ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿ ಜಿಲ್ಲೆಯ 13 ಕೇಂದ್ರಗಳಲ್ಲಿ ಕೊರೊನಾ ವ್ಯಾಕ್ಸಿನೇಷನ್

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಜನವರಿ 16: ಭಾರತಕ್ಕೆ ಇಂದು ಐತಿಹಾಸಿಕ ದಿನವಾಗಿದ್ದು, ಕಳೆದ ಒಂದು ವರ್ಷದಿಂದ ಕೊರೊನಾ ವೈರಸ್ ಮಹಾಮಾರಿಗೆ ಸಿಕ್ಕಿ ನಲುಗಿ ಹೋಗಿದ್ದ ಭಾರತೀಯರಿಗೆ ಇಂದಿನಿಂದ ವೈರಸ್ ಭೀತಿಯಿಂದ ಮುಕ್ತಿ ಸಿಗುವ ಸಾಧ್ಯತೆ ಇದೆ. ಇದಕ್ಕೆ ಕಾರಣ ಇಂದಿನಿಂದ (ಜ.16) ದೇಶದಾದ್ಯಂತ ಮೊದಲ ಹಂತದ ಕೊರೊನಾ ಲಸಿಕೆ ನೀಡಲಾಗುತ್ತಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ಮೂಲಕ ಕೊರೊನಾ ವ್ಯಾಕ್ಸಿನೇಷನ್ ಗೆ ಚಾಲನೆ ನೀಡಲಿದ್ದಾರೆ. ಅದೇ ರೀತಿ ಕರ್ನಾಟಕದ ಬೆಳಗಾವಿ ಜಿಲ್ಲೆಯ 13 ಕೇಂದ್ರಗಳಲ್ಲಿ ಶನಿವಾರ ಕೊರೊನಾ ವ್ಯಾಕ್ಸಿನೇಷನ್ ನಡೆಯಲಿದೆ. ಜಿಲ್ಲೆಗೆ ಒಟ್ಟು 35,960 ಕೋವಿಶಿಲ್ಡ್ ಲಸಿಕೆಗಳನ್ನು ವಿತರಣೆ ಮಾಡಲಾಗಿದೆ.

ಬೆಳಗಾವಿಗೆ ಬಂದು ತಲುಪಿದ ಕೊರೊನಾ ಲಸಿಕೆ: ಮಾರ್ಗಸೂಚಿ ಪ್ರಕಾರ ವಿತರಣೆಗೆ ಕ್ರಮಬೆಳಗಾವಿಗೆ ಬಂದು ತಲುಪಿದ ಕೊರೊನಾ ಲಸಿಕೆ: ಮಾರ್ಗಸೂಚಿ ಪ್ರಕಾರ ವಿತರಣೆಗೆ ಕ್ರಮ

ಕೋವಿಶಿಲ್ಡ್ ಲಸಿಕೆಯನ್ನು ಪುಣೆಯ ಸೀರಂ ಇನ್ಸ್ಟಿಟ್ಯೂಟ್ ಅಭಿವೃದ್ಧಿಪಡಿಸಿದ್ದು, ಮೊದಲ ಹಂತದಲ್ಲಿ ಕೋಲ್ಡ್ ಚೈನ್ ಸೆಂಟರ್‌ಗಳಿಗೆ 10 ಸಾವಿರ ಲಸಿಕೆಗಳ ಪೂರೈಕೆ ಮಾಡಲಾಗಿದೆ.

Belagavi: Corona Vaccination At 13 Centers In Belagavi District

ಈಗಾಗಲೇ ಲಸಿಕಾ ಕೇಂದ್ರಗಳಿಗೆ ಹತ್ತು ಸಾವಿರ ಡೋಸ್ ಲಸಿಕೆಗಳ ಪೂರೈಕೆ ಮಾಡಲಾಗಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಶನಿವಾರ(ಜ.16) ರಂದು ಒಟ್ಟು 13 ಲಸಿಕಾ ಕೇಂದ್ರಗಳಲ್ಲಿ ಲಸಿಕೆ ನೀಡುವ ಕಾರ್ಯ ನಡೆಯಲಿದೆ.

ಶನಿವಾರ ಬೆಳಗ್ಗೆ 10.30ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ವ್ಯಾಕ್ಸಿನೇಷನ್ ಆರಂಭಗೊಳ್ಳಲಿದೆ.

Belagavi: Corona Vaccination At 13 Centers In Belagavi District

Recommended Video

ಕೊರೊನಾ ಲಸಿಕೆಯನ್ನ ಮೊದಲು ಜನಪ್ರತಿನಿಧಿಗಳು ತೆಗೆದುಕೊಳ್ಳಬೇಕು- ಶಾಸಕಿ ಸೌಮ್ಯ ರೆಡ್ಡಿ ಅಭಿಪ್ರಾಯ |Oneindia Kannada

ಬೆಳಗಾವಿ ನಗರದ ಬಿಮ್ಸ್ ಆಸ್ಪತ್ರೆ, ವಂಟಮುರಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಅಥಣಿ ತಾಲೂಕು ಆಸ್ಪತ್ರೆ, ಬೈಲಹೊಂಗಲ ಸಾರ್ವಜನಿಕ ಆಸ್ಪತ್ರೆ, ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ, ಗೋಕಾಕ್ ಸಾರ್ವಜನಿಕ ಆಸ್ಪತ್ರೆ, ಹುಕ್ಕೇರಿ ತಾಲೂಕು ಆಸ್ಪತ್ರೆ, ಖಾನಾಪುರ ಸಾರ್ವಜನಿಕ ಆಸ್ಪತ್ರೆ, ರಾಯಬಾಗ ಸಾರ್ವಜನಿಕ ಆಸ್ಪತ್ರೆ, ರಾಮದುರ್ಗ ಸಾರ್ವಜನಿಕ ಆಸ್ಪತ್ರೆ, ಸವದತ್ತಿ ಸಾರ್ವಜನಿಕ ಆಸ್ಪತ್ರೆ, ಕೊಣ್ಣೂರು ಪ್ರಾಥಮಿಕ ಆರೋಗ್ಯ ಕೇಂದ್ರ, ಬೆಳಗಾವಿಯ ಕೆಎಲ್ಇ ಪ್ರಭಾಕರ್ ಕೋರೆ ಚಾರಿಟೇಬಲ್ ಆಸ್ಪತ್ರೆಯಲ್ಲಿ ವ್ಯಾಕ್ಸಿನೇಷನ್ ಹಮ್ಮಿಕೊಳ್ಳಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಇಂದು ಒಟ್ಟು 1300 ಆರೋಗ್ಯ ಕಾರ್ಯಕರ್ತರಿಗೆ ವ್ಯಾಕ್ಸಿನೇಷನ್ ನಡೆಯುತ್ತದೆ.

English summary
The Corona vaccination will be held on Saturday at 13 centers in Belagavi district. A total of 35,960 Covi-shield vaccines have been distributed to the district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X