ಬಿಜೆಪಿ ರೈತ ಮೋರ್ಚಾದಿಂದ ಬೆಳಗಾವಿ ಕಾಂಗ್ರೆಸ್ ಕಚೇರಿ ಮುತ್ತಿಗೆ ಯತ್ನ
ಬೆಳಗಾವಿ, ಡಿಸೆಂಬರ್ 28 : ಮಹಾದಾಯಿ ನದಿ ನೀರು ಹಂಚಿಕೆ ವಿವಾದ ತಾರಕ್ಕೇರಿದ್ದು ಗುರುವಾರ ಕಲಬುರಗಿ ಬಂದ್ ಗೆ ಕರೆ ನೀಡಲಾಗಿತ್ತು. ಮಹದಾಯಿ ವಿಚಾರ ಕಾಂಗ್ರೆಸ್ ರೈತ ವಿರೋಧಿ ನೀತಿ ಹಿನ್ನಲೆ ಬೆಳಗಾವಿಯಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ ಕಾರ್ಯಕರ್ತರನ್ನು ಬಂಧಿಸಲಾಗಿದೆ.
ಮೋರ್ಚಾದ ಜಿಲ್ಲಾಧ್ಯಕ್ಷ ಬಸನಗೌಡ ಸಿದ್ರಾಮನಿ ನೇತೃತ್ವದಲ್ಲಿ ನಗರದ ಚನ್ನಮ್ಮ ವೃತ್ತದಿಂದ ನಗರದ ಕ್ಲಬ್ ರಸ್ತೆಯಲ್ಲಿರುವ ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ಮೂಲಕ ತೆರಳಿದ ಕಾರ್ಯಕರ್ತರು ಬಳಿಕೆ ಕಾಂಗ್ರೆಸ್ ಕಚೇರಿಯನ್ನು ಮುತ್ತಿಗೆ ಹಾಕಲು ಯತ್ನಿಸಿದರು.

ಪೊಲೀಸರು ರಸ್ತೆ ಮಧ್ಯೆಯೆ ಪ್ರತಿಭಟನಾಕಾರರನ್ನು ತಡೆದರು. ಪ್ರತಿಭಟನಾಕಾರರು ಪೊಲೀಸ್ ಮಧ್ಯೆ ನುಕುನುಗ್ಗಲು ಉಂಟಾಯಿತು. ಬಲವಂತವಾಗಿ 100 ಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಯಿತು. ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.












Click it and Unblock the Notifications