ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಇಬ್ಬರು ಮುಸ್ಲಿಂ ಶಾಸಕರಿಗೆ ಸಂಪುಟದಲ್ಲಿ ಸ್ಥಾನ ನೀಡಲು ಒತ್ತಾಯ

|
Google Oneindia Kannada News

ಬೆಳಗಾವಿ, ಡಿಸೆಂಬರ್ 13: ಇಬ್ಬರು ಮುಸ್ಲಿಂ ಶಾಸಕರಿಗೆ ಸಂಪುಟದಲ್ಲಿ ಸ್ಥಾನ ನೀಡುವಂತೆ ಮುಸ್ಲಿಂ ಶಾಸಕರು, ಸಚಿವರು ಕಾಂಗ್ರೆಸ್‌ ಮುಖಂಡರನ್ನು ಒತ್ತಾಯ ಮಾಡಿದ್ದಾರೆ.

ಈ ಬಗ್ಗೆ ಮಾತನಾಡಿದ ಸಚಿವ ಜಮೀರ್ ಅಹ್ಮದ್‌, ರಾಜ್ಯದಲ್ಲಿ ಕಾಂಗ್ರೆಸ್ 80 ಸ್ಥಾನ ಗಳಿಸಿದೆ. ಅದರಲ್ಲಿ ಅಲ್ಪಸಂಖ್ಯಾತರ ಪಾತ್ರವೂ ಮಹತ್ವದ್ದಾಗಿದೆ ಹಾಗಾಗಿ ಅಲ್ಪಸಂಖ್ಯಾತ ಸಮುದಾಯಕ್ಕೆ ಇನ್ನೂ ಎರಡು ಸಚಿವ ಸ್ಥಾನವನ್ನು ಕೇಳಿದ್ದೇವೆ ಎಂದರು.

ಡಿಸೆಂಬರ್ 22ಕ್ಕೆ ಸಂಪುಟ ವಿಸ್ತರಣೆ: ಸಮನ್ವಯ ಸಮಿತಿ ನಿರ್ಣಯಡಿಸೆಂಬರ್ 22ಕ್ಕೆ ಸಂಪುಟ ವಿಸ್ತರಣೆ: ಸಮನ್ವಯ ಸಮಿತಿ ನಿರ್ಣಯ

ಬೆಳಗಾವಿ ಅಧಿವೇಶನದ ನಂತರ ಸುದ್ದಿಗಾರರ ಬಳಿ ಮಾತನಾಡಿದ ಅವರು, ಡಿಸೆಂಬರ್ 22 ರಂದು ಸಂಪುಟ ವಿಸ್ತರಣೆ ಆಗುವುದು ಪಕ್ಕಾ, ವಿಸ್ತರಣೆ ಬಳಿಕ ಯಾವುದೇ ಬಂಡಾಯ ಬೆಳವಣಿಗೆಗಳು ಆಗುವುದಿಲ್ಲ ಎಂದು ಅವರು ಭರವಸೆ ವ್ಯಕ್ತಪಡಿಸಿದರು.

Demand to congress high command to join two more muslim MLAs to join cabinet

ಸಂಪುಟದಿಂದ ನನ್ನನ್ನು ಕೈಬಿಟ್ಟರೂ ಸಹ ಶಾಂತರೀತಿಯಿಂದ ಒಪ್ಪಿಕೊಳ್ಳುತ್ತೇನೆ ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ಸಚಿವ ಜಮೀರ್ ಅಹ್ಮದ್ ಹೇಳಿದರು.

ಅಧಿವೇಶನಕ್ಕೆ ಹಾಜರಾದ ಅತೃಪ್ತರು, ಕಾಂಗ್ರೆಸ್ ನಿರಾಳ ಅಧಿವೇಶನಕ್ಕೆ ಹಾಜರಾದ ಅತೃಪ್ತರು, ಕಾಂಗ್ರೆಸ್ ನಿರಾಳ

ಬಸವರಾಜ ಹೊರಟ್ಟಿ ಅವರ 'ಹೆಬ್ಬೆಟ್ಟು ಸಿಎಂ' ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, 'ಅದು ಹೊರಟ್ಟಿ ಅವರ ವೈಯಕ್ತಿಕ ಅಭಿಪ್ರಾಯ, ಕಾಂಗ್ರೆಸ್ ಪಕ್ಷವು ಕುಮಾರಸ್ವಾಮಿ ಅವರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದೆ' ಎಂದು ಅವರು ಹೇಳಿದರು.

English summary
Minister Zameer Ahmed said we demand congress high command to join two more muslim MLAs to cabinet as Muslims were the big part in congress getting 80 seats in Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X