• search
 • Live TV
ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿ: ಮತಾಂತರ ಆರೋಪದ ಮೇಲೆ ಕುಟುಂಬದ ಮೇಲೆ ಹಲ್ಲೆ

By ಒನ್ಇಂಡಿಯಾ ಡೆಸ್ಕ್
|
Google Oneindia Kannada News

ಬೆಳಗಾವಿ, ಜನವರಿ 02: ಬೆಳಗಾವಿ ಜಿಲ್ಲೆಯಲ್ಲಿ ತಮ್ಮ ನೆರೆಹೊರೆಯವರನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಿಸಿದ್ದಾರೆ ಎಂದು ಆರೋಪಿಸಿ ಬಲಪಂಥೀಯ ಹಿಂದುತ್ವ ಗುಂಪಿನ ಸದಸ್ಯರು ಕುಟುಂಬವೊಂದರ ಮೇಲೆ ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ.

ಡಿಸೆಂಬರ್ 29 ರಂದು ಬೆಳಗಾವಿ ಜಿಲ್ಲೆಯ ಮೂಡಲಗಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಪಾದ್ರಿ ಅಕ್ಷಯಕುಮಾರ ಕರಗಾಂವಿ ಅವರ ನಿವಾಸದಲ್ಲಿ ಪ್ರಾರ್ಥನೆ ನಡೆಸುತ್ತಿದ್ದ ವೇಳೆ ಬಲಪಂಥೀಯ ಗುಂಪಿನ ಸದಸ್ಯರು ಅವರ ಮನೆಗೆ ಏಕಾಏಕಿ ನುಗ್ಗಿದರು ಹಾಗೂ ಪ್ರಾರ್ಥನಾ ಅಧಿವೇಶನ ನಿಲ್ಲಿಸುವಂತೆ ಒತ್ತಾಯಿಸಿದರು ಎಂದು ಆರೋಪಿಸಲಾಗಿದೆ. ಕುಟುಂಬವು ತಮ್ಮ ನೆರೆಹೊರೆಯವರನ್ನು ಅಕ್ರಮವಾಗಿ ಮತಾಂತರಿಸುತ್ತಿದ್ದಾರೆ ಎಂದು ಆರೋಪಿಸಿ ಪಾದ್ರಿ ಕುಟುಂಬದ ಮೇಲೆ ಹಲ್ಲೆ ನಡೆಸಿದರು ಎಂದು ವರದಿ ಬಂದಿದೆ.

ಪ್ರಸ್ತುತ ಬೆಳಗಾವಿಯ ಆಸ್ಪತ್ರೆಯಲ್ಲಿ ಸುಟ್ಟಗಾಯಗಳಿಂದ ಚಿಕಿತ್ಸೆ ಪಡೆಯುತ್ತಿರುವ ಮಹಿಳೆಯ ಮೇಲೆ ಜಾಗೃತದಳದವರು ಬಿಸಿ ಸಾಂಬಾರು/ಸಾರು ಎರಚಿದ್ದಾರೆ ಎಂದು ಪಾದ್ರಿಯ ಪತ್ನಿ ಕವಿತಾ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಯತ್ನಿಸಿದ ಮತ್ತೊಬ್ಬ ಮಹಿಳೆಯ ಮೇಲೂ ಹಲ್ಲೆ ನಡೆಸಲಾಗಿದೆ ಎಂದು ದೂರುದಾರರು ಹೇಳಿದ್ದಾರೆ.

ಘಟನೆಯ ನಂತರ ಘಟಪ್ರಭಾ ಪೊಲೀಸರು ಏಳು ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಬಂಧಿತರನ್ನು ಶಿವಾನಂದ ಶಿವಲಿಂಗಪ್ಪ, ರಮೇಶ ದಂಡಾಪುರ, ಪರಸಪ್ಪ ಬಾಬು, ಫಕೀರಪ್ಪ ಬಾಗೇವಾಡಿ, ಕೃಷ್ಣ ಕಾಂತಿಕರ್, ಚಾತನ್ ರಾಜೇಂದ್ರ ಮತ್ತು ಮಹಾಂತೇಶ ಬಸಲಿಂಗಪ್ಪ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಮೂಡಲಗಿ ನಿವಾಸಿಗಳು ಎಂದು ತಿಳಿದು ಬಂದಿದೆ.

ಆರೋಪಿಗಳ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್‌ಗಳಾದ ಸೆಕ್ಷನ್ 143 (ಗಲಭೆ), 448 (ಅತಿಕ್ರಮಣ), 323 (ಸ್ವಯಂಪ್ರೇರಿತವಾಗಿ ಗಾಯಗೊಳಿಸುವುದು), 392 (ದರೋಡೆ), 506 (ಅಪರಾಧ ಬೆದರಿಕೆ), ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. (ದೌರ್ಜನ್ಯ ತಡೆ) ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮತಾಂತರ ನಿಷೇಧ ವಿಧೇಯಕ ಬಗ್ಗೆ:
ಮತಾಂತರ ನಿಷೇಧ ವಿಧೇಯಕ ತಂದಿರುವುದು ಯಾವುದೇ ಧರ್ಮದ ವಿರುದ್ಧವಲ್ಲ ಅಥವಾ ಯಾವುದೇ ಧರ್ಮದ ಹಕ್ಕನ್ನು ಮೊಟಕುಗೊಳಿಸಲು ಅಲ್ಲ. ಈಗಾಗಲೇ ಎಂಟು ರಾಜ್ಯಗಳು ಈ ವಿಧೇಯಕ ತಂದಿವೆ. ಕರ್ನಾಟಕ ಒಂಭತ್ತನೇ ರಾಜ್ಯವಾಗಲಿದೆ. ಇತ್ತೀಚೆಗೆ ಮತಾಂತರ ದೊಡ್ಡ ಪಿಡುಗಾಗಿದ್ದು, ಇದೇ ಸದನದಲ್ಲಿ ಶಾಸಕರ ತಾಯಿಯೊಬ್ಬರು ಮತಾಂತರ ಆಗಿದ್ದನ್ನು ನೋಡಿದ್ದೇವೆ.

