ಮುಖ್ಯಮಂತ್ರಿಗಳೇ ಆಂಬ್ಯುಲೆನ್ಸ್ ಎಲ್ಲಿ?; ಡಿಕೆಶಿ ಪ್ರಶ್ನೆ
ಬೆಳಗಾವಿ, ಆಗಸ್ಟ್ 17 : ಸ್ಥಳೀಯರ ಅಸಹಕಾರದಿಂದಾಗಿ ಬೆಳಗಾವಿಯಲ್ಲಿ ವೃದ್ಧನ ಶವವನ್ನು ಸೈಕಲ್‌ನಲ್ಲಿ ಸಾಗಣೆ ಮಾಡಲಾಗಿದೆ. ಈ ಪ್ರಕರಣದ ಬಗ್ಗೆ ಚರ್ಚೆಗಳು ಆರಂಭವಾಗಿದ್ದು, ಪ್ರತಿಪಕ್ಷ ನಾಯಕರು ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸೋಮವಾರ ಈ ಕುರಿತು ಟ್ವೀಟ್ ಮಾಡಿದ್ದಾರೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರನ್ನು ಟ್ಯಾಗ್ ಮಾಡಿದ್ದು, "ಸಿಎಂ ಅವರೇ ಎಲ್ಲಿದೆ ನಿಮ್ಮ ಸರ್ಕಾರ? ಅವರಿಗೆ ಏಕೆ ಆಂಬ್ಯುಲೆನ್ಸ್ ಒದಗಿಸಲಿಲ್ಲ?" ಎಂದು ಹೇಳಿದ್ದಾರೆ.
ಸೈಕಲ್‌ನಲ್ಲಿ ಶವ ಸಾಗಣೆ ಮಾಡುವ ವಿಡಿಯೋವನ್ನು ಡಿ. ಕೆ. ಶಿವಕುಮಾರ್ ಟ್ವೀಟ್ ಮಾಡಿದ್ದಾರೆ. "ಶವವನ್ನು ಕುಟುಂಬ ಸದಸ್ಯರು ಮಳೆಯಲ್ಲಿ ನೆನೆಯುತ್ತಾ ಸೈಕಲ್ ನಲ್ಲಿ ಸಾಗಿಸಿದ್ದಾರೆ" ಎಂದು ಟ್ವೀಟ್‌ನಲ್ಲಿ ಬರೆದಿದ್ದಾರೆ.

"ಈ ಅಸಮರ್ಥ ಸರ್ಕಾರಕ್ಕೆ ಮಾನವೀಯತೆ ಇಲ್ಲವಾಗಿದ್ದು, ಪಿಡುಗು ಪರಿಸ್ಥಿತಿಯನ್ನು ನಿಭಾಯಿಸಲು ಸಂಪೂರ್ಣವಾಗಿ ವಿಫಲವಾಗಿದೆ" ಎಂದು ಕೆಪಿಸಿಸಿ ಅಧ್ಯಕ್ಷರು ಆರೋಪಿಸಿದ್ದಾರೆ.
ಬೆಳಗಾವಿಯ ಕಿತ್ತೂರಿನ 70 ವರ್ಷದ ವೃದ್ಧನ ಶವವನ್ನು ಕುಟುಂಬ ಸದಸ್ಯರು ಮಳೆಯಲ್ಲಿ ನೆನೆಯುತ್ತಾ ಸೈಕಲ್ ನಲ್ಲಿ ಸಾಗಿಸಿದ್ದಾರೆ
— DK Shivakumar (@DKShivakumar) August 17, 2020
ಸಿಎಂ @BSYBJP ಅವರೇ ಎಲ್ಲಿದೆ ನಿಮ್ಮ ಸರ್ಕಾರ? ಅವರಿಗೆ ಏಕೆ ಆಂಬ್ಯುಲೆನ್ಸ್ ಒದಗಿಸಲಿಲ್ಲ?
ಈ ಅಸಮರ್ಥ ಸರ್ಕಾರಕ್ಕೆ ಮಾನವೀಯತೆ ಇಲ್ಲವಾಗಿದ್ದು, ಪಿಡುಗು ಪರಿಸ್ಥಿತಿಯನ್ನು ನಿಭಾಯಿಸಲು ಸಂಪೂರ್ಣವಾಗಿ ವಿಫಲವಾಗಿದೆ pic.twitter.com/dZxCj9sO9P
ಬೆಳಗಾವಿಯ ಕಿತ್ತೂರು ತಾಲೂಕಿನ ಎಂ. ಕೆ. ಹುಬ್ಬಳ್ಳಿಯ ವೃದ್ಧ ಜ್ವರದಿಂದಾಗಿ ಮೃತಪಟ್ಟಿದ್ದ. ಕೋವಿಡ್‌ನಿಂದ ಮೃತಪಟ್ಟಿರಬಹುದು ಎಂದು ಸ್ಥಳೀಯರು ಅಂತ್ಯಕ್ರಿಯೆಗೆ ಸಹಕಾರ ನೀಡಲಿಲ್ಲ. ಆಂಬ್ಯುಲೆನ್ಸ್ ಸಹ ಸಿಗದ ಕಾರಣ ಕುಟುಂಬದವರು ಸೈಕಲ್‌ನಲ್ಲಿ ಶವವನ್ನು ಸಾಗಣೆ ಮಾಡಿದ್ದರು.












Click it and Unblock the Notifications