ಸುವರ್ಣಸೌಧದ ಮುಂದೆ ರೈತರ ಬೃಹತ್ ಹೋರಾಟ
ಬೆಳಗಾವಿ, ಡಿಸೆಂಬರ್ 10: ಕೇಂದ್ರ ಸರ್ಕಾರದ ನೂತನ ಕೃಷಿ ನೀತಿಗಳನ್ನು ವಿರೋಧಿಸಿ ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಬೆಳಗಾವಿಯ ಸುವರ್ಣ ವಿಧಾನಸೌಧದ ಮುಂದೆ ರೈತ ಸಂಘಟನೆಗಳ ಸದಸ್ಯರು ಬೃಹತ್ ಪ್ರತಿಭಟನೆ ನಡೆಸಿದರು, ರಸ್ತೆ ತಡೆ ಮಾಡಿದರು.
ಗುರುವಾರ ರೈತರು ಸುವರ್ಣ ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸಿದರು. ಸರ್ವೀಸ್ ರಸ್ತೆಯನ್ನು ತಡೆದು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ರೈತರು ಸುವರ್ಣಸೌಧಕ್ಕೆ ನುಗ್ಗದಂತೆ ತಡೆಯಲು ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಸದಸ್ಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಪೊಲೀಸರ ಜೊತೆ ವಾಗ್ವದ ನಡೆಸಿದ ರೈತರು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ಬೆಂಗಳೂರಿನಲ್ಲಿನಲ್ಲಿ ರೈತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನ ನಡೆಸಿದರು.

ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ರಾಷ್ಟ್ರೀಯ ಹೆದ್ದಾರಿ 4ರ ಪಕ್ಕದಲ್ಲಿರುವ ಸರ್ವೀಸ್ ರಸ್ತೆಯಲ್ಲಿ ಪೊಲೀಸರು ತಡೆದರು. ರಸ್ತೆಯಲ್ಲಿಯೇ ಅಡುಗೆ ಮಾಡಿದ ರೈತರು ಅಲ್ಲಿಯೇ ಕುಳಿತು ಊಟ ಮಾಡಿದರು.

ಪ್ರತಿಭಟನೆ ಮುಂದುವರೆಸಿದ ರೈತರು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೃಷಿ ನೀತಿಗಳನ್ನು ವಾಪಸ್ ಪಡೆಯದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.












Click it and Unblock the Notifications