ಬೆಳಗಾವಿ; ಬೈಪಾಸ್ ನಿರ್ಮಾಣಕ್ಕೆ ಕೃಷಿ ಭೂಮಿ, ರೈತರ ಪ್ರತಿಭಟನೆ
ಬೆಳಗಾವಿ, ಫೆಬ್ರವರಿ 11: ಹಲಗಾ - ಮಚ್ಛೆ ಬೈಪಾಸ್ ರಸ್ತೆ ಕಾಮಗಾರಿ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದೆ. ಮೂರು ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಬೆಳಗಾವಿ ತಾಲೂಕಿನ ಮಚ್ಛೆ ಬಳಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಗುರುವಾರ ಪುಟ್ಟ-ಪುಟ್ಟ ಮಕ್ಕಳ ಜೊತೆ ತಲೆ ಮೇಲೆ ಕಲ್ಲು ಇಟ್ಟುಕೊಂಡು ರೈತರು ಪ್ರತಿಭಟನೆ ನಡೆಸಿದರು.
ತಲೆ ಮೇಲೆ ಇಟ್ಟಿಗೆ, ಕಲ್ಲು ಇಟ್ಟು ಧರಣಿಯಲ್ಲಿ ಭಾಗಿಯಾದ ರೈತರ ಮಕ್ಕಳು ಯಾವುದೇ ಕಾರಣಕ್ಕೂ ಬೈಪಾಸ್ ರಸ್ತೆ ಕಾಮಗಾರಿ ಆರಂಭಿಸಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದರು.

ಮೂಲ ಕಾಮಗಾರಿ ಬಿಟ್ಟು ಬೇರೆ ಮಾರ್ಗದಲ್ಲಿ ಕಾಮಗಾರಿ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಫಲವತ್ತಾದ ಜಮೀನನ್ನು ಬೈಪಾಸ್ ರಸ್ತೆಗಾಗಿ ಬಿಟ್ಟು ಕೊಡುವುದಿಲ್ಲ ಎಂದು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಹಲಗಾ ಗ್ರಾಮದಿಂದ ಮಚ್ಛೆವರೆಗೂ 9.5ಕಿಮೀ ಬೈಪಾಸ್ ರಸ್ತೆ ಕಾಮಗಾರಿ ನಡೆಯಲಿದೆ. ಇದಕ್ಕಾಗಿ ಸಾವಿರಕ್ಕೂ ಹೆಚ್ಚು ಸಣ್ಣಪುಟ್ಟ ರೈತರ ಸುಮಾರು 175 ಎಕರೆ ಜಮೀನನ್ನು ಎನ್‌ಎಚ್‌ಎಐ ಸ್ವಾಧೀನ ಪಡಿಸಿಕೊಂಡಿದೆ.
ಬೆಳಗಾವಿ ತಾಲೂಕಿನ ಮಚ್ಛೆ ಬಳಿ ರೈತರು ತಲೆ ಮೇಲೆ ಇಟ್ಟಿಗೆ, ಕಲ್ಲು ಇಟ್ಟು ಧರಣಿ ನಡೆಸುತ್ತಿದ್ದಾರೆ. ಹಲಗಾ - ಮಚ್ಛೆ ಬೈಪಾಸ್ ರಸ್ತೆಗೆ ಫಲತ್ತಾದ ಭೂಮಿಯನ್ನು ಸ್ವಾಧೀನ ಮಾಡಿಕೊಂಡಿದ್ದಾರೆ ಎಂಬುದು ರೈತರ ಆರೋಪವಾಗಿದೆ.
— oneindiakannada (@OneindiaKannada) February 11, 2021
link:https://t.co/lLQ9yqgMtS#Belagavi #FarmersProtest pic.twitter.com/spknM9XlYy
ಅಧಿಕಾರಿಗಳು ಶೇ 75ರಷ್ಟು ರೈತರಿಗೆ ಪರಿಹಾರ ನೀಡಿದ್ದೇವೆ ಎಂದು ಹೇಳುತ್ತಿದ್ದಾರೆ. ಆದರೆ ಯಾವುದೇ ರೈತರಿಗೆ ಪರಿಹಾರ ನೀಡಿಲ್ಲ ಎಂದು ರೈತರು ಆರೋಪ ಮಾಡುತ್ತಿದ್ದು,ಕಾಮಗಾರಿ ಆರಂಭಿಸಬಾರದು ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ.
ಬೈಪಾಸ್ ರಸ್ತೆ ಕಾಮಗಾರಿ ಆರಂಭಿಸದಂತೆ ಹೈಕೋರ್ಟ್ ಆದೇಶ ನೀಡಿದೆ. ಆದರೆ, ಕಾನೂನು ಬಾಹಿರವಾಗಿ ಕಾಮಗಾರಿ ಆರಂಭಿಸಲಾಗುತ್ತಿದೆ ಎಂದು ರೈತರು ಆರೋಪ ಮಾಡುತ್ತಿದ್ದಾರೆ.












Click it and Unblock the Notifications