತೆಗೆ ಮೇ 25 ರಿಂದ ಒಂದು ತಿಂಗಳ ಕಾಲ ಎಲ್ಲಾ ಸರ್ಕಾರಿ ಕೆಲಸಗಳನ್ನು ಸ್ಥಗಿತಗೊಳಿಸಲು ಕರ್ನಾಟಕ ಗುತ್ತಿಗೆದಾರರ ಸಂಘ ನಿರ್ಧರಿಸಿದೆ. ಅಧ್ಯಕ್ಷ ಕೆಂಪಣ್ಣ ಮಾತನಾಡಿ, ಜಲಸಂಪನ್ಮೂಲ, ಪಿಡಬ್ಲ್ಯುಡಿ, ಆರೋಗ್ಯ ಇಲಾಖೆಗಳು ಅತ್ಯಂತ ಭ್ರಷ್ಟ ಇಲಾಖೆಗಳಾಗಿವೆ. ಈ ಬಗ್ಗೆ 3-4 ದಿನಗಳಲ್ಲಿ 4-5 ಭ್ರಷ್ಟ ಸಚಿವರು ಮತ್ತು 10-15 ಶಾಸಕರ ಹೆಸರನ್ನು ಬಹಿರಂಗಪಡಿಸುತ್ತೇವೆ. ಈ ಬಗ್ಗೆ ನಮಗೆ ಬೆದರಿಕೆಗಳು ಬರುತ್ತಿವೆ ಎಂದು ಅವರು ಹೇಳಿದ್ದಾರೆ. ಏಪ್ರಿಲ್ 12ರಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​.ಈಶ್ವರಪ್ಪ ವಿರುದ್ದ ಶೇಕಡಾ 40ರಷ್ಟು ಕಮಿಷನ್‌ ಆರೋಪ ಮಾಡಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೊತೆಗೆ ಇವರು ಈ ಬಗ್ಗೆ ಪ್ರಸ್ತಾಪಿಸಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದರು ಎನ್ನುವ ವಿಚಾರ ಅವರ ಸಾವಿನ ಬಳಿಕೆ ತಿಳಿದು ಬಂದಿದೆ.

ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಇಂತಿದೆ: 080 - 25497777

English summary
Contractor Santhosh Patil who commits suicide after making allegations on Minister KS Eshwarappa, his body Cremated at Badasa Village in Belagavi District. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X