ಜಾರಕಿಹೊಳಿ ದೊಡ್ಡವರು, ಅವ್ರ ಬಗ್ಗೆ ಮಾತಾಡಲ್ಲ ಎಂದು ಡಿಕೆಶಿ ಟಾಂಗ್
ಬೆಳಗಾವಿ, ನವೆಂಬರ್ 23: ಜಾರಕಿಹೊಳಿ ದೊಡ್ಡವರು, ಅವರ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ಸಚಿವ ಡಿಕೆ ಶಿವಕುಮಾರ್ ಟಾಂಗ್ ನೀಡಿದ್ದಾರೆ.
ಜಾರಕಿಹೊಳಿ ಹಾಗೂ ನೀವು ಉತ್ತಮ ಆದರೆ, ಇತ್ತೀಚೆಗೆ ಏಕೆ ಈ ರೀತಿ ರಾಜಕಾರಣ ಮಾಡುತ್ತಿದ್ದೀರಿ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಡಿಕೆ ಶಿವಕುಮಾರ್ ಈ ರೀತಿಯಾಗಿ ಪ್ರತಿಕ್ರಿಯಿಸಿದ್ದಾರೆ. ನಾನು ದೊಡ್ಡವರ ವಿಚಾರವನ್ನು ಪ್ರಸ್ತಾಪ ಮಾಡುವುದಿಲ್ಲ ಎಂದು ಸಚಿವ ಡಿ.ಕೆ.ಶಿವಕುಮಾರ್ ಮತ್ತೆ ರಮೇಶ್ ಜಾರಕಿಹೊಳಿಗೆ ಟಾಂಗ್ ಕೊಟ್ಟಿದ್ದಾರೆ.
ಇನ್ನೂ ಜಾರಕಿಹೊಳಿ ಕಾರ್ಖಾನೆಯಿಂದ ಕಬ್ಬಿನ ಬಿಲ್ ಬಾಕಿ ವಿಚಾರದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಅವರು ತುಂಬ ಪ್ರಾಮಾಣಿಕರಿದ್ದಾರೆ ಅವರು ಬಾಕಿ ಹಣ ಕೊಡುತ್ತಾರೆ ಎಂದರು.

ಸಕ್ಕರೆ ಕಾರ್ಖಾನೆ ಮಾಲೀಕರ ಸಭೆಯಲ್ಲಿ ನಾನೇಕೆ ಭಾಗಿಯಾಗಬಾರದು. ಎಲ್ಲೇ ಸಮಸ್ಯೆ ಬಂದರೂ ಚರ್ಚೆ ಮಾಡಿ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡುತ್ತೇವೆ. ಪ್ರಸ್ತುತ ಬಳ್ಳಾರಿಯಲ್ಲಿ ರೈತರ ಸಭೆ ನಡೆಸಿ ಸಮಸ್ಯೆ ಬಗೆಹರಿಸಿದ್ದೇನೆ.
ಯಾರಿಗೂ ಗುತ್ತಿಗೆ ಕೊಟ್ಟಿಲ್ಲ ಎಂದು ಜಾರಕಿಹೊಳಿ ಸಹೋದರರಿಗೆ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಸಚಿವ ರಮೇಶ್ ಜಾರಕಿಹೊಳಿ ಮತ್ತು ಡಿ.ಕೆ.ಶಿವಕುಮಾರ್ ನಡುವಿನ ಮುನಿಸು ಅದೇಕೋ ಕಡಿಮೆಯಾದಂತೆ ಕಂಡುಬರುತ್ತಿಲ್ಲ.
ಸಕ್ಕರೆ ಕಾರ್ಖಾನೆ ಮಾಲೀಕರು ಮತ್ತು ರೈತರ ಸಭೆಗೆ ನಾನು ಭಾಗಿಯಾಗಿರುವ ಬಗ್ಗೆ ಸಚಿವ ರಮೇಶ್ ಜಾರಕಿಹೊಳಿ ದೂರು ನೀಡಿದ್ದಾರೆ. ನಾವು ಸರ್ಕಾರಕ್ಕೆ ಸಮಸ್ಯೆಗಳು ಎದುರಾದಾಗ ಬಗೆಹರಿಸಬೇಕಾದುದು ನಮ್ಮ ಜವಾಬ್ದಾರಿ ಎಂದರು.











Click it and Unblock the Notifications