ಓಮಿಕ್ರಾನ್‌ ಹೆಚ್ಚಳ: ಬೆಳಗಾವಿ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ, ಚೆಕ್ ಪೋಸ್ಟ್‌ಗಳಲ್ಲಿ ಬಿಗಿ ಕ್ರಮ

ಬೆಳಗಾವಿ, ಜನವರಿ 02: ಕಳೆದ ಒಂದು ವಾರದಲ್ಲಿ ಕೊರೊನಾ ವೈರಸ್‌, ಒಮಿಕ್ರಾನ್ ಪ್ರಕರಣಗಳ ಸಂಖ್ಯೆಯು ಅಧಿಕ ಆಗುತ್ತಿದೆ. ಮಹಾರಾಷ್ಟ್ರ ರಾಜ್ಯ ಅದರಲ್ಲಿಯೂ ಮುಖ್ಯವಾಗಿ ಮುಂಬೈಯಲ್ಲಿ ಓಮಿಕ್ರಾನ್‌, ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿದೆ. ಮುಂಬೈ ಮತ್ತು ಕರ್ನಾಟಕದ ವಹಿವಾಟು ಹೆಚ್ಚಾಗಿರುವ ಕಾರಣ ಗಡಿ ಜಿಲ್ಲೆಗಳಲ್ಲಿ ಹೆಚ್ಚಿನ ಕಟ್ಟೆಚ್ಚರವನ್ನು ವಹಿಸಲು ಈಗಾಗಲೇ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. "ಎರಡು ಡೋಸ್ ಕಡ್ಡಾಯ ಲಸಿಕೆ ಹಾಗೂ ಆರ್‌‌ಟಿಪಿಸಿಆರ್‌ ಪರೀಕ್ಷೆಯ ಪ್ರಮಾಣಪತ್ರ ಕಡ್ಡಾಯವಾಗಿ ಹೊಂದಿದವರಿಗೆ ಪ್ರವೇಶಕ್ಕೆ ಅನುಮತಿಸಲಾಗುವುದು," ಎಂದು ಹೇಳಿದರು.

"ಬೆಳಗಾವಿ ಚೆಕ್ ಪೋಸ್ಟ್ ಜೊತೆಗೆ ಅಕ್ಕಪಕ್ಕದ ಚೆಕ್ ಪೋಸ್ಟ್‌ಗಳನ್ನೂ ಬಿಗಿಗೊಳಿಸಲು ಸೂಚನೆ ನೀಡಲಾಗಿದೆ. ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ವಿಜಯಪುರ ಜಿಲ್ಲೆಯ ಗಡಿ ಪ್ರದೇಶಗಳಲ್ಲಿ ಸುಮಾರು 11 ಚೆಕ್ ಪೋಸ್ಟ್ ಗಳನ್ನು ಮಾಡಲಾಗಿದೆ. ಬೆಳಗಾವಿಯಲ್ಲೂ ಚೆಕ್ ಪೋಸ್ಟ್‌‌ಗಳನ್ನು ಸ್ಥಾಪನೆ ಮಾಡಲಾಗುವುದು. ಪ್ರಯಾಣಿಕರಿಗೆ ಸಣ್ಣ ಮಟ್ಟಿನ ತೊಂದರೆ ಉಂಟಾಗಲಿದೆ. ಆದರೆ ಬೆಳಗಾವಿ ಜನರ ಆರೋಗ್ಯದ ಹಿತಾದೃಷ್ಟಿಯಿಂದ ಈ ಕ್ರಮ ಅನಿವಾರ್ಯವಾಗಿದೆ," ಎಂದರು.

Covid, Omicron threat: Karnataka Tighten Restrictions in the Maharashtra border

ಕೋವಿಡ್‌ ಲಸಿಕೆ ಅಭಿಯಾನ

ಜನವರಿ 3 ರಿಂದ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು. ಲಸಿಕಾಕರಣ ಕಾರ್ಯಕ್ರಮವನ್ನು ಯೋಜನಾಬದ್ಧವಾಗಿ ಶಿಸ್ತಿನಿಂದ ಕಾರ್ಯಗತಗೊಳಿಸಲು ಸೂಚನೆ ನೀಡಲಾಗಿದೆ. ಮಕ್ಕಳನ್ನು ಸುರಕ್ಷಾ ಚಕ್ರದೊಳಗೆ ತರುವ ಮಾನ್ಯ ಪ್ರಧಾನಮಂತ್ರಿಗಳ ಆಶಯದ ಈ ಕಾರ್ಯಕ್ರಮಕ್ಕೆ ಜನವರಿ 3 ರಂದು ಚಾಲನೆ ನೀಡಲಾಗುವುದು. ಜನವರಿ 10 ರಂದು ಕೊ -ಮಾರ್ಬಿಡಿಟಿ ಇರುವ ಹಾಗೂ 60 ವರ್ಷಕ್ಕಿಂತ ಮೇಲ್ಪಟ್ಟಿರುವ ವ್ಯಕ್ತಿಗಳಿಗೆ ಲಸಿಕಾಕರಣವನ್ನು ಮಾಡಲಾಗುವುದು ಎಂದು ತಿಳಿಸಿದರು.

