• search
  • Live TV
ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ದಸರಾ ರಜೆ; NEKRTC ಯಿಂದ 220 ವಿಶೇಷ ಬಸ್

|

ಬೆಳಗಾವಿ, ಅಕ್ಟೋಬರ್ 21 : ದಸರಾ ರಜೆ ಹಿನ್ನಲೆಯಲ್ಲಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ 220 ವಿಶೇಷ ಬಸ್‌ಗಳನ್ನು ಓಡಿಸುತ್ತಿದೆ. ಬೆಂಗಳೂರು ಹಾಗೂ ರಾಜ್ಯದ ಇತರ ಸ್ಥಳಗಳಿಗೆ ಈ ಬಸ್‌ಗಳು ಸಂಚಾರ ನಡೆಸಲಿವೆ ಎಂದು ಪ್ರಕಟಣೆ ತಿಳಿಸಿದೆ.

ಅಕ್ಟೋಬರ್ 24ರಂದು 4ನೇ ಶನಿವಾರ ಸರ್ಕಾರ ರಜೆ ಇದೆ. ಅಕ್ಟೋಬರ್ 25 ಭಾನುವಾರ, ಅಕ್ಟೋಬರ್ 26 ರಂದು ವಿಜಯದಶಮಿ ಹಬ್ಬದ ಹಿನ್ನೆಲೆಯಲ್ಲಿ ಜನರ ಸಂಚಾರ ಹೆಚ್ಚಾಗಿರುತ್ತದೆ. ಆದ್ದರಿಂದ, ಜನದಟ್ಟಣೆ ಕಡಿಮೆ ಮಾಡಲು ವಿಶೇಷ ಬಸ್ ಓಡಿಸಲಾಗುತ್ತಿದೆ.

ಹಬ್ಬದ ವಿಶೇಷ ರೈಲು; ಮೈಸೂರಿನಿಂದ ಸಂಚರಿಸುವ ರೈಲುಗಳ ಪಟ್ಟಿ

ಬೆಂಗಳೂರು ಹುಬ್ಬಳ್ಳಿ, ಧಾರವಾಡ, ಬಳ್ಳಾರಿ, ದಾವಣಗೆರೆಗಳಿಂದ ವಿವಿಧ ನಗರಗಳಿಗೆ ಹೆಚ್ಚು ಜನರು ಪ್ರಯಾಣ ಬೆಳೆಸುವ ಹಿನ್ನಲೆಯಲ್ಲಿ ಅಕ್ಟೋಬರ್ 23 ಹಾಗೂ 24 ರಂದು ವಿಶೇಷ ಬಸ್‌ಗಳು ಸಂಚಾರ ನಡೆಸಲಿವೆ.

ಹುಬ್ಬಳ್ಳಿ-ವಿಜಯವಾಡ ಹಬ್ಬದ ವಿಶೇಷ ರೈಲು; ವೇಳಾಪಟ್ಟಿ

ಬೆಂಗಳೂರು ನಗರದಿಂದ ಇತರ ಪ್ರದೇಶಗಳಿದೆ ಮತ್ತು ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಬಳ್ಳಾರಿ, ಹೊಸಪೇಟೆ, ಕೊಪ್ಪಳ ಹಾಗೂ ವಿಜಯಪುರ ಕಡೆಗೆ ಹೆಚ್ಚುವರಿ ಬಸ್‌ಗಳು ಓಡಲಿವೆ ಎಂದು ಪ್ರಕಟಣೆ ಹೇಳಿದೆ.

ಲಾಕ್ ಡೌನ್ ಅಂತ್ಯ; ಎಲ್ಲಾ ಬಸ್ ಸಂಚಾರ ಆರಂಭಿಸಿದ NWKRTC

ನವೆಂಬರ್ 1ರಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಬಳ್ಳಾರಿ, ಹೊಸಪೇಟೆ, ಕೊಪ್ಪಳ ಹಾಗೂ ವಿಜಯಪುರಗಳಿಂದ ಬೆಂಗಳೂರಿಗೆ ಹಾಗೂ ಹೆಚ್ಚಿನ ಪ್ರಯಾಣಿಕರು ಇದ್ದರೆ ಹುಬ್ಬಳ್ಳಿ, ಧಾರವಾಡ, ದಾವಣಗೆರೆ, ಬಳ್ಳಾರಿ ಮುಂತಾದ ಸ್ಥಳಗಳಿಗೆ ಹೆಚ್ಚುವರಿ ಬಸ್ ಓಡಿಸಲಾಗುತ್ತದೆ.

ಈ ಬಸ್‍ಗಳಲ್ಲಿ ಸಂಚಾರ ನಡೆಸುವ ಜನರು ಮುಂಗಡವಾಗಿ ಟಿಕೆಟ್ ಬುಕ್ ಮಾಡಬಹುದು. 4 ಅಥವಾ 4ಕ್ಕಿಂತ ಹೆಚ್ಚಿನ ಜನರು ಗುಂಪಿನ ಒಂದೇ ಟಿಕೆಟ್ ಪಡೆದುಕೊಂಡರೆ ಶೇ.5 ರಷ್ಟು ರಿಯಾಯಿತಿ ಸೌಲಭ್ಯ ಸಿಗಲಿದೆ. ಹೋಗುವ ಹಾಗೂ ಮರಳಿ ಬರುವ ಸೀಟುಗಳನ್ನು ಒಟ್ಟಿಗೆ ಬುಕ್ ಮಾಡಿದಲ್ಲಿ ಶೇ.10ರಷ್ಟು ರಿಯಾಯಿತಿ ಸೌಲಭ್ಯವಿದೆ.

English summary
The North Eastern Karnataka Road Transport Corporation will run 220 special buses October 23 and 24 to beat Dasara holiday rush.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X