ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಮಿತ್ ಶಾ ಆಗಮನ; ಬೆಳಗಾವಿಯಲ್ಲಿ ರೈತರ ಪ್ರತಿಭಟನೆ

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಜನವರಿ 17: ನೂತನ ಕೃಷಿ ನೀತಿಗಳನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ಬೆಳಗಾವಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಗೃಹಸಚಿವ ಅಮಿತ್ ಶಾ ನಗರಕ್ಕೆ ಆಗಮಿಸುತ್ತಿದ್ದು, ಈ ಹಿನ್ನಲೆಯಲ್ಲಿ ಪ್ರತಿಭಟನೆ ನಡೆಯುತ್ತಿದೆ.

ಭಾನುವಾರ ಬೆಳಗ್ಗೆ ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ರೈತ ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪ್ರತಿಭಟನೆಯನ್ನು ಮಾಡಲಾಗುತ್ತಿದೆ.

ಬೆಳಗಾವಿಗೆ ಅಮಿತ್ ಶಾ; ಸಮಾವೇಶದಲ್ಲಿ 2 ಲಕ್ಷ ಜನರು ಭಾಗಿ ಬೆಳಗಾವಿಗೆ ಅಮಿತ್ ಶಾ; ಸಮಾವೇಶದಲ್ಲಿ 2 ಲಕ್ಷ ಜನರು ಭಾಗಿ

ರೈತ ಮುಖಂಡ ಚೂನಪ್ಪ ಪೂಜಾರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, 'ಅಮಿತ್ ಶಾ ಹಠಾವೋ... ದೇಶ ಬಚಾವೋ' ಎಂದು ಘೋಷಣೆ ಕೂಗುತ್ತಿದ್ದಾರೆ. 'ರೈತ ವಿರೋಧಿ ಕಾನೂನುಗಳು ವಾಪಸ್ ಆಗಲೇಬೇಕು' ಎಂದು ಘೋಷಣೆಗಳನ್ನು ಹಾಕುತ್ತಿದ್ದಾರೆ.

ರೈತರ ಪ್ರತಿಭಟನೆ: ಜನವರಿ 19ಕ್ಕೆ ಕೇಂದ್ರ ಮತ್ತು ರೈತ ಸಂಘಟನೆಗಳ ನಡುವೆ ಮತ್ತೊಂದು ಸುತ್ತಿನ ಸಭೆರೈತರ ಪ್ರತಿಭಟನೆ: ಜನವರಿ 19ಕ್ಕೆ ಕೇಂದ್ರ ಮತ್ತು ರೈತ ಸಂಘಟನೆಗಳ ನಡುವೆ ಮತ್ತೊಂದು ಸುತ್ತಿನ ಸಭೆ

Farmers Protest Against Farm Laws Ahead Of Amit Shah Visit

ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ವಿರುದ್ಧವೂ ಧಿಕ್ಕಾರವನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ. ಕೂಡಲೇ ನೂತನ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸುತ್ತಿದ್ದಾರೆ.

 ರೈತ ವಿರೋಧಿ ರಾಜಕಾರಣಿಗಳಿಗೆ ಪ್ರವೇಶವಿಲ್ಲ; ಉತ್ತರಾಖಂಡ ಗ್ರಾಮಸ್ಥರ ವಿಭಿನ್ನ ಪ್ರತಿಭಟನೆ ರೈತ ವಿರೋಧಿ ರಾಜಕಾರಣಿಗಳಿಗೆ ಪ್ರವೇಶವಿಲ್ಲ; ಉತ್ತರಾಖಂಡ ಗ್ರಾಮಸ್ಥರ ವಿಭಿನ್ನ ಪ್ರತಿಭಟನೆ

ಚೆನ್ನಮ್ಮ ವೃತ್ತದಲ್ಲಿ ಅರೆಬೆತ್ತಲೆ ಊರುಳು ಸೇವೆ ಮಾಡಿದ ರೈತರು. ಚನ್ನಮ್ಮ ವೃತ್ತದಿಂದ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ತನಕ ಉರುಳು ಸೇವೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಬೆಳಗಾವಿಯ ರೈತ ಸಂಘಟನೆ ಮುಖಂಡರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಅಮಿತ್ ಶಾ ಆಗಮನ; ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಬಿಜೆಪಿಯ 'ಜನಸೇವಕ' ಸಮಾವೇಶ ಇಂದು ನಡೆಯಲಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.

English summary
Farmer's protest against farm laws ahead of the home minister Amit Shah visit to Belagavi. Amit shah to address BJP's Jana Sevak Samavesha in Belagavi today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X