ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ಕೊರೊನಾ ಸುಳ್ಳು ಲೆಕ್ಕ, ಮೋದಿ ದೇಶದ ಜನತೆಯ ಕ್ಷಮೆಯಾಚಿಸಲಿ'

|
Google Oneindia Kannada News

ಬೆಳಗಾವಿ, ಮೇ 7: "ಕರ್ನಾಟಕದಲ್ಲಿ ಸುಮಾರು 5 ಲಕ್ಷ ಜನ, ದೇಶದಲ್ಲಿ ಸುಮಾರು 50 ಲಕ್ಷ ಜನ ಕೊರೊನಾದಿಂದ ಸತ್ತಿದ್ದಾರೆ ಎಂದು WHO ಹೇಳಿದೆ. ಆದರೆ ಸರ್ಕಾರ WHOಗೆ ಮಾಹಿತಿ ಇಲ್ಲ ಎಂದು ಯಾರೋ ಒಬ್ಬ ಅಧಿಕಾರಿಯ ಮೂಲಕ ಅವರ ಮಾತನ್ನು ತಿರಸ್ಕಾರ ಮಾಡಿದ್ದಾರೆ" ಎಂದು ಸಿದ್ದರಾಮಯ್ಯ ಆರೋಪಿಸಿದರು.

ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿದ್ದಾರಾಮಯ್ಯ, "ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸತ್ತವರ ಸಂಖ್ಯೆಯಲ್ಲಿ ಸುಳ್ಳು ಹೇಳುತ್ತಿವೆ. ಪ್ರಧಾನಿಗಳು, ಕೇಂದ್ರದ ಆರೋಗ್ಯ ಇಲಾಖೆ, ರಾಜ್ಯದ ಮುಖ್ಯಮಂತ್ರಿಗಳು, ಆರೋಗ್ಯ ಸಚಿವರು ಮತ್ತು ಆರೋಗ್ಯ ಇಲಾಖೆ ಎಲ್ಲರೂ ಸುಳ್ಳು ಹೇಳುತ್ತಿದ್ದಾರೆ ಎಂದು ಈ ಹಿಂದೆಯೇ ನಾನು ಹೇಳಿದ್ದೆ" ಎಂದು ಆರೋಪಿಸಿದರು.

ಪಿಎಸ್ಐ ಅಕ್ರಮದ ಹಿಂದಿನ ಕಿಂಗ್ ಪಿನ್ ಯಾರು: ಬಲ್ಲವರು ಇವರೊಬ್ಬರೇ!ಪಿಎಸ್ಐ ಅಕ್ರಮದ ಹಿಂದಿನ ಕಿಂಗ್ ಪಿನ್ ಯಾರು: ಬಲ್ಲವರು ಇವರೊಬ್ಬರೇ!

"ಚಾಮರಾಜನಗರದಲ್ಲಿ ಆಕ್ಸಿಜನ್‌ ಸಿಗದೆ ದುರಂತ ಸಾವಿಗೀಡಾದವರ ಉದಾಹರಣೆ ನೀಡಿದ್ದೆ. ಸರ್ಕಾರ ಆಕ್ಸಿಜನ್‌ ಸಿಗದೆ ಸತ್ತವರು 3 ಜನ ಎಂದಿತ್ತು, ನಿಜವಾಗಿ ಸತ್ತವರು 39 ಜನ. ಆಗಲೇ ಸತ್ಯ ಗೊತ್ತಾಗಿತ್ತು. ಸಾಕಷ್ಟು ಜನ ಕೊರೊನಾ ಬಂದು ಸತ್ತು ಹೋದ ಮಾಹಿತಿ ನನಗಿದೆ. ನಮ್ಮೂರ ಅಕ್ಕಪಕ್ಕದಲ್ಲಿ ಹಲವಾರು ಜನ ಸತ್ತಿದ್ದಾರೆ, ಈ ಲೆಕ್ಕ ಸರ್ಕಾರದ ಬಳಿ ಇದೆಯೇ"ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

"ಕೊರೊನಾದಿಂದ ದೇಶದಲ್ಲಿ ನಿಜವಾಗಿ ಎಷ್ಟು ಜನ ಸತ್ತಿದ್ದಾರೆ ಎಂಬ ಬಗ್ಗೆ ಸಾವಿನ ಗಣತಿ ಆಗಬೇಕು ಮತ್ತು ಸತ್ತವರ ಕುಟುಂಬದವರಿಗೆ 4 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ನಾನು ಒತ್ತಾಯಿಸುತ್ತೇನೆ. ಪ್ರಧಾನಮಂತ್ರಿಗಳು, ಆರೋಗ್ಯ ಸಚಿವರು, ಮುಖ್ಯಮಂತ್ರಿಗಳು ಜನರಿಗೆ ತಪ್ಪು ಮಾಹಿತಿ ನೀಡಿರುವುದರಿಂದ ದೇಶದ ಜನರ ಬಳಿ ಕ್ಷಮೆ ಕೇಳಬೇಕು"ಎಂದು ಸಿದ್ದರಾಮಯ್ಯ ಒತ್ತಾಯಿಸಿದರು.

