• search
  • Live TV
ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೆಳಗಾವಿಯ ಕಾಲೇಜ್‌ಗಳಿಗೆ ಡಿಸಿಎಂ ಅಶ್ವಥ್ ನಾರಾಯಣ ಭೇಟಿ

By ಬೆಳಗಾವಿ ಪ್ರತಿನಿಧಿ
|

ಬೆಳಗಾವಿ, ನವೆಂಬರ್ 24: ಬೆಳಗಾವಿಯ ಸರ್ಕಾರಿ ಪಾಲಿಟೆಕ್ನಿಕ್, ಸರ್ದಾರ್ ಕಾಲೇಜು, ಸಂಗೊಳ್ಳಿ ರಾಯಣ್ಣ ಕಾಲೇಜಿಗೆ ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ ಭೇಟಿ ನೀಡಿದರು.

ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರತಿ ತರಗತಿಗೂ ಭೇಟಿ ನೀಡಿದ ಡಿಸಿಎಂ ಅಶ್ವಥ್ ನಾರಾಯಣ, ಆಫ್‌ಲೈನ್ ಕ್ಲಾಸ್‌ಗೆ ಹಾಜರಾದ ವಿದ್ಯಾರ್ಥಿಗಳ ಜೊತೆ ಮಾತುಕತೆ ನಡೆಸಿದರು.

"ಒಕ್ಕಲಿಗರ ಅಭಿವೃದ್ಧಿ ನಿಗಮ ರಚನೆಗೆ ನಾನು ಒತ್ತಾಯಿಸುತ್ತೇನೆ"

ಕಾಲೇಜು ಆರಂಭವಾದ ಮೇಲೆ ಏನಾದರೂ ಸಮಸ್ಯೆ ಇದೆಯಾ?, ಕೋವಿಡ್ ಟೆಸ್ಟ್ ಉಚಿತವಾಗಿ ಮಾಡಲಾಗುತ್ತಿದೆಯಾ? ಎಲ್ಲಾ ರೀತಿಯ ಮುಂಜಾಗ್ರತೆ ವಹಿಸಲಾಗಿದೆಯಾ ಎಂದು ವಿದ್ಯಾರ್ಥಿಗಳನ್ನು ವಿಚಾರಿಸಿದರು.

ಕಾಲೇಜು ಉಪನ್ಯಾಸಕರ ಬಳಿಯೂ ಮಾಹಿತಿ ಪಡೆದುಕೊಂಡ ಡಿಸಿಎಂ ಅಶ್ವಥ್ ನಾರಾಯಣ, ಸಂಗೊಳ್ಳಿ ರಾಯಣ್ಣ ಕಾಲೇಜಿನ ನಿರ್ಮಾಣ ಹಂತದ ಕಟ್ಟಡಕ್ಕೂ ಭೇಟಿ ನೀಡಿ, ಪರಿಶೀಲಿಸಿದರು.

ಈ ವೇಳೆ ಕಾಲೇಜ್ ನಿರ್ಮಾಣಕ್ಕೆ ಹೆಚ್ಚಿನ ಜಾಗ ನೀಡುವಂತೆ ಶಾಸಕ ಅನಿಲ್ ಬೆನಕೆ ಡಿಸಿಎಂ ಅವರಲ್ಲಿ ಬೇಡಿಕೆ ಇಟ್ಟರು. ಅದೇ ರೀತಿ ಸರ್ಕಾರಿ ಕಾಲೇಜುಗಳಲ್ಲಿನ ಸಮಸ್ಯೆಗಳ ಇತ್ಯರ್ಥಕ್ಕೆ ಶಾಸಕ ಅನಿಲ್ ಬೆನಕೆ ಮನವಿ ಮಾಡಿದರು. ಈ ಸಮಸ್ಯೆಗಳನ್ನು ಪರಿಹರಿಸುವ ಭರವಸೆಯನ್ನು ಡಿಸಿಎಂ ಅಶ್ವಥ್ ನಾರಾಯಣ ನೀಡಿದರು.

English summary
Deputy Chief Minister Ashwath Narayana visited Government Polytechnic, Sardar College, and Sangolli Rayanna College in Belagavi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X