ದೆಹಲಿ ಸಭೆಯಲ್ಲಿ ಭಾಗವಹಿಸಿದ 62 ಜನ ಬೆಳಗಾವಿಯಲ್ಲಿ: ಡಿಸಿಎಂ

ಬೆಳಗಾವಿ, ಎಪ್ರಿಲ್ 02: ದೆಹಲಿಯ ನಿಜಾಮುದ್ದಿನ್ ಜಮಾತ್ ಮಸೀದಿಯಲ್ಲಿ ಧಾರ್ಮಿಕ ಸಭೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ, ದೆಹಲಿ ಧಾರ್ಮಿಕ ಸಭೆಯಿಂದ ಬೆಳಗಾವಿ ಜಿಲ್ಲೆಗೆ ಆಗಮಿಸಿದವರ ಬಗ್ಗೆ ಗಂಭೀರವಾಗಿ ಪರಿಗಣನೆ ಮಾಡಬೇಕು ಎಂದಿದ್ದಾರೆ.

ದೆಹಲಿಯ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿ ಬೆಳಗಾವಿ ಜಿಲ್ಲೆಗೆ 62 ಜನರು ಬಂದಿದ್ದಾರೆ. 62 ಜನರ ಪೈಕಿ 32 ಜನರ ಗಂಟಲು ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು ಎಂದು ಬೆಳಗಾವಿಯಲ್ಲಿ ಡಿಸಿಎಂ ಲಕ್ಷ್ಮಣ್ ಸವದಿ ಅವರು ಹೇಳಿದರು.

ಈ ವಿಷಯವನ್ನು ಬೆಳಗಾವಿ ಜಿಲ್ಲಾಡಳಿತ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಅದೃಷ್ಟವಶಾತ್ ಬೆಳಗಾವಿ ಜಿಲ್ಲೆಯಲ್ಲಿ ಇಲ್ಲಿಯವರೆಗೂ ಯಾವುದೇ ಪಾಸಿಟಿವ್ ಕೇಸ್ ಸಿಕ್ಕಿಲ್ಲ. ಕೊರೊನಾ ತಡೆಗೆ ಬೆಳಗಾವಿ ಜಿಲ್ಲಾಡಳಿತ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ ಎಂದು ತಿಳಿಸಿದರು.

DCM Lakshman Savadi React On Delhi Meeting

ಕೊರೊನಾ ತಡೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದೊಂದೇ ಮದ್ದು. ಅಗತ್ಯ ಸಾಮಗ್ರಿ ಪೂರೈಸುವ ಕುರಿತು ಹೆಚ್ಚಿನ ಒತ್ತು ಕೊಟ್ಟಿದ್ದೇವೆ,

ಪ್ರತಿ ರೇಷನ್ ಅಂಗಡಿಗಳಿಗೆ ವಾಹನ ಕೊಟ್ಟು ಮನೆಮನೆಗೆ ಪಡಿತರ ವಿತರಿಸಲು ಸಿದ್ಧತೆಗೆ ಜಿಲ್ಲಾಡಳಿತಕ್ಕೆ ಸೂಚನೆಯನ್ನು ಡಿಸಿಎಂ ಲಕ್ಷ್ಮಣ್ ಸವದಿ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+