• search
  • Live TV
ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಂಗೇರಿದ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಪ್ರತಿಷ್ಠಿತರ ಗದ್ದುಗೆ ಗುದ್ದಾಟ

By ಬೆಳಗಾವಿ ಪ್ರತಿನಿಧಿ
|

ಬೆಳಗಾವಿ, ಅಕ್ಟೋಬರ್ 29: ಬೆಳಗಾವಿ ಜಿಲ್ಲಾ ರಾಜಕಾರಣದ ಪ್ರತಿಷ್ಠೆಯ ಕಣವಾಗಿರುವ ಡಿಸಿಸಿ ಬ್ಯಾಂಕ್‌ ಚುನಾವಣೆಯು ರಂಗು ಪಡೆದುಕೊಂಡಿದೆ.

ವ್ಯಕ್ತಿ ಪ್ರತಿಷ್ಠೆಯ ಕಣವಾಗಿರುವ ಬೆಳಗಾವಿ ಡಿಸಿಸಿ ಬ್ಯಾಂಕ್‌ ಚುನಾವಣೆಗೆ ಅ.29ರ ಗುರುವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಹಿನ್ನೆಲೆ ಘಟಾನುಘಟಿ ನಾಯಕರ ಆಗಮಿಸುತ್ತಿದ್ದಾರೆ.

ಮಾತಿನಲ್ಲೇ ಎಲ್ಲವನ್ನೂ ಮಾಡುವ ರಾಜಕಾರಣ ನಿಮ್ಮದು; ಡಿಸಿಎಂ ವಾಗ್ದಾಳಿ

ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ಆನಂದ ಮಾಮನಿ, ಸರ್ಕಾರದ ಮುಖ್ಯ ಸಚೇತಕ ಮಹಾಂತೇಶ್ ಕವಟಗಿಮಠ, ಶಾಸಕ ಮಹಾಂತೇಶ ದೊಡ್ಡಗೌಡ, ಮಾಜಿ ಶಾಸಕ ಅರವಿಂದ ಪಾಟೀಲ್ ನಾಮಪತ್ರ ಸಲ್ಲಿಸಿದ್ದಾರೆ.

2020ರ ನವೆಂಬರ್ 6 ರಂದು 16 ನಿರ್ದೇಶಕ ಸ್ಥಾನಗಳಿಗೆ ನಡೆಯಲಿರುವ ಬೆಳಗಾವಿ ಕೇಂದ್ರ ಸಹಕಾರಿ ಬ್ಯಾಂಕ್ ಚುನಾವಣೆಗೆ ನಾಮಪತ್ರ ಸಲ್ಲಿಸಿಲು ಉಮೇಶ ಕತ್ತಿ, ರಮೇಶ ಕತ್ತಿ ಆಗಮಿಸಿದ್ದಾರೆ. ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಕತ್ತಿ ಸಹೋದರ ಎಂಟ್ರಿಯಿಂದ ಚುನಾವಣಾ ಕಣ ರಂಗೇರಿದೆ ಎಂದು ಹೇಳಬಹುದು.

ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಕತ್ತಿ ಬ್ರದರ್ಸ್ ಮತ್ತು ಜಾರಕಿಹೊಳಿ ಬ್ರದರ್ಸ್ ಮಧ್ಯೆ ಫೈಟ್ ನಡೆಯಲಿದ್ದು, ಜಿಲ್ಲೆಯ ಪ್ರತಿಷ್ಠಿತ ಕುಟುಂಬಗಳು ಬೆಳಗಾವಿ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಅಧಿಕಾರ ಹಿಡಿಯಲು ಇನ್ನಿಲ್ಲದ ಕಸರತ್ತು ನಡೆಸಿವೆ.

ಡಿಸಿಎಂ ಲಕ್ಷ್ಮಣ ಸವದಿ ಬಣದ ಖಾನಾಪುರ ತಾಲೂಕಿನಿಂದ ಅರವಿಂದ ಪಾಟೀಲ್, ಕಿತ್ತೂರು ತಾಲೂಕಿನಿಂದ ಮಹಾಂತೇಶ್ ದೊಡ್ಡಗೌಡರ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ.

English summary
Umesh Katti and Ramesh Katti have filed nominations for the Belagavi District Central Co-operative Bank election on 6 November.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X