ಮೋದಿ ತವರಲ್ಲಿ ದಯಾಮರಣ ಬಯಸಿದ ಮುಸ್ಲಿಂ ಮೀನುಗಾರರುಮೋದಿ ತವರಲ್ಲಿ ದಯಾಮರಣ ಬಯಸಿದ ಮುಸ್ಲಿಂ ಮೀನುಗಾರರು

 ಬಸವನಗೌಡ ಪಾಟೀಲ್‌ ಯತ್ನಾಳ್‌ ಅವರು ನಿನ್ನೆ ಮಾಧ್ಯಮಗಳ ಜೊತೆ ಮಾತನಾಡುವಾಗ

ಬಸವನಗೌಡ ಪಾಟೀಲ್‌ ಯತ್ನಾಳ್‌ ಅವರು ನಿನ್ನೆ ಮಾಧ್ಯಮಗಳ ಜೊತೆ ಮಾತನಾಡುವಾಗ

"ಬಸವನಗೌಡ ಪಾಟೀಲ್‌ ಯತ್ನಾಳ್‌ ಅವರು ನಿನ್ನೆ ಮಾಧ್ಯಮಗಳ ಜೊತೆ ಮಾತನಾಡುವಾಗ 'ದೆಹಲಿಯಿಂದ ಕೆಲವರು ಬಂದಿದ್ದರು, 2,500 ಕೋಟಿ ರೂಪಾಯಿ ಕೊಟ್ಟರೆ ನಿಮ್ಮನ್ನು ಮುಖ್ಯಮಂತ್ರಿ ಮಾಡುತ್ತೇವೆ, ಮಂತ್ರಿ ಆಗಲು 100 ಕೋಟಿ ಸಿದ್ಧ ಮಾಡಿಕೊಳ್ಳಿ ಎಂದಿದ್ದರು, ಆದರೆ ಇಷ್ಟು ಹಣ ನನ್ನ ಬಳಿ ಇರಲಿಲ್ಲ ಹಾಗಾಗಿ ಮುಖ್ಯಮಂತ್ರಿ, ಮಂತ್ರಿ ಆಗಲು ಸಾಧ್ಯವಾಗಿಲ್ಲ ಎಂದಿದ್ದಾರೆ. ಇವರ ಬಳಿ ಹಣ ಕೇಳಿದವರು ಯಾರು? ಅವರನ್ನು ಕಳಿಸಿದ್ದು ಯಾರು" ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

 ಯಡಿಯೂರಪ್ಪ ಎಷ್ಟು ದುಡ್ಡು ಕೊಟ್ಟು ಮುಖ್ಯಮಂತ್ರಿ ಆಗಿದ್ದರು?

ಯಡಿಯೂರಪ್ಪ ಎಷ್ಟು ದುಡ್ಡು ಕೊಟ್ಟು ಮುಖ್ಯಮಂತ್ರಿ ಆಗಿದ್ದರು?

"ಹಿಂದೆ ಯಡಿಯೂರಪ್ಪ ಎಷ್ಟು ದುಡ್ಡು ಕೊಟ್ಟು ಮುಖ್ಯಮಂತ್ರಿ ಆಗಿದ್ದರು? ಈಗಿನ ಮುಖ್ಯಮಂತ್ರಿಗಳು ಎಷ್ಟು ಕೊಟ್ಟಿದ್ದಾರೆ? ಮಂತ್ರಿಗಳು ಎಷ್ಟು ಕೊಟ್ಟಿದ್ದಾರೆ? ಈ ಎಲ್ಲವೂ ತನಿಖೆಯಾಗಿ ಸತ್ಯ ಗೊತ್ತಾಗಬೇಕು ಅಲ್ಲವೇ?

