ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹಿಂದೂ ಪದಕ್ಕೆ ಅಸಭ್ಯ ಅರ್ಥ: ಸತೀಶ್ ಜಾರಕಿಹೊಳಿ ವಿವಾದ

|
Google Oneindia Kannada News

ಬೆಳಗಾವಿ, ನವೆಂಬರ್ 07: ಹಿಂದೂ ಪದದ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕ ಸತೀಶ್ ಜಾರಕಿಹೊಳಿ ನೀಡಿರುವ ಹೇಳಿಕೆಯು ವಿವಾದದ ಕಿಡಿ ಹೊತ್ತಿಸಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹಿಂದೂ ಪದಕ್ಕೆ ಅಸಭ್ಯವಾದ ಅರ್ಥವಿದೆ ಎಂದಿದ್ದಾರೆ.

"ಹಿಂದೂ ಎಂಬ ಪದವು ಎಲ್ಲಿಂದ ಹುಟ್ಟಿತು? ಅದು ನಮ್ಮದೇ? ಇದು ಪರ್ಷಿಯನ್, ಇರಾನ್, ಇರಾಕ್, ಉಜ್ಬೇಕಿಸ್ತಾನ್, ಕಜಕಿಸ್ತಾನ್ ಪ್ರದೇಶದಿಂದ ಬಂದಿದೆ. ಹಿಂದೂ ಪದಕ್ಕೂ ಭಾರತಕ್ಕೂ ಏನು ಸಂಬಂಧ? ಹಾಗಾದರೆ ನೀವು ಅದನ್ನು ಹೇಗೆ ಒಪ್ಪಿಕೊಳ್ಳುತ್ತೀರಿ? ಇದರ ಬಗ್ಗೆ ಚರ್ಚೆಯಾಗಬೇಕು,'' ಎಂದು ಹೇಳಿದರು.

ಶಾಸಕರ ಮೌಲ್ಯ ಮಾಪನ; ಸತೀಶ್ ಜಾರಕಿಹೊಳಿ ಕಾರ್ಯ ವೈಖರಿಗೆ ಅಂಕ ನೀಡಿಶಾಸಕರ ಮೌಲ್ಯ ಮಾಪನ; ಸತೀಶ್ ಜಾರಕಿಹೊಳಿ ಕಾರ್ಯ ವೈಖರಿಗೆ ಅಂಕ ನೀಡಿ

ಹಿಂದೂ ಪದಕ್ಕೆ ಅಸಭ್ಯವಾದ ಅರ್ಥವಿದೆ. ಈ ಪದದ ಮೂಲವು ಭಾರತಕ್ಕೆ ಸೇರಿದ್ದಲ್ಲ. ಇದು ಪರ್ಷಿಯನ್ ಭಾಷೆಯಿಂದ ಬಂದಿದೆ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

Controversial statement by Satish Jarkiholi: Word Hindu is not even Indian but Persian

ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್:

ಹಿಂದೂ ಪದಕ್ಕೆ ಅಸಭ್ಯ ಅರ್ಥವಿದೆ ಎಂದು ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ನೀಡಿರುವ ಹೇಳಿಕೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಸತೀಶ್ ಜಾರಕಿಹೊಳಿ ಹೇಳಿಕೆಯನ್ನು ಟೀಕಿಸಿರುವ ಬಿಜೆಪಿಗರು, ಇದು ಹಿಂದೂಗಳಿಗೆ ಮಾಡಿರುವ ಅವಮಾನ ಎಂದಿದ್ದಾರೆ. ಅಲ್ಲದೇ ಹಿಂದೂಗಳಿಗೆ ಪ್ರಚೋದನೆ ನೀಡಿದಂತಿದೆ ಎಂದು ಟೀಕಿಸಿದೆ.

ಸತೀಶ್ ಜಾರಕಿಹೊಳಿ ನೀಡಿದ ಹೇಳಿಕೆಯಲ್ಲಿ ಏನಿದೆ?:

ಹಿಂದೂ ಎಂಬ ಪದದ ಅರ್ಥ ತಿಳಿದರೆ ನಾಚಿಕೆಯಾಗುತ್ತದೆ. ಇದು ಅಸಭ್ಯವಾಗಿದೆ," ಎಂದು ಅವರು ವೀಡಿಯೊದಲ್ಲಿ ಹೇಳಿದ್ದಾರೆ. ಈ ಪದವು ಎಲ್ಲಿಂದ ಹುಟ್ಟಿಕೊಂಡಿದೆ ಎಂದು ತಿಳಿಯಲು "ವಿಕಿಪೀಡಿಯಾವನ್ನು ಪರಿಶೀಲಿಸಿ" ಎಂದು ಸತೀಶ್ ಜಾರಕಿಹೊಳಿ ಹೇಳಿದರು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾಗಿರುವ ಸತೀಶ್ ಜಾರಕಿಹೊಳಿ, ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಅರಣ್ಯ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.

English summary
Controversial statement by Congress leader Satish Jarkiholi: Word Hindu is not even Indian but Persian.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X