ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿ ವಿಮಾನ ನಿಲ್ದಾಣ ಮೇಲ್ದರ್ಜೆಗೆ ಗ್ರೀನ್ ಸಿಗ್ನಲ್

By Mahesh
|
Google Oneindia Kannada News

ನವದೆಹಲಿ, ಫೆ.1: ಕರ್ನಾಟಕದ ಬೆಳಗಾವಿ ಹಾಗೂ ರಾಜಸ್ಥಾನದ ಕಿಷನ್‌ಗಂಜ್ ವಿಮಾನ ನಿಲ್ದಾಣಗಳನ್ನು ಅಭಿವೃದ್ಧಿಪಡಿಸಿ ಮೇಲ್ದರ್ಜೆಗೇರಿಸಲು ಕೇಂದ್ರ ಸರ್ಕಾರದ ಪರಿಸರ ಸಚಿವಾಲಯದ ಉನ್ನತ ಸಮಿತಿ ಹಸಿರು ನಿಶಾನೆ ತೋರಿಸಿದೆ.

ಬೆಳಗಾವಿಯಲ್ಲಿ ಹಾಲಿ ಇರುವ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೇರಿಸಿ, ಸಕಲ ಮೂಲ ಸೌಕರ್ಯಗಳನ್ನು ಕಲ್ಪಿಸಿ ಪ್ರತಿ ದಿನ ನಾಲ್ಕು ಎ-321 ವಿಮಾನಗಳು ಸಂಚರಿಸುವಂತೆ ಮಾಡಲು ಕೇಂದ್ರ ಸರ್ಕಾರ ಸಮ್ಮತಿಸಿದೆ. ಬೆಳಗಾವಿ ವಿಮಾನ ನಿಲ್ದಾಣದಿಂದ ಎಟಿಆರ್-72 ವಿಮಾನವೊಂದು ಹಾರಾಟ ನಡೆಸಿದೆ.

ಬೆಳಗಾವಿ ವಿಮಾನ ನಿಲ್ದಾಣದ ಆಧುನೀಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಾಗೂ ವಿಮಾನ ನಿಲ್ದಾಣಗಳ ಪ್ರಾಧಿಕಾರದ ನಡುವೆ ಒಪ್ಪಂದಕ್ಕೆ ಈಗಾಗಲೇ ಸಹಿ ಹಾಕಲಾಗಿದೆ. [ಮಂಗಳೂರು : ವಿಮಾನ ನಿಲ್ದಾಣಕ್ಕೆ ಎರಡು ಏರೋ ಬ್ರಿಡ್ಜ್ ]

Environment ministry panel nod to airports at Ajmer, Belagavi

ಹೆಚ್ಚುವರಿ ಭೂಮಿ ಮಂಜೂರು: ಬೆಳಗಾವಿ ವಿಮಾನ ನಿಲ್ದಾಣದ ಮೇಲ್ದರ್ಜೆ ಯೋಜನೆಗೆ ಈಗಾಗಲೇ ರಾಜ್ಯ ಸರ್ಕಾರ 360.34 ಎಕರೆ ಭೂಮಿಯನ್ನು ನೀಡಲಾಗಿದೆ. ವಿಸ್ತರಣೆಗೆ ಹೆಚ್ಚುವರಿಯಾಗಿ ಇನ್ನೂ 370 ಎಕರೆ ಭೂಮಿ ಒದಗಿಸಲು ಸಿದ್ಧತೆ ನಡೆಸಿದೆ. ಈ ವಿಮಾನ ನಿಲ್ದಾಣದ ಅಂದಾಜು ವೆಚ್ಚ 293.35 ಕೋಟಿ ರೂ.ಗಳಾಗಿದೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.

ಎ-321 ವಿಮಾನಗಳ ಸುರಕ್ಷಿತ ಸಂಚಾರಕ್ಕೆ ಅಗತ್ಯವಾದ ಹೊಸ ರನ್ ವೇ ಹಾಗೂ ಟರ್ಮಿನಲ್‌ಗಳನ್ನು ನಿರ್ಮಿಸುವ ಕಾರ್ಯ ಶೀಘ್ರ ಆರಂಭವಾಗಲಿದೆ. ಇಲ್ಲಿ ಮಳೆ ನೀರು ಕೊಯ್ಲಿಗೂ ಬೃಹತ್ ಯೋಜನೆ ಸಿದ್ಧವಾಗಿದೆ.

ಪ್ರಸಕ್ತ ಬೆಳಗಾವಿ ವಿಮಾನ ನಿಲ್ದಾಣದಿಂದ ವಾರ್ಷಿಕವಾಗಿ 13,778 ಮಂದಿ ಪ್ರಯಾಣಿಕರು ಸಂಚರಿಸುತ್ತಿದ್ದಾರೆ. ವಿಮಾನ ನಿಲ್ದಾಣ ಮೇಲ್ದರ್ಜೆಗೇರಿದರೆ, ಪ್ರಯಾಣಿಕರ ಸಂಖ್ಯೆ 92,590ಕ್ಕೆ ಏರಿಕೆಯಾಗುವ ಸಾಧ್ಯತೆಯಿದೆ. ಈ ಸಂಖ್ಯೆ ಮುಟ್ಟಲು 2022-23ರ ತನಕ ಕಾಯಬೇಕಾಗುತ್ತದೆ. (ಪಿಟಿಐ)

English summary
A high-level environment ministry panel has accorded green signal to the development of no-frill airports at Kishangarh in Rajasthan's Ajmer and Belagavi in Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X