ಇಷ್ಟು ಹಣ ಕೇಳಲು ಅವರನ್ನು ಕಳಿಸಿದ್ದು ಯಾರು? ಬಿಜೆಪಿ ಅಧ್ಯಕ್ಷರು ಕಳುಹಿಸಿದರಾ? ಪ್ರಧಾನಿಗಳು ಕಳುಹಿಸಿದರಾ? ಅಮಿತ್‌ ಶಾ ಕಳುಹಿಸಿದರಾ? ಬೊಮ್ಮಾಯಿ ಅವರು ಎಷ್ಟು ದುಡ್ಡು ಕೊಟ್ಟು ಮುಖ್ಯಮಂತ್ರಿ ಆಗಿದ್ದಾರೆ? ಈ ಹಣ ಎಲ್ಲಿಂದ ಬಂತು? ಇದೆಲ್ಲ ಜನರಿಗೆ ಗೊತ್ತಾಗಬೇಕು"ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
 ನಾನು ತಿನ್ನುವುದಿಲ್ಲ, ತಿನ್ನುವವರಿಗೂ ಬಿಡುವುದಿಲ್ಲ ಎಂದು ಹೇಳುವ ಪ್ರಧಾನಿ

ನಾನು ತಿನ್ನುವುದಿಲ್ಲ, ತಿನ್ನುವವರಿಗೂ ಬಿಡುವುದಿಲ್ಲ ಎಂದು ಹೇಳುವ ಪ್ರಧಾನಿ

"ಬಸವರಾಜ ಬೊಮ್ಮಾಯಿ ಅವರದು ಹಗರಣಗಳ ಸರ್ಕಾರ. ಬರೀ ಗೃಹ ಇಲಾಖೆಯಲ್ಲಿ ಮಾತ್ರವಲ್ಲ, ಯಾವ ಯಾವ ಇಲಾಖೆಗಳಲ್ಲಿ ನೇಮಕಾತಿ ನಡೆದಿದೆ, ಅಲ್ಲೆಲ್ಲಾ ಭ್ರಷ್ಟಾಚಾರ ನಡೆದಿದೆ. ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರು 7/6/2021 ರಲ್ಲಿ ಪ್ರಧಾನಿಗಳಿಗೆ ಪತ್ರ ಬರೆದು ರಾಜ್ಯ ಬಿಜೆಪಿ ಸರ್ಕಾರ 40% ಕಮಿಷನ್‌ ಸರ್ಕಾರ, ಇಲ್ಲಿ ಕೆಲಸಗಳನ್ನು ಮಾಡಲು ಆಗುತ್ತಿಲ್ಲ ಎಂದು ದೂರಿದ್ದಾರೆ. ಈ ಪತ್ರ ಬರೆದು ವರ್ಷವಾಗುತ್ತಾ ಬಂದಿದೆ, ಮೋದಿ ಅವರು ಏನು ಕ್ರಮ ಕೈಗೊಂಡರು? ನಾನು ತಿನ್ನುವುದಿಲ್ಲ, ತಿನ್ನುವವರಿಗೂ ಬಿಡುವುದಿಲ್ಲ ಎಂದು ಹೇಳುವ ಪ್ರಧಾನಿಗಳು ತನಿಖೆ ಮಾಡಿಸಬೇಕಿತ್ತು ಅಲ್ಲವೇ?" ಎಂದು ಸಿದ್ದರಾಮಯ್ಯ ಬೇಸರ ವ್ಯಕ್ತ ಪಡಿಸಿದರು.

 ಸಿದ್ದರಾಮಯ್ಯ ಸರಕಾರದ ವಿರುದ ಗರಂ ಆಗಿದ್ದಾರೆ

ಸಿದ್ದರಾಮಯ್ಯ ಸರಕಾರದ ವಿರುದ ಗರಂ ಆಗಿದ್ದಾರೆ

"ನಾನು ತನಿಖೆಗೆ ಒತ್ತಾಯ ಮಾಡಿದರೆ ಗಾಳಿಯಲ್ಲಿ ಗುಂಡು ಹೊಡೆಯುತ್ತೇನೆ, ಯಾವುದೇ ಭ್ರಷ್ಟಾಚಾರ ನಡೆದಿಲ್ಲ ಎನ್ನುತ್ತಾರೆ. ಪಿ.ಎಸ್.ಐ ನೇಮಕಾತಿ ಪರೀಕ್ಷೆ ಯಾಕಪ್ಪ ರದ್ದು ಮಾಡಿದ್ದು? ಭ್ರಷ್ಟಾಚಾರ, ಅಕ್ರಮ ನಡೆದಿಲ್ಲ ಎಂದಾಗಿದ್ದರೆ ಪರೀಕ್ಷೆ ರದ್ದು ಮಾಡಿ, ಮರು ಪರೀಕ್ಷೆಗೆ ಆದೇಶ ಮಾಡುವ ಅಗತ್ಯ ಏನಿತ್ತು"ಎಂದು ಸಿದ್ದರಾಮಯ್ಯ ಸರಕಾರದ ವಿರುದ ಗರಂ ಆಗಿದ್ದಾರೆ.

English summary
False Covid Death Information, PM Modi Should Apologize The Country, Said Siddaramaiah. Know More,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X