ಪ್ರವಾಸಿಗರಿಗೆ ಸಿಹಿ ಸುದ್ದಿ; ದೂಧ್ ಸಾಗರದಲ್ಲಿ ರೈಲು ನಿಲ್ಲಲಿದೆ

ಬೆಳಗಾವಿ, ಸೆಪ್ಟೆಂಬರ್ 05 : ಭಾರತೀಯ ರೈಲ್ವೆ ದೂಧ್ ಸಾಗರಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ ಸಿಹಿ ಸುದ್ದಿ ನೀಡಿದೆ. ದೂಧ್ ಸಾಗರ ನಿಲ್ದಾಣದಲ್ಲಿ ರೈಲುಗಳ ನಿಲುಗಡೆಗೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ.

ಬುಧವಾರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಗೋವಾ-ಬೆಳಗಾವಿ ನೂತನ ರೈಲು ಸೇವೆಗೆ ಚಾಲನೆ ನೀಡಿದರು. ದೂಧ್ ಸಾಗರ ನಿಲ್ದಾಣದಲ್ಲಿ ರೈಲುಗಳ ನಿಲುಗಡೆ ವ್ಯವಸ್ಥೆಯನ್ನು ಉದ್ಘಾಟಿಸಿದರು.

Dudhsagar Falls Commercial Halt Station Inaugurated

ದೂಧ್ ಸಾಗರ ಜಲಪಾತ ವೀಕ್ಷಣೆ ಮಾಡಲು ಸಾವಿರಾರು ಪ್ರವಾಸಿಗರು ಆಗಮಿಸುತ್ತಾರೆ. ಅವರಿಗೆ ಅನುಕೂಲ ಕಲ್ಪಿಸಲು ನಿಲ್ದಾಣದಲ್ಲಿ ರೈಲುಗಳು ನಿಲುಗಡೆಗೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಮಾಧ್ಯಮಗಳ ಜೊತೆ ಮಾತನಾಡಿದ ಸುರೇಶ್ ಅಂಗಡಿ, "ಪ್ರವಾಸಿಗರ ಅನುಕೂಲಕ್ಕಾಗಿ ದೂಧ್ ಸಾಗರ ರೈಲು ನಿಲ್ದಾಣದಲ್ಲಿ ನಿಲುಗಡೆ ಸೌಲಭ್ಯ ಆರಂಭಿಸಲಾಗಿದೆ. ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು" ಎಂದರು.

Dudhsagar Falls Commercial Halt Station Inaugurated

ದೂಧ್ ಸಾಗರ ಮೂಲಕ ರೈಲುಗಳು ಸಂಚಾರ ನಡೆಸುತ್ತಿದ್ದರೂ ರೈಲುಗಳು ಅಲ್ಲಿ ನಿಲುಗಡೆಗೊಳ್ಳುತ್ತಿರಲಿಲ್ಲ. ಈಗ ಪ್ರಾಯೋಗಿಕವಾಗಿ ರೈಲುಗಳನ್ನು ನಿಲ್ಲಿಸಲು ಆರಂಭಿಸಲಾಗಿದೆ. ಪ್ರಯಾಣಿಕರ ಪ್ರತಿಕ್ರಿಯೆ ನೋಡಿಕೊಂಡು ಇದನ್ನು ಮುಂದುವರೆಸುವ ಬಗ್ಗೆ ತೀರ್ಮಾನಿಸಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+