ಬೆಳಗಾವಿ: ಹಳಿ ದಾಟುವಾಗ ರೈಲಿಗೆ ಸಿಲುಕಿ ಹೆಣ್ಣಾನೆ ಸಾವು
Recommended Video

Belagavi :Train Hits Elephant | Oneindia Kannada
ಬೆಳಗಾವಿ, ಅಕ್ಟೋಬರ್ 09 : ರೈಲಿಗೆ ಸಿಲುಕಿ ಆನೆ ಮರಿಯೊಂದು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಗೋಲಿಹಳ್ಳಿ ವಲಯ ಅರಣ್ಯ ಪ್ರದೇಶದಲ್ಲಿ ಸೋಮವಾರ ಸಂಭವಿಸಿದೆ.
ಸುಮಾರು 8ರಿಂದ 10 ವರ್ಷದ ಹೆಣ್ಣಾನೆಯೊಂದು ಗೋಲಿಹಳ್ಳಿ ವಲಯ ಅರಣ್ಯ ಪ್ರದೇಶದ ರೈಲ್ವೆ ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿ ಹೊಡೆದಿದೆ. ಪರಿಣಾಮ 25 ಅಡಿ ಎತ್ತರದ ಬ್ರಿಡ್ಜ್ ಮೇಲಿಂದ ಬಿದ್ದು ಸಾವನ್ನಪ್ಪಿದೆ.

ಈ ಆನೆ ಮರಿಯು ದಾಂಡೇಲಿ ಅರಣ್ಯ ಪ್ರದೇಶದಿಂದ ಗೋಲಿಹಳ್ಳಿ ಅರಣ್ಯ ಪ್ರದೇಶಕ್ಕೆ ಆಹಾರ ಅರಸಿ ಬಂದಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.












Click it and Unblock the Notifications