ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಹಾರಾಷ್ಟ್ರದಿಂದ ಬೆಳಗಾವಿಗೆ ಬರಲು ಕೋವಿಡ್ ನೆಗೆಟಿವ್ ವರದಿ ಕಡ್ಡಾಯ

|
Google Oneindia Kannada News

ಬೆಳಗಾವಿ, ಮಾರ್ಚ್ 26; "ಮಹಾರಾಷ್ಟ್ರದಿಂದ ಆಗಮಿಸುವ ಎಲ್ಲ ಪ್ರಯಾಣಿಕರು ಕೋವಿಡ್ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯಗೊಳಿಸಲಾಗಿದೆ" ಎಂದು ಬೆಳಗಾವಿ ಜಿಲ್ಲಾಧಿಕಾರಿ ಡಾ. ಕೆ. ಹರೀಶ್ ಕುಮಾರ್ ತಿಳಿಸಿದರು.

ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. "ರಾಜ್ಯದಾದ್ಯಂತ ಕೋವಿಡ್ ಹರಡುವಿಕೆ ತಡೆಗಟ್ಟಲು ಅಂತರ್ ರಾಜ್ಯ ಗಡಿಗಳಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ. ನೆರೆಯ ರಾಜ್ಯದಿಂದ ಜಿಲ್ಲೆಗೆ ಆಗಮಿಸುವ ಪ್ರಯಾಣಿಕರು ಕಡ್ಡಾಯವಾಗಿ ತಪಾಸಣಾ ವರದಿಯನ್ನು ನೀಡಬೇಕು" ಎಂದರು.

ಪ್ರಧಾನಿ ಮೋದಿ ಬಾಂಗ್ಲಾದೇಶ ಭೇಟಿ: ಕೋವಿಡ್ 19 ಬಳಿಕ ಮೊದಲ ವಿದೇಶ ಪ್ರಯಾಣ ಪ್ರಧಾನಿ ಮೋದಿ ಬಾಂಗ್ಲಾದೇಶ ಭೇಟಿ: ಕೋವಿಡ್ 19 ಬಳಿಕ ಮೊದಲ ವಿದೇಶ ಪ್ರಯಾಣ

"ಕೋವಿಡ್ ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ಸಾರ್ವಜನಿಕ ಸ್ಥಳಗಳಲ್ಲಿ ಹಬ್ಬ/ ಉತ್ಸವಗಳ ಆಚರಣೆಯನ್ನು ನಿರ್ಬಂಧಿಸಿ ಸರ್ಕಾರ ಆದೇಶ ಹೊರಡಿಸಿದ್ದು, ಅದನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಪಾಲಿಸಲಾಗುವುದು" ಎಂದು ಹೇಳಿದರು.

ಹೊಸಪೇಟೆ; ಗರ್ಭಿಣಿಯರಿಗೆ ಈಗ ಕೋವಿಡ್ ನೆಗೆಟಿವ್ ವರದಿ ಚಿಂತೆ ಹೊಸಪೇಟೆ; ಗರ್ಭಿಣಿಯರಿಗೆ ಈಗ ಕೋವಿಡ್ ನೆಗೆಟಿವ್ ವರದಿ ಚಿಂತೆ

Covid Negative Certificate Must For Enter Belagavi From Maharashtra

"ಎಲ್ಲ ರೀತಿಯ ಹಬ್ಬ ಮತ್ತಿತರ ಧಾರ್ಮಿಕ ಆಚರಣೆಗಳನ್ನು ಮನೆಯಲ್ಲಿ ಆಚರಿಸಬೇಕು. ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ನಿಗದಿತ ಜನರಿಗಿಂತ ಹೆಚ್ಚು ಜನರು ಸೇರಿದರೆ ಆಯೋಜಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು" ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದರು.

ಕೋವಿಡ್ ಚಿಕಿತ್ಸೆಯಲ್ಲಿ ಗಾಯತ್ರಿ ಮಂತ್ರ ಪಠಣ, ಪ್ರಾಣಾಯಾಮ ಎಷ್ಟು ಪರಿಣಾಮಕಾರಿ? ಕೋವಿಡ್ ಚಿಕಿತ್ಸೆಯಲ್ಲಿ ಗಾಯತ್ರಿ ಮಂತ್ರ ಪಠಣ, ಪ್ರಾಣಾಯಾಮ ಎಷ್ಟು ಪರಿಣಾಮಕಾರಿ?

25 ಸಾವಿರ ಲಸಿಕೆ ನೀಡಲು ಕ್ರಮ: "ಲಸಿಕಾಕರಣ ಚುರುಕುಗೊಳಿಸಲು ನಿರ್ಧರಿಸಲಾಗಿದ್ದು, ಇನ್ನು ಮುಂದೆ ಜಿಲ್ಲೆಯ 600 ಉಪ ಕೇಂದ್ರಗಳಲ್ಲೂ ಲಸಿಕೆ ನೀಡಲಾಗುವುದು. ಪ್ರತಿದಿನ 25 ಸಾವಿರ ಜನರಿಗೆ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ" ಎಂದು ಜಿಲ್ಲಾಧಿಕಾರಿ ಡಾ. ಹರೀಶ್ ಕುಮಾರ್ ಹೇಳಿದರು.

"ಹೆಚ್ಚು ಹೆಚ್ಚು ಜನರಿಗೆ ಲಸಿಕೆ ನೀಡುವುದಕ್ಕಾಗಿ ಮುಂಬರುವ ದಿನಗಳಲ್ಲಿ ಜನರ ಬಳಿಗೆ ಹೋಗಿಯೇ ಲಸಿಕೆ ನೀಡಲು ಚಿಂತನೆ ನಡೆಸಲಾಗುತ್ತಿದೆ. ಜಿಲ್ಲೆಯಲ್ಲಿ ಲಸಿಕೆ ಕೊರತೆ ಇಲ್ಲ. ಒಂದು ವೇಳೆ ಲಸಿಕೆಗೆ ಬೇಡಿಕೆ ಸಲ್ಲಿಸಿದರೆ ತಕ್ಷಣವೇ ಲಸಿಕೆ ಪೂರೈಕೆಗೆ ಸರ್ಕಾರ ಸಿದ್ಧವಿದೆ" ಎಂದು ತಿಳಿಸಿದರು.

ದಂಡ ಪ್ರಕ್ರಿಯೆ ಚುರುಕು; "ಕೋವಿಡ್ ಮಾರ್ಗಸೂಚಿ ಪಾಲಿಸುವಂತೆ ಸಾರ್ವಜನಿಕರಲ್ಲಿ ನಿರಂತರವಾಗಿ ಮನವಿ ಮಾಡಿಕೊಳ್ಳಲಾಗುತ್ತಿದೆ. ಆದಾಗ್ಯೂ ಕೆಲವೆಡೆ ಮಾರ್ಗಸೂಚಿ ಉಲ್ಲಂಘನೆ ಕಂಡುಬರುತ್ತಿರುವುದರಿಂದ ದಂಡ ವಿಧಿಸುವ ಪ್ರಕ್ರಿಯೆಯನ್ನು ಚುರುಕುಗೊಳಿಸಲು ನಿರ್ಧರಿಸಲಾಗಿದೆ" ಎಂದರು.

ಮಾರ್ಚ್ 25ರ ವರದಿಯಂತೆ ಬೆಳಗಾವಿಯಲ್ಲಿ 29 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 27,266. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 199.

English summary
Belagavi deputy commissioner Dr. K. Harish Kumar said that Covid negative certificate mandatory for people who coming to Belagavi from Maharashtra.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X