ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಮ್ಸ್ ವೈದ್ಯ‌ನ ಮೇಲೆ ತಡರಾತ್ರಿ ಹಲ್ಲೆ; ವೈದ್ಯಕೀಯ ಸಿಬ್ಬಂದಿಯಿಂದ ಪ್ರತಿಭಟನೆ

|
Google Oneindia Kannada News

ಬೆಳಗಾವಿ, ಸೆಪ್ಟೆಂಬರ್ 22: ಇಲ್ಲಿನ ಬಿಮ್ಸ್ ಆಸ್ಪತ್ರೆಯ ಓರ್ವ ವೈದ್ಯ ಹಾಗೂ ನರ್ಸ್ ಮೇಲೆ ಮೃತ ಮಹಿಳೆಯ ಸಂಬಂಧಿಗಳು ಹಲ್ಲೆ ನಡೆಸಿರುವ ಘಟನೆ ನಿನ್ನೆ ತಡರಾತ್ರಿ ನಡೆದಿದೆ.

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 36 ವರ್ಷದ ಮಹಿಳೆಯೊನ್ನರನ್ನು ತಡರಾತ್ರಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಕೆಲ ಹೊತ್ತಿನಲ್ಲಿಯೇ ಆ ಮಹಿಳೆಯು ಮೃತಪಟ್ಟಿದ್ದಾರೆ. ಆದರೆ ಸರಿಯಾಗಿ ಚಿಕಿತ್ಸೆ ಕೊಡದ ಕಾರಣ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ, ಮೃತ ಮಹಿಳೆಯ ಸಂಬಂಧಿಕರು ವೈದ್ಯರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಬೆಳಗಾವಿಯಲ್ಲಿ ಅಂಬ್ಯುಲೆನ್ಸ್‌ಗೆ ಬೆಂಕಿ, ದಾಂಧಲೆ; 14 ಜನರ ಬಂಧನಬೆಳಗಾವಿಯಲ್ಲಿ ಅಂಬ್ಯುಲೆನ್ಸ್‌ಗೆ ಬೆಂಕಿ, ದಾಂಧಲೆ; 14 ಜನರ ಬಂಧನ

ಮಹಿಳೆ ಸಾವನ್ನಪ್ಪುತ್ತಿದ್ದಂತೆಯೇ ಆಸ್ಪತ್ರೆಯಲ್ಲಿ ಮೃತಳ ಸಂಬಂಧಿಗಳಿಂದ ಗದ್ದಲ ಶುರುವಾಗಿದೆ. ಮೊದಲು ನರ್ಸ್ ಜತೆ ವಾದಕ್ಕಿಳಿದಿದ್ದಾರೆ. ನಂತರ ವೈದ್ಯರು ಮಧ್ಯ ಪ್ರವೇಶ ಮಾಡಿದಾಗ ವೈದ್ಯರ ಮೇಲೂ ಹಲ್ಲೆ ನಡೆಸಿದ್ದಾರೆ. ಆರೋಗ್ಯ ಸಿಬ್ಬಂದಿಯ ಮೇಲೆ ಹಲ್ಲೆ ಘಟನೆ ಖಂಡಿಸಿ ವೈದ್ಯರು ತಡರಾತ್ರಿ ಪ್ರತಿಭಟನೆ ‌ನಡೆಸಿದ ಘಟನೆಯೂ ನಡೆಯಿತು. ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವೈದ್ಯರು ಮುಷ್ಕರಕ್ಕೆ ಕುಳಿತಿದ್ದರು.

Doctor assaulted over death of patient in BIMS; Hospital Staff Protest

ಈ ಘಟನೆಯಿಂದಾಗಿ ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಗಿತ್ತು. ನಂತರ ಪೊಲೀಸರು ಆಗಮಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.

ಇದೇ ಜುಲೈನಲ್ಲೂ ಬಿಮ್ಸ್ ನಲ್ಲಿ ಇಂಥದ್ದೇ ಘಟನೆ ನಡೆದಿತ್ತು. ಜುಲೈ 19ರಂದು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಬಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ತೀವ್ರ ಉಸಿರಾಟದ ತೊಂದರೆ ಕಾರಣ ಅವರು ಮೃತಪಟ್ಟಿದ್ದರು. ಸಾವಿನ ಸುದ್ದಿ ತಿಳಿದ ಸಂಬಂಧಿಕರು ಆಸ್ಪತ್ರೆಗೆ ನುಗ್ಗಿ ದಾಂಧಲೆ ಮಾಡಿದ್ದರು. ಆಂಬುಲೆನ್ಸ್ ಗೆ ಬೆಂಕಿ ಹಚ್ಚಿ ದೊಡ್ಡ ದಾಂಧಲೆ ಸೃಷ್ಟಿ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಜನರನ್ನು ಬಂಧಿಸಲಾಗಿತ್ತು.

English summary
Bims hospital staff protested mid night yesterday condemning assault on doctor over death of patient
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X