ಕೊರೊನಾ ವೈರಸ್‌ ಎದುರಿಸಲು ಸಕಲ ಸಿದ್ಧತೆ:

ಕೊರೊನಾ ವೈರಸ್‌ ಸಾಂಕ್ರಾಮಿಕ ಹೆಚ್ಚಳವನ್ನು ತಡೆಯುವ ಜೊತೆಗೆ ಕೋವಿಡ್‌ ಸೋಂಕನ್ನು ಎದುರಿಸಲು ಸಿದ್ಧತೆಯನ್ನು ಮಾಡಿಕೊಳ್ಳಬೇಕಿದೆ. ಕಳೆದ ಬಾರಿ ಎರಡನೇ ಕೋವಿಡ್‌ ಅಲೆಯ ಸಂದರ್ಭದಲ್ಲಿ ಸಂಭವಿಸಿದ ಆಕ್ಸಿಜನ್ ಕೊರತೆಯನ್ನು ನೀಗಿಸಲು ಸಂಬಂಧಪಟ್ಟ ಆಕ್ಸಿಜನ್ ಸರಬರಾಜು ಕಂಪನಿಗಳೊಂದಿಗೆ ಸಂಯೋಜಿಸಿ ಸಮರ್ಪಕ ಆಕ್ಸಿಜನ್ ಪೂರೈಕೆಗೆ ಕ್ರಮ ವಹಿಸಲಾಗಿದೆ. ಜಿಲ್ಲಾ ಹಾಗು ತಾಲ್ಲೂಕು ಮಟ್ಟದಲ್ಲಿರುವ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಪ್ಲಾಂಟ್‌‌ಗಳನ್ನು ಸಿದ್ಧಪಡಿಸಿಟ್ಟುಕೊಳ್ಳಲು ಮತ್ತು ಹೆಚ್ಚುವರಿ ಬೆಡ್, 4000 ಐಸಿಯುಗಳನ್ನು ಇಡೀ ರಾಜ್ಯದಲ್ಲಿ ಸಿದ್ಧಪಡಿಸಲು ಕ್ರಮ ವಹಿಸಲಾಗಿದೆ. ಸಮರ್ಪಕ ಔಷಧಿಪೂರೈಕೆಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ," ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದರು.

ನೈಟ್ ಕರ್ಫ್ಯೂ ವಿಸ್ತರಣೆ ಬಗ್ಗೆ ಚರ್ಚಿಸಿ ತೀರ್ಮಾನ

ಇನ್ನು ಈ ಸಂದರ್ಭದಲ್ಲೇ ನೈಟ್‌ ಕರ್ಫ್ಯೂ ವಿಸ್ತರಣೆ ಮಾಡಲಾಗುವುದೇ ಎಂಬ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. "ನೈಟ್ ಕರ್ಫ್ಯೂ ವಿಸ್ತರಣೆ ಬಗ್ಗೆ ಚರ್ಚಸಿ ತೀರ್ಮಾನ ಕೈಗೊಳ್ಳಲಾಗುವುದು. ಕೊರೊನಾ ಸ್ಥಿತಿಗತಿ, ಬೆಂಗಳೂರು ನಗರದಲ್ಲಿ ಕೊರೊನಾ ಬೆಳವಣಿಗೆ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು," ಎಂದರು. ಜನರು ಕೋವಿಡ್‌ ಮಾರ್ಗಸೂಚಿಗಳನ್ನು ಪಾಲಿಸದೇ ನಿರ್ಲಕ್ಷ್ಯ ವಹಿಸಿದರೆ ಲಾಕ್ ಡೌನ್ ಘೋಷಿಸುವ ಸಾಧ್ಯತೆಯ ಬಗ್ಗೆ ಪ್ರತಿಕ್ರಿಯಿಸಿ ಸರ್ಕಾರದ ನಿಲುವು ಬಹಳ ಸ್ಪಷ್ಟವಾಗಿದ್ದು, ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಜನರು ಇದನ್ನು ಕಡ್ಡಾಯವಾಗಿ ಪಾಲಿಸಿ ಸಹಕರಿಸುವ ಮೂಲಕ ಲಾಕ್ ಡೌನ್ ಹೇರುವ ಅನಿವಾರ್ಯ ಪರಿಸ್ಥಿತಿಯನ್ನು ಸೃಷ್ಟಿಸಬಾರದು. ಸದ್ಯದಲ್ಲಿಯೇ ಕೊರೊನಾ ಸ್ಥಿತಿಗತಿಯನ್ನು ಪರಿಶೀಲಿಸಿ ಮುಂದಿನ ಕ್ರಮಗಳ ಬಗ್ಗೆ ತೀರ್ಮಾನಿಸಲಾಗುವುದು," ಎಂದು ತಿಳಿಸಿದರು. (ಒನ್‌ಇಂಡಿಯಾ ಸುದ್ದಿ)

Recommended Video

      GST ವಾರ್ಷಿಕ ರಿಟರ್ನ್ ಫೈಲಿಂಗ್ ಗಡುವು ಫೆಬ್ರವರಿ 28ರ ತನಕ ವಿಸ್ತರಣೆ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+