ಮತಾಂತರ ಯಾವ ರೀತಿ ಆಗುತ್ತಿದೆ ಎಂದು ನಮ್ಮೆಲ್ಲರ ಗಮನಕ್ಕೆ ಇದೆ. ಉಡುಪಿಯಲ್ಲಿ ಒಂದು ಆತ್ಮಹತ್ಯೆ ಆಯ್ತು, ಮಂಗಳೂರಿನಲ್ಲಿ ಒಂದೇ ಕುಟುಂಬದ 4 ಜನ ಆತ್ಮಹತ್ಯೆ ಮಾಡಿಕೊಂಡರು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಇತ್ತೀಚೆಗೆ ಮತಾಂತರ ನಿಷೇಧ ಮಾಡಲು ಹಲವರು ಒತ್ತಾಯಿಸಿದ್ದು, ಹೀಗಾಗಿಯೇ ಮತಾಂತರ ನಿಷೇಧ ಕಾಯ್ದೆಯನ್ನು ತರುತ್ತಿದ್ದೇವೆ. ಬಲವಂತದ ಮತಾಂತರಕ್ಕೆ ಮಾತ್ರ ಶಿಕ್ಷೆಯ ಜೊತೆಗೆ ದಂಡವಿದೆ. ಉತ್ತರ ಪ್ರದೇಶ, ಮಧ್ಯಪ್ರದೇಶದಲ್ಲಿ ಈಗಾಗಲೇ ಕಾಯ್ದೆ ಜಾರಿಯಾಗಿದೆ. ತಮಿಳುನಾಡಿನಲ್ಲೂ ಕಾಯ್ದೆ ತರಬೇಕಾಗಿತ್ತು ಆದರೆ ಆಗಲಿಲ್ಲ. ಈ ಕಾಯ್ದೆ ಹಿಂದಿನ ಸರ್ಕಾರದ ಶಿಶು, ನಮ್ಮದಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ.

''ಮತಾಂತರ ನಿಷೇಧ ವಿಧೇಯಕ ಅನೇಕ ರೀತಿಯಲ್ಲಿ ಪ್ರಚಾರ ಪಡೆದುಕೊಂಡಿದೆ. ಪರ- ವಿರೋಧ ಚರ್ಚೆ ನಡೆಯುತ್ತಿದೆ. ಶಾಂತಿ ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಬದ್ಧತೆಯಾಗಿದ್ದು, ಮತಾಂತರ ಆಗುವುದನ್ನು ತಡೆಯುವುದಿಲ್ಲ. ಅನೇಕ ಮಠಾಧೀಶರು, ಸಾಮಾಜಿಕ ಹೋರಾಟಗಾರರು ಈ ಪಿಡುಗನ್ನು ತಡೆಗಟ್ಟಿ ಎಂದು ಹೇಳುತ್ತಿದ್ದಾರೆ. ಆಮಿಷ ಹಾಗೂ ಬಲವಂತದ ಮತಾಂತರ ತಡೆಗಟ್ಟಿ ಶಿಕ್ಷೆ ನೀಡುವುದು ಇದರ ಉದ್ದೇಶವಾಗಿದೆ,'' ಎಂದರು.

Recommended Video

   Mahindra SUV ಕಾರ್ ಮೇಲೆ ಅಟ್ಯಾಕ್ ಮಾಡಿದ ಹುಲಿ | Oneindia Kannada

   ''ಮತಾಂತರ ಆಗಲು ಇಚ್ಚೆ ಇರುವ ವ್ಯಕ್ತಿಗೆ ಸ್ವಾತಂತ್ರ್ಯ ಇದೆ. ಮೂವತ್ತು ದಿನಗಳ ಮುಂಚೆ ಜಿಲ್ಲಾಧಿಕಾರಿಗೆ ತಿಳಿಸಬೇಕು. 21 ದಿನಗಳ ಒಳಗೆ ಜಿಲ್ಲಾಧಿಕಾರಿ ಮುಂದೆ ಹಾಜರಾಗಿರಬೇಕು. ಅದನ್ನು ಜಿಲ್ಲಾಡಳಿತ ನೋಟಿಸ್ ಬೋರ್ಡ್‌ನಲ್ಲಿ‌ ಹಾಕಬೇಕು. ಬಲವಂತದ ಮತಾಂತರ ಮಾಡಿದರೆ ಯಾವ ಶಿಕ್ಷೆ ಅಂತ ಇರಲಿಲ್ಲ, ಈಗ ನಾವು ತರುತ್ತಿದ್ದೇವೆ. ಬಲವಂತದ ಮತಾಂತರ ಮಾಡಿದರೆ ಕಾನೂನು ಕ್ರಮ ತೆಗೆದುಕೊಳ್ಳಬಹುದು ಎಂದು ತಿಳಿಸಿದರು.

   English summary
   Members of a right-wing Hindutva group allegedly assaulted a family, accusing them of converting their neighbours to Christianity in Mudalagi, Belagavi district.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X